ಬಹುನಿರೀಕ್ಷಿತ ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e-Vitara) ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗೆ ಕಾಲ ಕೂಡಿಬಂದಿದೆ. ಇದೇ ಡಿಸೆಂಬರ್ 2 ರಂದು (ಮಂಗಳವಾರ) ಈ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗುತ್ತಿದೆ. ನೂತನ ‘ಇ-ವಿಟಾರಾ’ ಮೇಲೆ ಖರೀದಿದಾರರು ಕೂಡ ದೊಡ್ಡ ಮಟ್ಟದಲ್ಲಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಕಾರಿನ ಬೆಲೆ ಎಷ್ಟಿರಲಿದೆ ಮತ್ತು ಇದರ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣ ವಿವರಗಳನ್ನು ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ನಿರೀಕ್ಷಿತ ಬೆಲೆ ಮತ್ತು ರೂಪಾಂತರಗಳು
ಬಹುನಿರೀಕ್ಷಿತ ‘ಮಾರುತಿ ಇ-ವಿಟಾರಾ’ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ಇದರ ದರವು ₹17 ಲಕ್ಷದಿಂದ ₹22.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಇದು ಡೆಲ್ಟಾ (Delta), ಜೀಟಾ (Zeta) ಹಾಗೂ ಆಲ್ಫಾ (Alpha) ಎಂಬ 3 ರೂಪಾಂತರಗಳ (Variants) ಆಯ್ಕೆಯಲ್ಲಿಯೂ ಸಿಗಲಿದೆ.
ವಿನ್ಯಾಸ, ಆಯಾಮ ಮತ್ತು ಬಣ್ಣಗಳು
ಈ ಕಾರು ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಸೆಳೆಯುವಂತಿದೆ. ಇದು LED ಹೆಡ್‌ಲೈಟ್‌ಗಳು, LED DRL ಗಳು, LED ಫಾಗ್ ಲೈಟ್‌ಗಳು, LED ಟೈಲ್ ಲೈಟ್ ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಗ್ರ್ಯಾಂಡಿಯರ್ ಗ್ರೇ, ಬ್ಲೂಯಿಶ್ ಬ್ಲ್ಯಾಕ್ ಹಾಗೂ ಆಪ್ಯುಲೆಂಟ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗಲಿದೆ. ಇದು 4,275 mm ಉದ್ದ, 4,275 mm ಅಗಲ ಮತ್ತು 1,800 mm ಎತ್ತರವಿದೆ. ಇದರ ಜೊತೆಗೆ 180 mm ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 mm ವೀಲ್‌ಬೇಸ್‌ನ್ನು ಒಳಗೊಂಡಿದೆ.

ಆಸನ ಮತ್ತು ಬೂಟ್ ಸ್ಪೇಸ್
ಹೊಸ ‘ಮಾರುತಿ ಇ-ವಿಟಾರಾ’ 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಪ್ರಯಾಣ ಮಾಡಬಹುದು. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು 320 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿರುವ ನಿರೀಕ್ಷೆಯಿದೆ.
500 ಕಿ.ಮೀ ರೇಂಜ್ ಮತ್ತು ಬ್ಯಾಟರಿ
ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಇದು 49 kWh ಮತ್ತು 61 kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 km ವರೆಗೆ ರೇಂಜ್ (ಮೈಲೇಜ್) ನೀಡುವ ಸಾಧ್ಯತೆಯಿದೆ. ವಿಶೇಷವಾಗಿ DC ಫಾಸ್ಟ್ ಚಾರ್ಜರ್ ಬಳಸಿದರೆ, ಬ್ಯಾಟರಿ ಪ್ಯಾಕ್‌ನ್ನು ಕೇವಲ 50 ನಿಮಿಷಗಳಲ್ಲಿ 0 ರಿಂದ 80% ಚಾರ್ಜ್ ಮಾಡಬಹುದು.

ವೈಶಿಷ್ಟ್ಯಗಳು ಮತ್ತು ತಂತ್ರಜ್ಞಾನ
ಇದರ ಕ್ಯಾಬಿನ್ ವಿನ್ಯಾಸವು ಅತ್ಯಾಕರ್ಷಕವಾಗಿದ್ದು, ಇದಕ್ಕೆ ತಕ್ಕಂತೆ ಹಲವಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಪ್ರಮುಖವಾಗಿ 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋ AC ಗಳನ್ನು ಹೊಂದಿದೆ.
ಸುರಕ್ಷತೆ ಮತ್ತು ಪ್ರತಿಸ್ಪರ್ಧಿಗಳು
ನೂತನ ‘ಇ-ವಿಟಾರಾ’ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಇದು ‘ಯೂರೋ ಎನ್‌ಸಿಎಪಿ’ (Euro NCAP) ಯಿಂದ 4-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಗಳಿಸಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ABS, EBD, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply