ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸ್ವಾವಲಂಬಿ ಸಾರಥಿ ಯೋಜನೆ(swavalambi saarathi scheme)ಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದರೂ ಆಟೋರಿಕ್ಷಾ, ಟ್ಯಾಕ್ಸಿ ಅಥವಾ ಸರಕು ವಾಹನಗಳನ್ನು ಖರೀದಿಸಲು ಯೋಚಸಿತ್ತಿದ್ದರೆ, ಈ ಯೋಜನೆ ಬಗ್ಗೆ ನೀವು ತಿಳಿಯಲೇಬೇಕು. ಈ ಯೋಜನೆಯ ಅಡಿಯಲಿ 3 ಲಕ್ಷದ ವರೆಗೂ ಸಹಾಯಧನವನ್ನು ಪಡೆಯಬಹುದಾಗಿದೆ. ಯಾರೆಲ್ಲಾ ಈ ಸಹಾಯಧನವನ್ನು ಪಡೆಯಲು ಅರ್ಹರಾಗಿರುತ್ತಾರೆ?, ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ಎನ್ನುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಈ ವಾಹನಗಳ ಖರೀದಿಗೆ ಮೂರು ಲಕ್ಷ ಸಹಾಯಧನ :
ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆಯನ್ನು ನಿಯಂತ್ರಿಸಲು ಹಾಗೂ ಯುವಕರನ್ನು ಪ್ರೋತ್ಸಾಹಿಸಲು ವಾಹನ ಸಬ್ಸಿಡಿ(vehicle subsidy)ಯನ್ನು ನೀಡುತ್ತಿದೆ. ಇದರ ಅರ್ಹತೆ ಮಾನದಂಡಗಳು, ಯೋಜನೆಯ ಉದ್ದೇಶ, ವೈಶಿಷ್ಟತೆಗಳು ಹಾಗೂ ಅರ್ಜಿಸಲ್ಲಿಸಲು ಬೇಕಾಗಿರುವ ದಾಖಲೆಗಳ ಬಗ್ಗೆ ಸಂಪೂರ್ಣ ಮಾಹಿತಿಯು ಇಲ್ಲಿದೆ.
ಸ್ವಾವಲಂಬಿ ಸಾರಥಿ ಯೋಜನೆ:
ಕರ್ನಾಟಕದ ಮುಖ್ಯಮಂತ್ರಿ ಶ್ರೀ ಕೆ. ಸಿದ್ಧರಾಮಯ್ಯ ಅವರು ಸ್ವಾವಲಂಬಿ ಸಾರಥಿ ಯೋಜನೆ ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಿದ್ದಾರೆ, ಇದರ ಅಡಿಯಲ್ಲಿ ಅಲ್ಪಸಂಖ್ಯಾತರು, SC ಮತ್ತು ST ಗಳ ನಿರುದ್ಯೋಗಿ ಯುವಕರು ಪ್ರಯೋಜನ ಪಡೆಯುತ್ತಾರೆ ಮತ್ತು ಅವರ ಸ್ವಯಂ ಉದ್ಯೋಗ ಪಡೆಯಲು ನಾಲ್ಕು ಚಕ್ರ ವಾಹನಗಳನ್ನು ಖರೀದಿಸಲು ಸಹಾಯಧನವನ್ನು ಒದಗಿಸಲಾಗುವುದು. ಈ ಯೋಜನಯಲ್ಲಿ ಯುವಕರಿಗೆ 50% ರಿಂದ 75% ರಷ್ಟು ಸಬ್ಸಿಡಿಯನ್ನು ಒದಗಿಸಲಾಗುತ್ತದೆ .
ಫಲಾನುಭವಿಗಳಿಗೆ ಒದಗಿಸಲಾದ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಸ್ವಾವಲಂಬಿ ಸಾರಥಿ ಯೋಜನೆಯ ವೈಶಿಷ್ಟತೆಗಳು :
ರಾಜ್ಯದ ನಿರುದ್ಯೋಗಿ ನಾಗರಿಕರಿಗೆ ಉದ್ಯೋಗದ ವ್ಯವಸ್ಥೆಯನ್ನು ಮಾಡುತ್ತದೆ.
ಸ್ವಂತ ಉದ್ಯಮ ಆರಂಭಿಸಲು ಬಯಸುವ ಯುವಕರಿಗೆ ಈ ಯೋಜನೆಯ ಲಾಭವನ್ನು ಒದಗಿಸಲಾಗುವುದು.
ಈ ಯೋಜನೆಯು ರಾಜ್ಯದಲ್ಲಿನ ನಿರುದ್ಯೋಗ ದರವನ್ನು ಕಡಿಮೆ ಮಾಡುವ ಉದ್ದೇಶವನ್ನು ಹೊಂದಿದೆ.
SC/ST ಗಳಿಗೆ 4 ಲಕ್ಷ ರೂಪಾಯಿಗಳವರೆಗಿನ ಸಾಲಕ್ಕೆ 75% ಸಬ್ಸಿಡಿಯನ್ನು ಒದಗಿಸಲಾಗುತ್ತದೆ.
ಅಲ್ಪಸಂಖ್ಯಾತರಿಗೆ 3 ಲಕ್ಷ ರೂಪಾಯಿಗಳವರೆಗಿನ ಸಾಲಕ್ಕೆ 50% ಸಬ್ಸಿಡಿಯನ್ನು ಒದಗಿಸಲಾಗುತ್ತದ.
ಸ್ವಾವಲಂಬಿ ಸಾರಥಿ ಯೋಜನೆ ಅರ್ಹತಾ ಮಾನದಂಡ :
ಅರ್ಜಿದಾರರು ರಾಜ್ಯ ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು ಅಥವಾ SC /ST ವರ್ಗಕ್ಕೆ ಸೇರಿದವರಾಗಿರಬೇಕು.
ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರ ವಯಸ್ಸಿನ ಮಿತಿಯು 18 ಮತ್ತು 55 ವರ್ಷಗಳ ನಡುವೆ ಇರಬೇಕು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯವು 4.50 ಲಕ್ಷ ರೂ. ಒಳಗೆ ಇರಬೇಕು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ/ಕೇಂದ್ರ/ಸರ್ಕಾರಿ ಸಾರ್ವಜನಿಕ ವಲಯದ ಘಟಕಗಳ ಉದ್ಯೋಗಿಯಾಗಿರಬಾರದು.
ಅರ್ಜಿದಾರರು ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ (RTO) ಡ್ರೈವಿಂಗ್ ಲೈಸೆನ್ಸ್ ಪಡೆದವರಾಗಿರಬೇಕು.
ಸ್ವಾವಲಂಬಿ ಸಾರಥಿ ಯೋಜನೆ : ಅರ್ಜಿಸಲ್ಲಿಸಲು ಬೇಕಾಗಿರುವ ದಾಖಲಾತಿಗಳು
ಆನ್ಲೈನ್ ಅಪ್ಲಿಕೇಶನ್
ಫಲಾನುಭವಿಯ ಇತ್ತೀಚಿನ 2 ಪಾಸ್‌ಪೋರ್ಟ್ ಛಾಯಾಚಿತ್ರಗಳು
ಜಾತಿ – ಆದಾಯ ಪ್ರಮಾಣ ಪತ್ರ
ಆಧಾರ್ ಕಾರ್ಡ್,
ಡ್ರೈವಿಂಗ್ ಲೈಸೆನ್ಸ್,
ಬ್ಯಾಂಕ್ ಪಾಸ್ ಬುಕ್ ಪ್ರತಿ,
ಸಾಲದ ಅವಧಿಯಲ್ಲಿ ಈ ಯೋಜನೆಯಡಿಯಲ್ಲಿ ಪಡೆದ ವಾಹನವನ್ನು ವರ್ಗಾವಣೆ ಮಾಡದಿರುವ ಬಗ್ಗೆ ಅಫಿಡವಿಟ್,
ಫಲಾನುಭವಿ ಮತ್ತು ಅವರ ಕುಟುಂಬದ ಸದಸ್ಯರು ವಾಹನ ಖರೀದಿಸಲು ರಾಜ್ಯ ಸರ್ಕಾರದಿಂದ ಯಾವುದೇ ಯೋಜನೆಯಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯದಿರುವ ಬಗ್ಗೆ ಫಲಾನುಭವಿಯಿಂದ ಅಫಿಡವಿಟ್.
ಸ್ವಾವಲಂಬಿ ಸಾರಥಿ ಯೋಜನೆ ಆಯ್ಕೆಸಮಿತಿ :
ಜಿಲ್ಲಾ ಸಂಬಂಧಪಟ್ಟ ಜಿಲ್ಲಾಧಿಕಾರಿ – ಅಧ್ಯಕ್ಷರು
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ – ಉಪಾಧ್ಯಕ್ಷರು
ಸಂಬಂಧಪಟ್ಟ ಜಿಲ್ಲೆಯ ಲೀಡ್ ಬ್ಯಾಂಕ್ ಮ್ಯಾನೇಜರ್ – ಸದಸ್ಯರು
ಸಂಬಂಧಪಟ್ಟ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ- ಸದಸ್ಯರು
ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ- ಸದಸ್ಯರು
ಸಂಬಂಧಪಟ್ಟ ಜಿಲ್ಲೆಯಲ್ಲಿ KMDC ಯ ಜಿಲ್ಲಾ ವ್ಯವಸ್ಥಾಪಕರು – ಸದಸ್ಯ ಕಾರ್ಯದರ್ಶಿ
ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಹಂತ 1: ಅರ್ಜಿಯನ್ನು ನೀವು ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ ಸಲ್ಲಿಸಬೇಕಾಗುತ್ತದೆ : kmdc.karnataka.gov.in
ಹಂತ 2: ಮುಖಪುಟದಲ್ಲಿ ನೀವು ಆನ್‌ಲೈನ್ ಅನ್ವಯಿಸು ಬಟನ್ ಕ್ಲಿಕ್ ಮಾಡಬೇಕು.
ಹಂತ 3: ಈಗ ನಿಮ್ಮ ಪರದೆಯಲ್ಲಿ ಸ್ವಾವಲಂಬಿ ಸಾರಥಿ ಯೋಜನೆಯ ಅರ್ಜಿ ನಮೂನೆಯ ಹೊಸ ಪುಟವನ್ನು ಪ್ರದರ್ಶಿಸಲಾಗುತ್ತದೆ.
ಹಂತ 4: ನಿಮ್ಮ ಪೂರ್ಣ ಹೆಸರು, ಬ್ಯಾಂಕ್ ವಿವರಗಳು ಮತ್ತು ವಿಳಾಸ ಮುಂತಾದ ಎಲ್ಲಾ ವಿವರಗಳನ್ನು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ನೀವು ಭರ್ತಿ ಮಾಡಬೇಕು.
ಹಂತ 5: ಅದರ ನಂತರ ನೀವು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಕೊನೆಯಲ್ಲಿ ನೀವು ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಹೀಗೆ ನೀವು, ಆಟೋರಿಕ್ಷಾ, ಟ್ಯಾಕ್ಸಿ ಅಥವಾ ಸರಕು ವಾಹನಗಳನ್ನು ಖರೀದಿಸಲು ಸಹಾಯಧನವನ್ನು ಸರ್ಕಾರದ ವತಿಯಿಂದ ಪಡೆಯಬಹುದಾಗಿದೆ. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Mahaveer jainar