Home » ಮುಖ್ಯ ಮಾಹಿತಿ » 4 ಹೊಸ ಸ್ಕಾಲರ್ಶಿಪ್ 2022-23: ಎಲ್ಲಾ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ -ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

4 ಹೊಸ ಸ್ಕಾಲರ್ಶಿಪ್ 2022-23: ಎಲ್ಲಾ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ -ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ

ಎಲ್ಲರಿಗೂ ನಮಸ್ಕಾರ, ಪ್ರಮುಖ ಖಾಸಗಿ ಕಾರ್ಪೊರೇಟ್ ಕಂಪನಿ ಕಡೆಯಿಂದ ನಾಲ್ಕು ಹೊಸ  ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದಾರೆ. ಅವುಗಳು ಯಾವುವೆಂದರೆ, ಕೈಂಡ್ ಸರ್ಕಲ್ ಸ್ಕಾಲರ್ಶಿಪ್, ಕೋಟಕ್ ಕನ್ಯಾ ಸ್ಕಾಲರ್ಶಿಪ್, ಲದುಮಾ ದಮೆಚಾ ಯುವ ಸ್ಕಾಲರ್ಶಿಪ್ ಹಾಗೂ ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್. ಈ ಅರ್ಜಿಯನ್ನು ಸಲ್ಲಿಸಲು ವಿದ್ಯಾರ್ಥಿಗಳಿಗೆ ಏನು ಅರ್ಹತೆ ಇರಬೇಕು? ಯಾವ ಯಾವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಹೀಗೆ ಹಲವಾರು ಮಾಹಿತಿಯನ್ನು ಈ ಲೇಖನದ ಮೂಲಕ ಸಂಪೂರ್ಣವಾಗಿ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

1)  ಕೈಂಡ್ ಸರ್ಕಲ್ ಸ್ಕಾಲರ್ಶಿಪ್ 2022-23:

ಈ ವಿದ್ಯಾ ವೇತನವನ್ನು  ಅರ್ಹ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಂತಹ ವಿದ್ಯಾರ್ಥಿಗಳಿಗಾಗಿ, ಅವರ ಕನಸು ಸಾಕಾರಗೊಳ್ಳಲೆಂದು ಈ ವಿದ್ಯಾರ್ಥಿ ವೇತನವನ್ನು ನೀಡಲಾಗಿದೆ ಹಾಗೂ ಇದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು 1ನೇ ತರಗತಿಯ ವಿದ್ಯಾರ್ಥಿಗಳಿಂದ ಹಿಡಿದು ಯಾವುದೇ ರೀತಿಯ ಕೋರ್ಸ್ ಗಳನ್ನು ಮಾಡುತ್ತಿರುವ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :

  1. ಭಾರತದ ಯಾವುದಾದರೂ ಶಾಲೆ ಅಥವಾ ಕಾಲೇಜುಗಳಲ್ಲಿ ವಿದ್ಯಾರ್ಥಿಯು ಓದುತ್ತಿರಬೇಕು
  2.  ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಕಡಿಮೆಯಾಗಿರಬೇಕು
  3. ಕಳೆದ ವರ್ಷದ ಅಂಕವು 75% ಗಿಂತ ಹೆಚ್ಚಿರಬೇಕು

ವಿದ್ಯಾ ವೇತನದ ಮೊತ್ತ :
ವಿದ್ಯಾರ್ಥಿಗಳ ಅಗತ್ಯಕ್ಕೆ ತಕ್ಕಂತೆ ವಿದ್ಯಾ ವೇತನದ ಪ್ರಶಸ್ತಿ ಬದಲಾಗುತ್ತದೆ. ವಿದ್ಯಾರ್ಥಿಗಳನ್ನು ಸಂದರ್ಶನ ಮಾಡಿದ ನಂತರ ಅವರವರ ಅಗತ್ಯಕ್ಕೆ ಅನುಗುಣವಾಗಿ   ವಿದ್ಯಾರ್ಥಿವೇ ವೇತನವನ್ನು ನಿಗದಿಪಡಿಸಲಾಗುತ್ತದೆ. ಕನಿಷ್ಠ ವಿದ್ಯಾರ್ಥಿ ವೇತನದ ಮೊತ್ತ 6,000 ರೂಗಳು.

SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 :  ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :

  1. ಕೊನೆಯ ಅರ್ಹತೆ ಪರೀಕ್ಷೆಯ ಅಂಕಪಟ್ಟಿ
  2. ಕುಟುಂಬದ ಆದಾಯ ಪ್ರಮಾಣ ಪತ್ರ
  3. ಆಧಾರ್ ಕಾರ್ಡ್ /ಡ್ರೈವಿಂಗ್ ಲೈಸೆನ್ಸ್/ ಪಾನ್ ಕಾರ್ಡ್
  4.  ಶಾಲಾ ಅಥವಾ ಕಾಲೇಜಿನ ಐಡಿ ಕಾರ್ಡ್ / ಪ್ರಮಾಣ ಪತ್ರ
  5. ಪ್ರಸ್ತುತ ವರ್ಷದ ಶುಲ್ಕ ರಶೀದಿ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಮಾರ್ಚ್, 2023

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

2) ಕೋಟಕ್ ಕನ್ಯಾ ಸ್ಕಾಲರ್ಶಿಪ್ 2022 :

ಈ ವಿದ್ಯಾರ್ಥಿ ವೇತನವನ್ನು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳ ಯೋಜನೆಯ ವತಿಯಿಂದ ಕೋಟಕ್ ಎಜುಕೇಶನ್ ಫೌಂಡೇಶನ್ ಕಡೆಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿನಿಯಗಳಿಗಾಗಿಯೇ ಮೀಸಲಿಡಲಾಗಿದೆ. ಕುಟುಂಬದ ಆರ್ಥಿಕ ಸ್ಥಿತಿ  ದುರ್ಬಲವಾಗಿದ್ದು ಹಾಗೂ ಸಮಾಜದ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುವ ಗುರಿಯನ್ನು ಈ ವಿದ್ಯಾರ್ಥಿ ವೇತನವು ಒಳಗೊಂಡಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ವಿದ್ಯಾರ್ಥಿನಿಯರು ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ, ವೃತ್ತಿಪರ ಒಂದನೇ ವರ್ಷದ ಪದವಿ ಕೋರ್ಸ್ ಗಳನ್ನು ಮಾಡುತ್ತಿರಬೇಕು.
  2.  ಅಭ್ಯರ್ಥಿಗಳು 12ನೇ ತರಗತಿಯಲ್ಲಿ, ಬೋರ್ಡ್ ಪರೀಕ್ಷೆಗಳಲ್ಲಿ 75% ಗಿಂತ ಹೆಚ್ಚು ಅಂಕಗಳನ್ನು ಗಳಿಸಿರಬೇಕು.
  3. ವಿದ್ಯಾರ್ಥಿನಿಯರ ಕುಟುಂಬದ ವಾರ್ಷಿಕ ಆದಾಯವು 3,20,000 ರೂಗಳಿಗಿಂತ ಕಡಿಮೆ ಇರಬೇಕು.

ವಿದ್ಯಾರ್ಥಿ ವೇತನದ ಮೊತ್ತ : ವರ್ಷಕ್ಕೆ ರೂ 1.5 ಲಕ್ಷದವರೆಗೆ ನೀಡಲಾಗುತ್ತದೆ.

ಇದನ್ನೂ ಓದಿ : ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕಾಲರ್ಶಿಪ್ 2022-23 – ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ – ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಯಾವ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು?:

ವೃತ್ತಿಪರ ಕೋರ್ಸ್ ಗಳಲ್ಲಿ ಮೊದಲನೇ ವರ್ಷದ ಪದವಿ ಕಾರ್ಯಕ್ರಮಗಳಿಗೆ ಪ್ರವೇಶ ಪಡೆದ ಅರ್ಹ ವಿದ್ಯಾರ್ಥಿನಿಯರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೃತ್ತಿಪರ ಕೋರ್ಸ್ ಗಳಲ್ಲಿ

  1. ಇಂಜಿನಿಯರಿಂಗ್,
  2. ಎಂಬಿಬಿಎಸ್,
  3. ಆರ್ಕಿಟೆಕ್ಚರ್,
  4. ಡಿಸೈನ್,
  5. ಇಂಟಿಗ್ರೇಟೆಡ್ ಎಲ್ ಎಲ್ ಬಿ ಇತ್ಯಾದಿ

ಮುಖ್ಯ ದಾಖಲೆಗಳು :

  1.  ಇತ್ತೀಚಿಗೆ ಉತ್ತೀರ್ಣರಾದ ಪರೀಕ್ಷೆಯ ಅಂಕಪಟ್ಟಿ
  2. 12ನೇ ತರಗತಿಯ ಅಂಕಪಟ್ಟಿ
  3.  ಕಾಲೇಜಿನ ಪ್ರಮಾಣ ಪತ್ರ
  4. ಆದಾಯ ಪ್ರಮಾಣ ಪತ್ರ
  5. ಆಧಾರ್ ಕಾರ್ಡ್
  6. ಬ್ಯಾಂಕ್ ಪಾಸ್ ಬುಕ್
  7. ಪಾಸ್ಪೋರ್ಟ್ ಸೈಜ್ ಭಾವಚಿತ್ರ
  8. ಆದಾಯ ತೆರಿಗೆ ಕಟ್ಟಿದ ದಾಖಲೆ
  9. ಸೀಟು ಹಂಚಿಕೆಯ ಕಾಲೇಜು ತಾತ್ಕಾಲಿಕ ಪತ್ರ

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 30.11.2022

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

3) ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 :

ಕಾಲೇಜುಗಳು ಮತ್ತು ವೃತ್ತಿಪರ ಶಾಲೆಗಳಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಕಾರ್ಯಕ್ರಮವು ಹೆಚ್ಚು ಪ್ರಯೋಜನಕಾರಿಯಾಗಿದೆ. ಈ ವಿದ್ಯಾರ್ಥಿ ವೇತನವು ಹಣಕಾಸಿನ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅರ್ಹ ಅಭ್ಯರ್ಥಿಗಳಿಗೆ ಕಾರ್ಯಕ್ರಮದ ಶುಲ್ಕದ ವೆಚ್ಚ ಮತ್ತು ಶುಲ್ಕವನ್ನು ಪಾವತಿಸುವ ಅವರ ಸಾಮರ್ಥ್ಯದ ನಡುವಿನ ಅಂತರವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :

  1. ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಅಥವಾ ಸಂಸ್ಥೆಗಳಲ್ಲಿ ಎಂಬಿಎ ಅಥವಾ ಎಂಎ( ಅರ್ಥಶಾಸ್ತ್ರ), ಕೊರ್ಸಿಗೆ ದಾಖಲಾಗಿರಬೇಕು.
  2.  ವಿದ್ಯಾರ್ಥಿಗಳು 12ನೇ ತರಗತಿ ಅಥವಾ ಪದವಿಯಲ್ಲಿ ಕನಿಷ್ಠ 60% ಗಳಿಂದ ಉತ್ತೀರ್ಣರಾಗಿರಬೇಕು.
  3. ಕುಟುಂಬದ ವಾರ್ಷಿಕ ಆದಾಯ ರೂ 5 ಲಕ್ಷಕ್ಕಿಂತ  ಕಡಿಮೆ ಅಥವಾ ಸಮನಾಗಿರಬೇಕು.

ವಿದ್ಯಾರ್ಥಿ ವೇತನದ ಮೊತ್ತ : ಕಾಲೇಜು ಶುಲ್ಕದ ಶೇಕಡ 80 ರಷ್ಟು ಹಣವನ್ನು ಮರುಪಾವತಿ ಮಾಡಲಾಗುತ್ತದೆ ಅಥವಾ ರೂ 2, ಲಕ್ಷದ ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಇವೆರಡರಲ್ಲಿ ಯಾವ ಮೊತ್ತ ಕಡಿಮೆ ಇರುತ್ತದೆಯೋ, ಅದನ್ನು ವಿದ್ಯಾರ್ಥಿ ವೇತನದ ಮೂಲಕ ನೀಡಲಾಗುತ್ತದೆ.

ಮುಖ್ಯ ದಾಖಲೆಗಳು:

  1.  ಇತ್ತೀಚಿಗೆ ಉತ್ತೀರ್ಣರಾದ ಪರೀಕ್ಷೆಯ ಅಂಕಪಟ್ಟಿ
  2. 12ನೇ ತರಗತಿಯ ಅಂಕಪಟ್ಟಿ
  3.  ಕಾಲೇಜಿನ ಪ್ರಮಾಣ ಪತ್ರ
  4. ಆದಾಯ ಪ್ರಮಾಣ ಪತ್ರ
  5.  ಆಧಾರ್ ಕಾರ್ಡ್
  6. ಬ್ಯಾಂಕ್ ಪಾಸ್ ಬುಕ್
  7. ಪಾಸ್ಪೋರ್ಟ್ ಸೈಜ್ ಭಾವಚಿತ್ರ
  8. ಪ್ರಸ್ತುತ ಶೈಕ್ಷಣಿಕ ವರ್ಷದ ಶುಲ್ಕ ರಶೀದಿ.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 24.12.2022

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

4) ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 :

ಈ ವಿದ್ಯಾರ್ಥಿ ವೇತನವು ಪ್ರಶಿಷ್ಟ ವಿದ್ಯಾರ್ಥಿವೇತನದ ಅವಕಾಶವಾಗಿದ್ದು, ಸರಿಯಾದ ಅವಕಾಶಗಳನ್ನು ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುತ್ತದೆ ಇದರಿಂದ ಅವರು ವಿವಿಧ ನಗರಗಳಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸಬಹುದು. ಹತ್ತನೇ ತರಗತಿಯ ನಂತರ ಅಥವಾ ಇಂಜಿನಿಯರಿಂಗ್ / ಎಂ ಬಿ ಬಿ ಎಸ್ ಕಾರ್ಯಕ್ರಮದ ಮೊದಲ ವರ್ಷದ ನಂತರ JEE/NEET ಕೋಚಿಂಗ್ ಅನ್ನು ಅನುಸರಿಸುತ್ತಿರುವ ಅಹಮದಾಬಾದ್ ಮುಂಬೈ ಬೆಂಗಳೂರು ಮತ್ತು ದೆಹಲಿ ಏನ್ ಸಿ ಆರ್ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿ ವೇತನವು ಲಭ್ಯವಿರುತ್ತದೆ.

ಈ ವಿದ್ಯಾರ್ಥಿ ವೇತನಕ್ಕೆ ಬೇಕಾದ ಅರ್ಹತೆಗಳು :

  1. 10ನೇ ಹಾಗೂ ಹನ್ನೆರಡನೇ ತರಗತಿಯಲ್ಲಿ ಕನಿಷ್ಠ 85% ಗಳಿಂದ ಉತ್ತೀರ್ಣರಾಗಿರಬೇಕು.
  2. ಈ ವಿದ್ಯಾರ್ಥಿ ವೇತನವನ್ನು ಅಹ್ಮದ ಬಾತ್ ಮುಂಬೈ, ಬೆಂಗಳೂರು ಮತ್ತು ದೆಹಲಿ ಎನ್ ಸಿ ಆರ್ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
  3. 10ನೇ ತರಗತಿ ಅಥವಾ ಮೊದಲ ವರ್ಷದ ಇಂಜಿನಿಯರಿಂಗ್ /ಎಂ ಬಿ ಬಿ ಎಸ್ ಕಾರ್ಯಕ್ರಮದ ನಂತರ ಜೆಇಇ ಅಥವಾ ನೀಟ್ ಕೋಚಿಂಗ್ ಅನ್ನು ಅನುಸರಿಸುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ.
  4. ಕುಟುಂಬದ ವಾರ್ಷಿಕ ಆದಾಯ ಮೂರು ಲಕ್ಷಕ್ಕಿಂತ ಹೆಚ್ಚು ಇರಬಾರದು.

ವಿದ್ಯಾರ್ಥಿ ವೇತನದ ಮೊತ್ತ:  ವಾರ್ಷಿಕ ರೂ 50,000

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು:

  1. ಹಿಂದಿನ ತರಗತಿ ಅಥವಾ ಸೆಮಿಸ್ಟರ್ ನ ಅಂಕಪಟ್ಟಿ
  2.  ಸರ್ಕಾರ ನೀಡಿದ ಗುರುತಿನ ಪುರಾವೆ, ಅಂದರೆ ಆಧಾರ್ ಕಾರ್ಡ್ /ವೋಟರ್ ಐಡಿ/ ಚಾಲನ ಪರವಾನಗಿ/ ಪ್ಯಾನ್ ಕಾರ್ಡ್
  3. ಪ್ರಸ್ತುತ ವರ್ಷದ ಪ್ರವೇಶ ಪುರಾವೆ ಅಂದರೆ ಶುಲ್ಕ ರಸೀದಿ/ ಪ್ರವೇಶ ಪತ್ರ /ಸಂಸ್ಥೆಯ ಗುರುತಿನ ಚೀಟಿ/ ಬನಫೈಟ್ ಪ್ರಮಾಣ ಪತ್ರ.
  4. ಕುಟುಂಬದ ಆದಾಯ ಪ್ರಮಾಣ ಪತ್ರ
  5. ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರಗಳು
  6. ವಿದ್ಯಾರ್ಥಿಯ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
  7. ಪೋಷಕರ ಆಧಾರ್ ಕಾರ್ಡ್
  8.  ಅರ್ಜಿದಾರರ ಮನೆಯ ಚಿತ್ರಗಳ ಪಿಡಿಎಫ್ (3-4)
  9.  ಒಂದು ತಿಂಗಳ ವಿದ್ಯುತ್ ಬಿಲ್

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 30.11.2022

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಈ ಮೇಲಿನ ನಾಲ್ಕು ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಸಲ್ಲಿಸುವ ವಿಧಾನ :

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

  1.   ‘Apply Now’ ಬಟನ್ ಮೇಲೆ ಕ್ಲಿಕ್ ಮಾಡಿ.
  2. ನಿಮ್ಮ ನೋಂದಾಯಿತ ID ಯೊಂದಿಗೆ Buddy4Study ಗೆ ಲಾಗಿನ್ ಮಾಡಿ Buddy4Study ಗೆ ನೋಂದಾಯಿಸದಿದ್ದರೆ – ನಿಮ್ಮ ಇಮೇಲ್/ಮೊಬೈಲ್ ಸಂಖ್ಯೆ/Gmail ಖಾತೆಯೊಂದಿಗೆ Buddy4Study ನಲ್ಲಿ ನೋಂದಾಯಿಸಿ.
  3. ಈಗ ನಿಮ್ಮನ್ನು ‘ಸ್ಕಾಲರ್‌ಶಿಪ್ ಪ್ರೋಗ್ರಾಂ’ ಅರ್ಜಿ ನಮೂನೆಯ ಪುಟಕ್ಕೆ ಮರುನಿರ್ದೇಶಿಸಲಾಗುತ್ತದೆ.
  4. ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪ್ರಾರಂಭಿಸಲು ‘Start Application’ ಬಟನ್ ಮೇಲೆ ಕ್ಲಿಕ್ ಮಾಡಿ.
  5. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ.
  6. ಸಂಬಂಧಿತ ದಾಖಲೆಗಳನ್ನು ಅಪ್ಲೋಡ್ ಮಾಡಿ.
  7. ‘ನಿಯಮಗಳು ಮತ್ತು ಷರತ್ತುಗಳನ್ನು’ ಒಪ್ಪಿಕೊಳ್ಳಿ ಮತ್ತು ‘ಪೂರ್ವವೀಕ್ಷಣೆ’ ಮೇಲೆ ಕ್ಲಿಕ್ ಮಾಡಿ.
  8. ಅರ್ಜಿದಾರರು ಭರ್ತಿ ಮಾಡಿದ ಎಲ್ಲಾ ವಿವರಗಳನ್ನು ಪೂರ್ವವೀಕ್ಷಣೆ ಪರದೆಯಲ್ಲಿ ಸರಿಯಾಗಿ ತೋರಿಸುತ್ತಿದ್ದರೆ, ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘Submit’ ಬಟನ್ ಕ್ಲಿಕ್ ಮಾಡಿ.

ವಿದ್ಯಾರ್ಥಿಗಳಿಗೆ ತಮ್ಮ ಓದನ್ನು ಪೂರ್ಣಗೊಳಿಸಲು ಆರ್ಥಿಕವಾಗಿ ತೊಂದರೆಯಾಗುತ್ತಿದ್ದಲ್ಲಿ, ಇಂತಹ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವುದು ಬಹುಮುಖ್ಯವಾಗಿರುತ್ತದೆ.  ಅದರಿಂದ ಎಲ್ಲಾ ವಿದ್ಯಾರ್ಥಿಗಳು ಈ ಕೂಡಲೇ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಿ ತಮ್ಮ ಕನಸನ್ನು ನೆರವೇರಿಸಿಕೊಳ್ಳಿ. ಹಾಗೆಯೇ ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಪೋಷಕರಿಗೆ ಶೇರ್ ಮಾಡಿ, ಧನ್ಯವಾದಗಳು.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

About

Lingaraj Ramapur BCA,MCA, MA(Journalism)

Leave a Reply

Your email address will not be published. Required fields are marked *

error: Content is protected !!