ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಗೆ 2025-26ನೇ ಶೈಕ್ಷಣಿಕ ವರ್ಷದಿಂದ ವಾರದಲ್ಲಿ ಎರಡು ಅವಧಿಗಳಲ್ಲಿ ನೈತಿಕ ಮೌಲ್ಯದ ಶಿಕ್ಷಣವನ್ನು ಕಡ್ಡಾಯವಾಗಿ ಜಾರಿಗೆ ತರಲು ನಿರ್ಧಾರವಾಗಿದೆ. ಇದರ ಜೊತೆಗೆ ಈ ವಿಷಯಕ್ಕೆ ಸಂಬಂಧಿಸಿದ ಪರೀಕ್ಷೆಗಳನ್ನೂ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ವಿಧಾನ ಪರಿಷತ್ತಿನಲ್ಲಿ ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವುಗಳ ಪರಿಹಾರಗಳ ಕುರಿತು ಇತ್ತೀಚೆಗೆ ಸುದೀರ್ಘ ಚರ್ಚೆ ನಡೆದಿತ್ತು. ಆಡಳಿತ ಮತ್ತು ಪ್ರತಿಪಕ್ಷದ ಅನೇಕ ಸದಸ್ಯರು ಭಾಗವಹಿಸಿ ತಮ್ಮ ಅಭಿಪ್ರಾಯಗಳು, ಸಲಹೆಗಳು ಮತ್ತು ಸೂಚನೆಗಳನ್ನು ಸರ್ಕಾರಕ್ಕೆ ನೀಡಿದ್ದರು.
ಹದಿಹರೆಯದ ವಯಸ್ಸಿನಲ್ಲಿ ಮಕ್ಕಳು ದುಶ್ಚಟಗಳಿಗೆ ಒಳಗಾಗುವುದು, ಅಡ್ಡದಾರಿ ಹಿಡಿಯುವುದು ಸೇರಿದಂತೆ ಅವರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಂಡಿದೆ. ಇದರ ಜೊತೆಗೆ, ಮುಂಬರುವ ಶೈಕ್ಷಣಿಕ ವರ್ಷದಿಂದ ನೀತಿ ಪಾಠ ಅಥವಾ ನೈತಿಕ ಮೌಲ್ಯದ ಶಿಕ್ಷಣವನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇತ್ತೀಚೆಗೆ ಮಕ್ಕಳಲ್ಲಿ ಸತ್ಯ, ಪ್ರಾಮಾಣಿಕತೆ, ಸಂಯಮ, ತ್ಯಾಗ, ಪರೋಪಕಾರ, ಸ್ವಾವಲಂಬನೆ, ಸ್ವಾಭಿಮಾನ, ಏಕಾಗ್ರತೆ, ಪರಿಶ್ರಮ, ಪ್ರೀತಿ, ಗೌರವ ಸೇರಿದಂತೆ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಇವುಗಳನ್ನು ಮಕ್ಕಳಲ್ಲಿ ಬೆಳೆಸುವ ದೃಷ್ಟಿಯಿಂದ ನೀತಿ ಪಾಠದ ಬೋಧನೆ ಅತ್ಯಂತ ಅಗತ್ಯವಾಗಿದೆ. ಉದಾಹರಣೆಗೆ, ಶ್ರವಣಕುಮಾರನ ಕಥೆ ಮೂಲಕ ಮಾತಾಪಿತೃ ಭಕ್ತಿ, ಸತ್ಯ ಹರಿಶ್ಚಂದ್ರನ ಕಥೆ ಮೂಲಕ ಸತ್ಯ ಸಂಧಾನ, ಶ್ರೀರಾಮಚಂದ್ರನ ಕಥೆ ಮೂಲಕ ಪಿತೃವಾಕ್ಯ ಪರಿಪಾಲನೆ, ಅರ್ಜುನನ ಏಕಾಗ್ರತೆ, ಕರ್ಣನ ತ್ಯಾಗ, ಲಕ್ಷ್ಮಣನ ಸಹೋದರತ್ವ, ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರಾಮಾಣಿಕತೆ ಹೀಗೆ ಆದರ್ಶ ವ್ಯಕ್ತಿಗಳು, ಮಹಾನ್ ನಾಯಕರ ಜೀವನ ಚರಿತ್ರೆ ಮತ್ತು ಸಾಧನೆಗಳನ್ನು ಮಕ್ಕಳಿಗೆ 1ರಿಂದ 10ನೇ ತರಗತಿಯ ವ್ಯಾಸಂಗದ ಅವಧಿಯಲ್ಲಿ ಬೋಧಿಸುವುದು. ಅದೇ ರೀತಿ ರಾಷ್ಟ್ರಪ್ರೇಮ, ದೇಶದ ಭವ್ಯ ಪರಂಪರೆ, ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಐತಿಹಾಸಿಕ ಸ್ಥಳಗಳನ್ನು ಈ ಅವಧಿಯಲ್ಲಿ ಪರಿಚಯಿಸುವ ಕೆಲಸವನ್ನು ನೈತಿಕ ಮೌಲ್ಯದ ಶಿಕ್ಷಣದ ಅವಧಿಯಲ್ಲಿ ಮಾಡಲಾಗುವುದು ಎಂದು ತಿಳಿಸಲಾಗಿದೆ.
ಪರೀಕ್ಷೆ ಮತ್ತು ಪ್ರೇರಣೆ:
ಒಂದು ತಿಂಗಳಲ್ಲಿ ಬೋಧಿಸಲಾಗುವ ವಿವಿಧ ವಿಷಯಗಳಲ್ಲಿನ ನೈತಿಕ ಮೌಲ್ಯಗಳನ್ನು ಆಧರಿಸಿ ತಿಂಗಳಿಗೊಮ್ಮೆ ಪರೀಕ್ಷೆ ನಡೆಸಲಾಗುವುದು. ಜೊತೆಗೆ, ಉತ್ತಮ ಉತ್ತರಗಳನ್ನು ಆಯ್ಕೆ ಮಾಡಿ ತರಗತಿಯಲ್ಲಿ ಓದಿಸುವ ಮೂಲಕ ಮಕ್ಕಳನ್ನು ಪ್ರೇರೇಪಿಸಲಾಗುವುದು ಎಂದು ವಿವರಿಸಲಾಗಿದೆ.
ಸಹಪಠ್ಯ ಚಟುವಟಿಕೆಗಳು:
ಮಕ್ಕಳಿಗಾಗಿ ಆರೋಗ್ಯ ಶಿಕ್ಷಣ, ಕ್ರೀಡೆ ಸೇರಿದಂತೆ ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡುವುದು, ಪಾಲಕರು ಮತ್ತು ಶಿಕ್ಷಕರ ಸಭೆ, ವೃತ್ತಿ ಮಾರ್ಗದರ್ಶನ ಸೇರಿದಂತೆ ಇನ್ನೂ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಲೈಂಗಿಕ ಶಿಕ್ಷಣ:
ನೈತಿಕ ಮೌಲ್ಯದ ಶಿಕ್ಷಣದ ಜೊತೆಗೆ, ಮಕ್ಕಳ ವಯೋಮಾನಕ್ಕೆ ಅನುಗುಣವಾಗಿ 8ರಿಂದ 12ನೇ ತರಗತಿಯ ಮಕ್ಕಳಿಗೆ ಕಡ್ಡಾಯವಾಗಿ ವಾರದಲ್ಲಿ 2 ದಿನ ಲೈಂಗಿಕ ಶಿಕ್ಷಣ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಲೈಂಗಿಕ ಶಿಕ್ಷಣವೆಂದರೆ ತಪ್ಪಾಗಿ ಅರ್ಥೈಸಿಕೊಳ್ಳಬಾರದು. ಮಕ್ಕಳ ವಯಸ್ಸಿಗೆ ಅನುಗುಣವಾಗಿ ದೇಹದಲ್ಲಿ ಬಿಡುಗಡೆಯಾಗುವ ಹಾರ್ಮೋನುಗಳು, ಸಹಜವಾಗಿ ಆಗುವ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳು, ಅವುಗಳೆಲ್ಲವನ್ನೂ ಸಹಜ ರೀತಿಯಲ್ಲಿ ಸ್ವೀಕರಿಸುವ ಮತ್ತು ಸೂಕ್ತ ರೀತಿಯಲ್ಲಿ ಎದುರಿಸುವ/ನಿರ್ವಹಿಸುವ ಮನೋಭಾವ ಬೆಳೆಸುವ ಕೆಲಸವಾಗಲಿದೆ. ಈ ವಿಚಾರಗಳಲ್ಲಿ ವೈದ್ಯರೊಂದಿಗೆ ವರ್ಷದಲ್ಲಿ ಎರಡು ಬಾರಿ ಸಮಾಲೋಚನೆ, ಸಂವಾದ ಮತ್ತು ಉಪನ್ಯಾಸಗಳನ್ನು ಏರ್ಪಡಿಸುವ ಮೂಲಕ ತಿಳಿವಳಿಕೆ ನೀಡುವ ಕೆಲಸ ಮಾಡಲಾಗುವುದು ಎಂದು ವಿವರಿಸಲಾಗಿದೆ.
ಈ ಹೊಸ ಶೈಕ್ಷಣಿಕ ಸುಧಾರಣೆಗಳು ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ, ಅವರ ಸಮಗ್ರ ವಿಕಾಸಕ್ಕೆ ದಾರಿ ಮಾಡಿಕೊಡುವುದು ಎಂದು ನಿರೀಕ್ಷಿಸಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




