ಸರ್ಕಾರಿ ನೌಕರರ ಜಿಪಿಎಫ್ (GPF) ಮೊತ್ತಕ್ಕೆ ಮಿತಿ ಹೇರಿಕೆ. 5 ಲಕ್ಷ ರೂ. ಮಿತಿ ಹೇರಿದ ಕರ್ನಾಟಕ ಸರ್ಕಾರ!
ಏಳನೇ ವೇತನ ಆಯೋಗದ (7th Pay Commission) ಜಾರಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು (Karnataka Government) ನಿರ್ಧರಿಸಿದ ನಂತರ, 27.5% ವೇತನ ಹೆಚ್ಚಳದ ಸಂಭ್ರಮದಲ್ಲಿದ್ದ ಸರ್ಕಾರಿ ನೌಕರರಿ(government employees)ಗೆ ರಾಜ್ಯ ಸರ್ಕಾರ ಕಹಿ ಸುದ್ದಿ ನೀಡಿದೆ. ಹೌದು ಸರ್ಕಾರಿ ನೌಕರರು(Government Employees) ವಾರ್ಷಿಕವಾಗಿ ಸಾಮಾನ್ಯ ಭವಿಷ್ಯ ನಿಧಿ -ಜಿಪಿಎಫ್ ಗೆ ಜಮಾ ಮಾಡುವ ವಂತಿಗೆ ಮೊತ್ತವನ್ನು ರೂ 5 ಲಕ್ಷಕ್ಕೆ (GPF CAP) ಮಿತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯ ಸರ್ಕಾರವು ಜಿಪಿಎಫ್ (GPF CAP) ಮೊತ್ತದ ಮಿತಿ ನಿಗದಿಗೊಳಿಸಿ ಆದೇಶ ಹೊರಡಿಸಿದೆ. ಆದೇಶ ಹೊರಡಿಸಿದ ಉಲ್ಲೇಖ (1)ರಲ್ಲಿ ಕೇಂದ್ರ ಸರ್ಕಾರದ ಅಧಿಸೂಚನೆ ಮತ್ತು ಅಧಿಕೃತ ಜ್ಞಾಪನಗಳಲ್ಲಿ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಮತ್ತು ಉಲ್ಲೇಖ(2)ರಲ್ಲಿ ರಾಜ್ಯ ಸರ್ಕಾರದ ಆದೇಶದಲ್ಲಿ ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರು ಒಂದು ವರ್ಷಕ್ಕೆ ಪಾವತಿಸಬೇಕಾದ ಗ್ರಾಚ್ಯುಟಿ (Gratuity) ರೂ. 5 ಲಕ್ಷಕ್ಕೆ ಸೀಮಿತವಾಗಿದೆ. ಈ ಅಂಶವನ್ನು ಎಲ್ಲಾ ಅಖಿಲ ಭಾರತ ಸೇವಾ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ಅಧಿಕಾರಿ ಮತ್ತು ನೌಕರರು ಕಟ್ಟುನಿಟ್ಟಾಗಿ ಅನುಸರಿಸಲು ಈ ಮೂಲಕ ಸೂಚಿಸಲಾಗಿದೆ, ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಸರ್ಕಾರಿ ನೌಕರರಿಗೆ ಇದು ಹೇಗೆ ಅನಾನುಕೂಲ?
ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರದಿಂದ ನೌಕರರಿಗೆ ತೆರಿಗೆ ಉಳಿಸಲು ಕಷ್ಟಕರವಾಗುತ್ತದೆ. ಈ ಹಿಂದೆ ಯಾರೆಲ್ಲಾ ಹೆಚ್ಚು ಸಂಬಳ ಪಡೆಯುತ್ತಿದ್ದರೂ ಆ ನೌಕರರು ಜಿಪಿಎಫ್‌ಗೆ ವಾರ್ಷಿಕವಾಗಿ ಅತಿ ಹೆಚ್ಚಿನ ಮೊತ್ತವನ್ನು ಠೇವಣಿ ಮಾಡುವ ಮೂಲಕ ತೆರಿಗೆ ಉಳಿಸುತ್ತಿದ್ದರು. ಇದರಿಂದ ನೌಕರರಿಗೆ ಅನುಕೂಲವಾಗುತ್ತಿತ್ತು. ಆದರೆ ಇದೀಗ ವಾರ್ಷಿಕ ಮಿತಿಯನ್ನು 5 ಲಕ್ಷ ರೂ.ಗೆ ನಿಗದಿಪಡಿಸಿದ ಕಾರಣ ಲಕ್ಷಾಂತರ ನೌಕರರು ತೆರಿಗೆ ಉಳಿಸಲು, ಹೆಚ್ಚಿನ ಹಣವನ್ನು ಉಳಿತಾಯ ಮಾಡಲು ಕಷ್ಟವಾಗುತ್ತದೆ ಎಂದು ತಿಳಿದುಬಂದಿದೆ.
ಸಾಮಾನ್ಯ ಭವಿಷ್ಯ ನಿಧಿ ಚಂದಾದಾರರಿಗೆ ಒಂದು ವರ್ಷಕ್ಕೆ 5 ಲಕ್ಷ ರೂ. ಇನ್ನು ಮುಂದೆ ಸರ್ಕಾರಿ ನೌಕರರಿಗೆ ಮಾತ್ರವಲ್ಲದೆ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಎಎಸ್(IAS) ಅಧಿಕಾರಿಗಳಿಗೂ ಅನ್ವಯವಾಗಲಿದೆ. ಕೆಲವು ತಿಂಗಳ ಹಿಂದೆ ಪಂಜಾಬ್‌ನಲ್ಲಿಯೂ ಅಲ್ಲಿನ ರಾಜ್ಯ ಸರ್ಕಾರವು ನೌಕರರ ವಾರ್ಷಿಕ ಜಿಪಿಎಫ್ ಮಿತಿಯನ್ನು 5 ಲಕ್ಷ ರೂ. ಆದರೆ, ಕರ್ನಾಟಕ ಸರ್ಕಾರದ ಆದೇಶದ ಕುರಿತು ಇದುವರೆಗೆ ರಾಜ್ಯ ಸರ್ಕಾರಿ ನೌಕರರ ಸಂಘವು ಪ್ರತಿಕ್ರಿಯೆ ನೀಡಿಲ್ಲ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




