IMG 20240719 WA0004

7th pay commission: ವೇತನ ಆಯೋಗ ಜಾರಿ..! ಸರ್ಕಾರಿ ನೌಕರರಿಗೆ ಬಿಗ್ ಅಪ್ಡೇಟ್!

WhatsApp Group Telegram Group
7ನೇ ವೇತನ ಆಯೋಗ (7th pay commission) ಜಾರಿಯಾದರೂ ಇನ್ನು ಮುಷ್ಕರ ಕೈ ಬಿಡದ ಸರ್ಕಾರಿ ನೌಕರರು!

ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ್ದು, ಈ ಕುರಿತು ವಿಧಾನಸಭೆ ಅಧಿವೇಶನದಲ್ಲಿಯೂ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiya) ಘೋಷಣೆ ಮಾಡಿದ್ದಾರೆ. ಹಾಗೆಯೇ ಸರ್ಕಾರವು (government) ಇದೀಗ 7ನೇ ವೇತನ ಆಯೋಗದ ವರದಿಯ ಶಿಫಾರಸ್ಸುಗಳನ್ನು ಆಗಸ್ಟ್‌ 1 ರಿಂದ ಜಾರಿಗೆ ತರಲು ನಿರ್ಧರಿಸಿದೆ. ಇದರಿಂದ ಸರ್ಕಾರಿ ನೌಕರರ ಮೂಲವೇತನ ಮತ್ತು ಪಿಂಚಣಿಯಲ್ಲಿ ಶೇ 58.50 ಹೆಚ್ಚಳವಾಗಲಿದ್ದು, ಇದಕ್ಕಾಗಿ ವಾರ್ಷಿಕ ರೂ.20,208 ಕೋಟಿ ಹೆಚ್ಚುವರಿ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ತಿಳಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

7ನೇ ವೇತನ ಆಯೋಗದ ವರದಿ ಜಾರಿಗೆ ಸರ್ಕಾರ ಒಪ್ಪಿಗೆ ನೀಡಿದರೂ ಸಹ ರಾಜ್ಯ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರದ (Strike) ಕರೆಯನ್ನು ವಾಪಸ್ ಪಡೆದಿಲ್ಲ. ಸರ್ಕಾರದ ವಿರುದ್ಧ ನಿರಂತರ ಹೋರಾಟ, ಪ್ರತಿಭಟನೆ  ಹಾಗೂ ಮುಸ್ಕರ ನಡೆಸುತ್ತಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ರಾಜ್ಯ 7ನೇ ವೇತನ ಆಯೋಗದ ಬಗ್ಗೆ ಪ್ರಕಟಣೆ (Publication) :

ರಾಜ್ಯ ಸರ್ಕಾರಿ ನೌಕರರ ವೇತನ-ಭತ್ಯೆಗಳ ಪರಿಷ್ಕರಣೆಗೆ ರಚಿಸಿದ್ದ ರಾಜ್ಯ 7ನೇ ವೇತನ ಆಯೋಗವು ಮಾಡಿದ್ದ ಶಿಫಾರಸ್ಸು ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟದಲ್ಲಿ ಅನುಮೋದನೆ ಎಂಬ ವಿಷಯವನ್ನು ಪ್ರಕಟಣೆ ಒಳಗೊಂಡಿದೆ.

ವೇತನ ನಿಗದಿಗಾಗಿ ದಿನಾಂಕ (date) ಪ್ರಕಟಣೆ :

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ 01/7/2022ರಿಂದ ಕಾಲ್ಪನಿಕವಾಗಿ ವೇತನ ನಿಗದಿ, ದಿನಾಂಕ 01/08/2024 ರಿಂದ ಆರ್ಥಿಕ ಸೌಲಭ್ಯವನ್ನು ನೀಡಲು ಹಾಗೂ ವೇತನ ಆಯೋಗ ಶಿಫಾರಸ್ಸು ಮಾಡಿದ ಶೇ 27.50 ವೇತನ ವೇತನ ನಿಗದಿಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿರುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ.

ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು (Demands) ಹೀಗಿವೆ :

ಸರ್ಕಾರಿ ನೌಕರರು ಇನ್ನು ಮುಸ್ಕರ ಮುಂದುವರೆಸಲು ಹಲವು ಕಾರಣಗಳಿವೆ. ಮತ್ತು ನೌಕರರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಅವುಗಳು ಈ ಕೆಳಗಿನಂತಿವೆ :
ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಿ ಆದೇಶ ಹೊರಡಿಸುವುದು.
ಎನ್.ಪಿ.ಎಸ್. ರದ್ದುಪಡಿಸಿ ಹಳೇ ಪಿಂಚಣೆ ಯೋಜನೆಯನ್ನು ಮರು ಜಾರಿಗೊಳಿಸುವುದು.
ಮತ್ತು ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಮಾಡುವುದು.
ಹಾಗೆಯೇ ಸಂಘದ ಮತ್ತೊಂದು ಪ್ರಮುಖ ಬೇಡಿಕೆಯಾದ ನೂತನ ಪಿಂಚಣಿಯ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವ ಬೇಡಿಕೆಯು ಸಚಿವ ಸಂಪುಟದ ಅನುಮೋದನೆಯಾಗುವ ನಿರೀಕ್ಷೆಯನ್ನು ಸಂಘವು ಹೊಂದಿತ್ತು.

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಉಚಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಯೋಜನೆಗೆ (Arogya Sanjeevini Scheme) ಹಿಂದಿನ ಸರ್ಕಾರದ ಸಚಿವ ಸಂಪುಟ ಅನುಮೋದನೆ ನೀಡಿ 2 ವರ್ಷ ಪೂರ್ಣಗೊಂಡರೂ ಈವರಗೆ ಜಾರಿ ಆಗಿರುವುದಿಲ್ಲ. ಸಂಘದ ಪ್ರಮುಖ ಬೇಡಿಕೆಗಳಿಗೆ ಸಚಿವ ಸಂಪುಟದ ಅನುಮೋದನೆ ಹೊರತಾಗಿಯೂ ಮೂರು ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರ ಕೂಡಲೇ ಆದೇಶ ಹೊರಡಿಸಿ ಜಾರಿಗೊಳಿಸುವ ನಿರೀಕ್ಷೆಯನ್ನು ಸಂಘವು ಹೊಂದಿದೆ.

ಸರ್ಕಾರದ ಆದೇಶ ವಿಳಂಬವಾದಲ್ಲಿ ಮತ್ತೆ ವೃಂದ ಸಂಘಗಳ ಸಭೆಯನ್ನು ಕರೆಯಲು ನಿರ್ಧಾರ :

ಒಂದು ವೇಳೆ ಸರ್ಕಾರ ಆದೇಶ ಹೊರಡಿಸಲು ವಿಳಂಬ ಮಾಡಿದಲ್ಲಿ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯದಂತೆ ಹೋರಾಟದ 2ನೇ ಹಂತದ ಭಾಗವಾಗಿ ದಿನಾಂಕ 23/07/2024ರಂದು ರಾಜ್ಯದ ಎಲ್ಲಾ ಇಲಾಖೆಗಳು, ನಿಗಮ-ಮಂಡಳಿ,ಪ್ರಾಧಿಕಾರ, ವಿಶ್ವವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆ ಮತ್ತು ಅನುದಾನಿತ ಸಂಸ್ಥೆಗಳು ಹಾಗೂ ರಾಜ್ಯ ನಿವೃತ್ತ ನೌಕರರ ಸಂಘವೂ ಸೇರಿದಂತೆ ವೃಂದ ಸಂಘಗಳ ಸಭೆಯನ್ನು ಕರೆಯಲಾಗಿದ್ದು, ಈ ಸಭೆಯಲ್ಲಿ ಮುಂದಿನ ಹೋರಾಟದ ರೂಪು – ರೇಷೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದೆ.

ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿನ ಪ್ರಮುಖ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ (government order) ಹೊರಡಿಸದೇ ಇದ್ದಲ್ಲಿ ಅನಿವಾರ್ಯವಾಗಿ ದಿನಾಂಕ 29/07/2024ರಿಂದ ಅನಿರ್ದಿಷ್ಟಾವದಿಯವರೆಗೆ ಕಚೇರಿ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಹೋರಾಟವನ್ನು ನಡೆಸಲಾಗುವುದು. ಮತ್ತು ಸರ್ಕಾರವು ರಾಜ್ಯ ಸರ್ಕಾರಿ ನೌಕರರು ಹೋರಾಟ ಮಾರ್ಗ ಹಿಡಿಯಲು ಅವಕಾಶ ಮಾಡಿಕೊಡದೆ ಸಂಘದ ಮೇಲ್ಕಂಡ ಬೇಡಿಕೆಗಳ ಕುರಿತಂತೆ ಸರ್ಕಾರಿ ಆದೇಶ ಹೊರಡಿಸುವಂತೆ ಸಂಘವು ಈ ಮೂಲಕ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಮಾಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories