Bengaluru Bandh – ಕಾವೇರಿ ವಿವಾದ, ಇದೇ ಮಂಗಳವಾರ ಬೆಂಗಳೂರು ಬಂದ್ ಗೆ ಕರೆ

WhatsApp Image 2023 09 24 at 18.32.49

ತಮಿಳುನಾಡಿ(Tamilnaadu)ಗೆ ಕಾವೇರಿ ನೀರು(Kaveri water) ಹರಿಸಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆಪ್ಟೆಂಬರ್  26ರಂದು (ಮಂಗಳವಾರ) ಬೆಂಗಳೂರು ಬಂದ್(Bengaluru bandh) ಗೆ ಕರೆ ನೀಡಿವೆ. 150ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್ ಗೆ ಬೆಂಬಲ ಸೂಚಿಸಿವೆ. ಈ  ಲೇಖನದ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ. ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ

ಕಾವೇರಿ ನೀರನ್ನು ನಂಬಿಕೊಂಡಿರುವ ಜಿಲ್ಲೆಗಳಲ್ಲಿ ಕಾವೇರಿ ಕಿಚ್ಚು ಜೋರಾಗಿದೆ:

ಶನಿವಾರ ಮಂಡ್ಯ ಬಂದ್ ಬಹುತೇಕ ಯಶಸ್ವಿಯಾಗಿದ್ದು, ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬೆಂಗಳೂರು ಬಂದ್ ದಿನ ಟೌನ್ ಹಾಲ್  ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ.

WhatsApp Image 2023 09 21 at 6.52.49 AM

ವಿವಿಧ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು, ಅಧಿಕೃತ ಘೋಷಣೆ ಇನ್ನಷ್ಟೇ ಮಾಡಬೇಕಿದೆ. ಈ ಮಧ್ಯೆ, ತಮಿಳುನಾಡಿಗೆ ನೀರು ಬಿಡುವ ಸರ್ಕಾರದ ನಿರ್ಧಾರ ಖಂಡಿಸಿ ಮಂಡ್ಯ, ಮದ್ದೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ಭಾರಿ ಪ್ರತಿಭಟನೆ ನಡೆದಿದೆ.

ಬೆಂಗಳೂರು ಬಂದ್ ದಿನ ಟೌನ್ ಹಾಲ್  ನಿಂದ ಫ್ರೀಡಂ ಪಾರ್ಕ್(Freedom Park) ವರೆಗೆ ಬೃಹತ್ ರ್ಯಾಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಕೆಲವೇ ಕ್ಷಣಗಳಲ್ಲಿ ಸಭೆಯಿಂದ ಬಂದ್ ದಿನಾಂಕ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ಆ ಬಳಿಕ, ಬಂದ್ ದಿನ ಏನೆಲ್ಲ ಸೇವೆಗಳು ಲಭ್ಯವಿರಲಿವೆ, ಯಾವೆಲ್ಲ ಸೇವೆಗಳು ಬಂದ್ ಆಗಲಿವೆ ಎಂಬ ಮಾಹಿತಿ ದೊರೆಯಲಿದೆ.

ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಎಲ್ಲರೂ ಒಟ್ಟಾಗಿ ಹೋಗೋಣ ಎಂದು ಸಂಘಟನೆ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ.

ರಾಜ್ಯದ ಆಡಳಿತ ಶಕ್ತಿ ಕೇಂದ್ರವಾಗಿರುವ ಬೆಂಗಳೂರಿನಲ್ಲಿ ಪ್ರತಿಭಟನೆ, ಬಂದ್ ನಡೆಸಿದರೆ ರಾಜ್ಯ ಸರ್ಕಾರದ ಗಮನವನ್ನು ಹೆಚ್ಚಿನ ಮಟ್ಟಿಗೆ ಸೆಳೆದು ಕೇಂದ್ರದ ಮೇಲೆ ಮತ್ತು ಕಾನೂನಾತ್ಮಕವಾಗಿ ಕಾವೇರಿ ನೀರಿಗಾಗಿ ಮುಂದಿನ ದಿನಗಳಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹೋರಾಟ ನಡೆಸಲು ಉತ್ತಮ ಎಂದು ವಿವಿಧ ಸಂಘಟನೆಗಳು ತಿಳಿಸಿವೆ. ಬಂದ್ ಸಂಘಟಕರು ಮಂಗಳವಾರ ತಮ್ಮ ಉದ್ಯೋಗಿಗಳಿಗೆ ರಜೆ ಘೋಷಿಸುವ ಮೂಲಕ ಐಟಿ ಕಂಪನಿಗಳು(IT companies), ಶಾಲಾ-ಕಾಲೇಜುಗಳು, ಉತ್ಪಾದನಾ ಕೈಗಾರಿಕೆಗಳು ಮತ್ತು ಸಾರಿಗೆ ಸಂಸ್ಥೆಗಳಿಂದ ಸಂಪೂರ್ಣ ಸಹಕಾರವನ್ನು ಕೋರಿದ್ದಾರೆ. ಬಂದ್ ಕರೆಗೆ ಸರಕಾರದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ


tel share transformed

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!