ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ:
ದೇಶದಾದ್ಯಂತ ಇರುವ ಎಲ್ಲ ರೈತರಿಗೆ ಮತ್ತೊಮ್ಮೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ ನೀಡಲಾಗಿದೆ. ನೀವು ಈಗಾಗಲೇ ಬೆಳೆ ವಿಮೆ ಮಾಡಿಸಿದರೆ ಅಥವಾ ಮಾಡಿಸದೆ ಇದ್ದರೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್ ನೀಡಲಾಗಿದೆ. ಕೃಷಿ ಇಲಾಖೆಯ ಬೆಳೆ ವಿಮೆಗೆ ಸಂಬಂಧಪಟ್ಟಂತೆ 2022ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಒಟ್ಟು 36 ಆಹಾರ ಎಣ್ಣೆಕಾಳು ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳನ್ನು ಅದಿ ಸೂಚಿಸಲಾಗಿದ್ದು. ತಾಲ್ಲೂಕಿನ ಮುಖ್ಯ ಬೆಳೆಗಳನ್ನು ತಾಲೂಕಿನ ಮುಖ್ಯ ಬೆಳೆಗಳನ್ನು ಗ್ರಾಮಪಂಚಾಯಿತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಸೂಚಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರು ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ 29 ಪ್ರೀಮಿಯಂ ಮೊತ್ತವನ್ನು ಪಾವತಿಸಬೇಕಾಗುತ್ತದೆ. ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಶೇಕಡ 5ರಷ್ಟು ಪ್ರೀಮಿಯಂ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಬೆಳೆ ಸಾಲ ಪಡೆಯದ ರೈತರು ಯೋಜನೆಯಲ್ಲಿ ಪಾಲ್ಗೊಳ್ಳಲು ಹತ್ತಿರದ ಬ್ಯಾಂಕ್ ಅಥವಾ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ-1 ಕೇಂದ್ರಗಳಿಗೆ ಭೇಟಿ ನೀಡಬಹುದು.
ಯೋಜನೆಯಲ್ಲಿ ಪಾಲ್ಗೊಳ್ಳಲು ಬೇಕಾಗುವ ದಾಖಲಾತಿಗಳು:
1) ಆಧಾರ್ ಕಾರ್ಡ್
2) ಹೊಲದ ಪಹಣಿ ಅಥವಾ ಆರ್ಟಿಸಿ
3) ಬ್ಯಾಂಕ್ ಪಾಸ್ ಬುಕ್ ನ ಪ್ರತಿ
ಹಾಗೂ ಬ್ಯಾಂಕ್ ಖಾತೆಯನ್ನು ತೆಗೆದು ವಿಮಾ ಕಂತನ್ನು ಕಟ್ಟಬೇಕು ಬೆಳೆ ವಿಮೆ ಯೋಜನೆ ಅಡಿಯಲ್ಲಿ ಪಾಲ್ಗೊಳ್ಳುವ ರೈತರು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಅರ್ಜಿ ನಮೂನೆಯಲ್ಲಿ ನಮೂದಿಸತಕ್ಕದ್ದು
2022 ಮುಂಗಾರಿ ಹಂಗಾಮಿನಲ್ಲಿ ಪ್ರಕೃತಿವಿಕೋಪ ಆಲಿಕಲ್ಲು ಮಳೆ ಭೂಕುಸಿತ ಮಳೆ ಇರುವುದರಿಂದ ಬೆಳೆ ನಾಶ ಸಂಭವಿಸಿದ್ದಲ್ಲಿ ಪ್ರತ್ಯೇಕವಾಗಿ ನಷ್ಟ ಪರಿಹಾರವನ್ನು ನೀಡಲಾಗುವುದು. ಯೋಜನೆ ಅಡಿಯಲ್ಲಿ ರೈತರು ಪಾಲ್ಗೊಳ್ಳಲು ಕೊನೆಯ ದಿನಾಂಕ ಗಳು 5 ಹಂತದಲ್ಲಿದ್ದು ಜೂನ್ 15 ಜೂನ್ 30 ಜುಲೈ 15 ಜುಲೈ 31 ಆಗಸ್ಟ್16 ಇದೆ ಜಿಲ್ಲಾವಾರು ಬೆಳೆವಾರು ಕೊನೆಯ ದಿನಾಂಕದ ವಿವರವನ್ನ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಕೇಳಿ ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ಸಂರಕ್ಷಣೆ ತಂತ್ರಾಂಶದ ಮೂಲಕ ಪಡೆಯಬಹುದು.