ZP recruitment 2026

Raichur ZP Recruitment 2026: 5 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಿಗೆ 5 ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ.

Highlights:

  • ಇಲಾಖೆ: ಜಿಲ್ಲಾ ಪಂಚಾಯತ್, ರಾಯಚೂರು.
  • ಹುದ್ದೆಯ ಹೆಸರು: ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು.
  • ಒಟ್ಟು ಹುದ್ದೆಗಳು: 05.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 29, 2026.
  • ವಿದ್ಯಾರ್ಹತೆ: ಪಿಯುಸಿ (PUC) ಜೊತೆಗೆ ಲೈಬ್ರರಿ ಸೈನ್ಸ್ ಸರ್ಟಿಫಿಕೇಟ್ ಮತ್ತು ಕಂಪ್ಯೂಟರ್ ಕೋರ್ಸ್.

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2026: 5 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ರಾಯಚೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಉತ್ತಮ ಅವಕಾಶ. ರಾಯಚೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದ್ದು, ಒಟ್ಟು 5 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

raichur zp

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಜುಲೈ 29, 2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ವಿದ್ಯಾರ್ಹತೆ, ವಯೋಮಿತಿ, ವೇತನ, ಆಯ್ಕೆ ಪ್ರಕ್ರಿಯೆ ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.

ಗ್ರಾಮ ಪಂಚಾಯತ್ ವಾರು ಖಾಲಿ ಇರುವ ಹುದ್ದೆಗಳ ವಿವರ

ಯಾವ ತಾಲೂಕಿನ ಯಾವ ಗ್ರಾಮ ಪಂಚಾಯತಿಯಲ್ಲಿ ಹುದ್ದೆ ಖಾಲಿ ಇದೆ ಹಾಗೂ ಅದರ ಮೀಸಲಾತಿ ವಿವರಗಳನ್ನು ಈ ಕೆಳಗಿನ ಕೋಷ್ಟಕದಲ್ಲಿ ನೀಡಲಾಗಿದೆ:

ತಾಲೂಕುಗ್ರಾಮ ಪಂಚಾಯತಿ ಹೆಸರುಹುದ್ದೆಗಳ ಸಂಖ್ಯೆಮೀಸಲಾತಿ ವಿವರ (Roster)
ದೇವದುರ್ಗಮಸರಕಲ್1ಪ್ರವರ್ಗ-2ಎ (ಅಂಗವಿಕಲ)
ಮಾನವಿಭೋಗಾವತಿ1ಪರಿಶಿಷ್ಟ ಜಾತಿ – ಪ್ರವರ್ಗ-ಬಿ (ಇತರೆ)
ರಾಯಚೂರುಮರ್ಚಟಾಳ1ಸಾಮಾನ್ಯ ಅಭ್ಯರ್ಥಿ (ಮಹಿಳೆ)
ಸಿರವಾರಗಣದಿನ್ನಿ1ಪರಿಶಿಷ್ಟ ಜಾತಿ – ಪ್ರವರ್ಗ-ಸಿ (ಇತರೆ)
ದೇವದುರ್ಗಜೇರಬಂಡಿ1ಪ್ರವರ್ಗ-2ಬಿ (ಮಹಿಳೆ)

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ

ಶೈಕ್ಷಣಿಕ ಅರ್ಹತೆ (Educational Qualification):

  • ಅಭ್ಯರ್ಥಿಗಳು ಪೂರ್ವ ಪರೀಕ್ಷೆ (ಪಿ.ಯು.ಸಿ / ದ್ವಿತೀಯ ಪದವಿ) ಯಲ್ಲಿ ಉತ್ತೀರ್ಣರಾಗಿರಬೇಕು.
  • ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು.
  • ಕನಿಷ್ಠ ಮೂರು ತಿಂಗಳ ಕಂಪ್ಯೂಟ‌ರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ (Age Limit): ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂತೆ (10-06-2026 ಕ್ಕೆ) ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿಯ ವಿವರ ಹೀಗಿದೆ:

  • ಸಾಮಾನ್ಯ ಅರ್ಹತೆ (GM) ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷಗಳು.
  • ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ಗರಿಷ್ಠ 43 ವರ್ಷಗಳು.
  • ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-1 ರ ಅಭ್ಯರ್ಥಿಗಳಿಗೆ: ಗರಿಷ್ಠ 45 ವರ್ಷಗಳು. (ಸರ್ಕಾರದ ನಿಯಮಗಳ ಪ್ರಕಾರ ಮಾಜಿ ಸೈನಿಕ, ಅಂಗವಿಕಲ ಮತ್ತು ವಿಧವಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.)

ಅರ್ಜಿ ಶುಲ್ಕದ ವಿವರ (Application Fee)

ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸುವ ಮುನ್ನ ತಮ್ಮ ಗ್ರಾಮ ಪಂಚಾಯತಿಯಲ್ಲಿನ ಯಾವುದೇ ಎಸ್‌ಬಿಐ (SBI) ಶಾಖೆಗೆ ಭೇಟಿ ನೀಡಿ ನಿಗದಿತ ಶುಲ್ಕವನ್ನು ಪಾವತಿಸಿ, ರಶೀದಿಯನ್ನು ಪಡೆದುಕೊಳ್ಳಬೇಕು. ಅರ್ಜಿ ಸಲ್ಲಿಸುವಾಗ ಈ ರಶೀದಿಯನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ.

  • ಸಾಮಾನ್ಯ ಅರ್ಹತೆ (GM) ಅಭ್ಯರ್ಥಿಗಳಿಗೆ: ₹500/-
  • ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: ₹300/-
  • SC, ST, ಪ್ರವರ್ಗ-1 ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹200/-
  • ವಿಶೇಷ ಚೇತನ (Specially Abled) ಅಭ್ಯರ್ಥಿಗಳಿಗೆ: ₹100/-

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ (How to Apply)

Step 1: ಮೊದಲಿಗೆ ರಾಯಚೂರು ಜಿಲ್ಲಾ ಪಂಚಾಯತ್‌ನ ಅಧಿಕೃತ ವೆಬ್‌ಸೈಟ್ [https://zpraichur.karnataka.gov.in/kn]

Step 2: ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.

RAICHURU

Step 3: ಸೂಚಿಸಲಾದ ಎಸ್‌ಬಿಐ (SBI) ಖಾತೆಗೆ ಬ್ಯಾಂಕ್ ಮೂಲಕ ಶುಲ್ಕ ಪಾವತಿಸಿ ರಶೀದಿ ಪಡೆದುಕೊಳ್ಳಿ.

Step 4: ವೆಬ್‌ಸೈಟ್‌ನಲ್ಲಿ ನೀಡಲಾದ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಮೂಲಭೂತ ವಿವರಗಳು, ಶೈಕ್ಷಣಿಕ ಮಾಹಿತಿ ಮತ್ತು ಸಂಪರ್ಕ ವಿವರಗಳನ್ನು ಭರ್ತಿ ಮಾಡಿ.

Step 5: ಇತ್ತೀಚಿನ ಫೋಟೋ, ಸಹಿ, ಶೈಕ್ಷಣಿಕ ಅಂಕಪಟ್ಟಿಗಳು, ಲೈಬ್ರರಿ ಮತ್ತು ಕಂಪ್ಯೂಟರ್ ಸರ್ಟಿಫಿಕೇಟ್, ಬ್ಯಾಂಕ್ ರಶೀದಿ ಮತ್ತು ಮೀಸಲಾತಿ ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಿ.

Step 6: ಕೊನೆಯದಾಗಿ ಒದಗಿಸಿದ ಮಾಹಿತಿಯನ್ನು ಪರಿಶೀಲಿಸಿ ಸಬ್ಮಿಟ್ (Submit) ಬಟನ್ ಒತ್ತಿ. ಮುಂದಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಬರೆದಿಟ್ಟುಕೊಳ್ಳಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.

    ಪ್ರಮುಖ ದಿನಾಂಕಗಳು (Important Dates)

    • ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ: 15-07-2026
    • ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-07-2026

    (ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತಿಯ ದೂರವಾಣಿ ಸಂಖ್ಯೆ: 08532-230539 ನ್ನು ಸಂಪರ್ಕಿಸಬಹುದು.)

    Zilla Panchayat Raichur Recruitment 2026  : Important Links

    ವರದಿ: ಲಿಂಗರಾಜ, ನೀಡ್ಸ್ ಆಫ್ ಪಬ್ಲಿಕ್



    WhatsApp Group Join Now
    Telegram Group Join Now

    Leave a Reply

    Your email address will not be published. Required fields are marked *


    Popular Categories