2nd puc result

2nd PUC Result : ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ರೀಸಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Group Telegram Group

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು (Department of Pre-University Education, Karnataka) 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ(2nd PUC Result)ವನ್ನು ಇಂದು ಅಂದರೆ ಏಪ್ರಿಲ್ 10 ರಂದು ಪ್ರಕಟಿಸಲು ತೀರ್ಮಾನಿಸಿದೆ. ಎಷ್ಟು ಗಂಟೆಗೆ ಫಲಿತಾಂಶ ಹೊರ ಬೀಳಲಿದೆ?, ಪಿಯುಸಿ ರಿಸಲ್ಟ್ ಚೆಕ್ ಮಾಡುವ ವಿಧಾನ ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಕೊನೆಗೂ ಬಂದೇಬಿಡ್ತು ಪಿಯುಸಿ ರಿಸಲ್ಟ್ ದಿನ :

ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದು ಇನ್ನೇನು ಒಂದು ತಿಂಗಳು ಕೂಡ ಕಳೆದಿಲ್ಲ, ಅಷ್ಟರಲ್ಲಿ ಫಲಿತಾಂಶವನ್ನು ಹೊರಹಾಕಲು ಮಂಡಳಿಯು ಮೌಲ್ಯಮಾಪನವನ್ನು ಪೂರೈಸಿಕೊಂಡು ಕಾಯುತ್ತಿದೆ. ಇಂದು ಏಪ್ರಿಲ್ 10 ರಂದು ಬೆಳಗ್ಗೆ 10 ಗಂಟೆಯ ನಂತರ ಸುದ್ದಿಗೋಷ್ಠಿಯನ್ನು ನಡೆಸಿ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು.
ಕೆಎಸ್‌ಇಎಬಿಯು ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ಟಾಪರ್‌ಗಳ ಪಟ್ಟಿ ಹಾಗೂ ಒಟ್ಟಾರೆ ಉತ್ತೀರ್ಣ ಶೇಕಡಾವಾರು ಮತ್ತು ಇತರ ಸಂಬಂಧಿತ ಮಾಹಿತಿಯೊಂದಿಗೆ ಪತ್ರಿಕಾಗೋಷ್ಠಿಯ ಮೂಲಕ ಫಲಿತಾಂಶಗಳನ್ನು ಅನಾವರಣಗೊಳಿಸಲು ಯೋಜಿಸಿದೆ.

ವಿಶೇಷ ಸೂಚನೆ : ವಿದ್ಯಾರ್ಥಿಗಳೇ ದ್ವಿತೀಯ ಪಿಯುಸಿ ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಮಾತ್ರ ಪ್ರಕಟಿಸಲಾಗುತ್ತದೆ. ರಿಸಲ್ಟ್ ನೋಡುವ ಯಾವುದೇ ಅಧಿಕೃತ ಮೊಬೈಲ್ ಆಪ್ಲಿಕೇಶನ್ ಗಳನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಫೇಕ್ ಅಪ್ಲಿಕೇಶನ್ ಗಳಿಂದ ಎಚ್ಚರ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2024 ಡೌನ್‌ಲೋಡ್ ಮಾಡುವುದು ಹೇಗೆ?:

ಹಂತ 1: ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ  https://karresults.nic.in/slpufirst.asp

ಹಂತ 2: ಮುಖಪುಟದಲ್ಲಿ, ಕರ್ನಾಟಕ II PUC ಫಲಿತಾಂಶ 2024 ಗಾಗಿ ಲಭ್ಯವಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.

ಹಂತ 3: ಹೊಸ ವಿಂಡೋ ತೆರೆಯುತ್ತದೆ, ನಿಮ್ಮ ಲಾಗಿನ್ ವಿವರಗಳಾದ ರೆಜಿಸ್ಟರ್ ಸಂಖ್ಯೆ ಮತ್ತು ವಿಷಯವನ್ನು(Subject) ನಮೂದಿಸಿ.

ಹಂತ 4: ನಿಮ್ಮ ಕರ್ನಾಟಕ 2ನೇ ಪಿಯುಸಿ 2024 ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

ಹಂತ 5: ಅದನ್ನು ಡೌನ್‌ಲೋಡ್ ಮಾಡಿ ಮತ್ತು ಹೆಚ್ಚಿನ ಉಲ್ಲೇಖಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಪಡೆಯಿರಿ.

ಈ ಮೇಲಿನ ಹಂತಗಳನ್ನು ಅನುಸರಿಸುವುದರಿಂದ ನೀವು ಮನೆಯಲ್ಲಿಯೇ ಕುಳಿತುಕೊಂಡು ನಿಮ್ಮ ಫಲಿತಾಂಶವನ್ನು ನೋಡಿಕೊಳ್ಳಬಹುದು. ಪಿಯುಸಿ ಫಲಿತಾಂಶಕ್ಕೆ ಕಾಯುತ್ತಿರುವ ಎಲ್ಲರಿಗೂ ಶುಭವಾಗಲಿ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..

WhatsApp Group Join Now
Telegram Group Join Now

Popular Categories