ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ(Sweet news for government employees)! 7ನೇ ವೇತನ ಆಯೋಗದ ವರದಿ ಜಾರಿಗೆ ಸಿದ್ಧತೆ!
ಹೌದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಮತ್ತೊಮ್ಮೆ ಭರವಸೆ ನೀಡಿದ್ದಾರೆ. ಬನ್ನಿ ಈ ಕುರಿತಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
7ನೇ ವೇತನ ಆಯೋಗ: ರಾಜ್ಯ ಸರ್ಕಾರದ ನೌಕರರಿಗೆ ಹೊಸ ಭರವಸೆ
ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆಯಾದ ನಂತರ, ಕರ್ನಾಟಕ ರಾಜ್ಯ ಸರ್ಕಾರದ ನೌಕರರಿಗೆ ಮತ್ತೊಂದು ಹೆಜ್ಜೆ ಮುಂದೆ ಇಡುವ ಭರವಸೆ ದೊರೆಯುತ್ತಿದೆ. ಕೇಂದ್ರ ಚುನಾವಣಾ ಆಯೋಗವು ಲೋಕಸಭೆ ಚುನಾವಣಾ ನೀತಿ ಸಂಹಿತೆಯನ್ನು ವಾಪಸ್ ಪಡೆದಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ನಿರೀಕ್ಷೆ ಇದೆ.
ಕರ್ನಾಟಕದ ಸರ್ಕಾರಿ ನೌಕರರು ಲೋಕಸಭೆ ಚುನಾವಣೆ ನೀತಿ ಸಂಹಿತೆ ವಾಪಸ್ ಪಡೆದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸರ್ಕಾರಿ ನೌಕರರು, ಡಾ. ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸರ್ಕಾರ ಯಾವಾಗ ಜಾರಿಗೊಳಿಸಲಿದೆಯೆಂದು ಕಾದು ಕುಳಿತಿದ್ದಾರೆ.
ಮಾರ್ಚ್ ತಿಂಗಳಿನಿಂದ 7ನೇ ವೇತನ ಆಯೋಗದ ವರದಿ ಜಾರಿಗೆ ಲೋಕಸಭೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಯಿತಾದರೂ, ಇದೀಗ ನೀತಿ ಸಂಹಿತೆ ವಾಪಸ್ ಪಡೆಯಲಾಗಿದೆ. ಈ ಬೆಳವಣಿಗೆ ಸರ್ಕಾರಿ ನೌಕರರಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.
ಮೂಲ ಭರವಸೆ ನೀಡಿದ ನಾಯಕರು:
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳು ದಿನಾಂಕ 3/6/2024ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, 7ನೇ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವಂತೆ ಮನವಿ ಮಾಡಿದರು. ಉಭಯ ನಾಯಕರು ಸಹ ಸರ್ಕಾರಿ ನೌಕರರಿಗೆ ಭರವಸೆ ನೀಡಿದರೂ, ಈ ನಿರೀಕ್ಷೆಯಲ್ಲಿರುವ ನೌಕರರಿಗೆ ಸರ್ಕಾರದ ನಿರ್ಣಯ ನಿರ್ಣಾಯಕವಾಗಲಿದೆ.
ಮಾರ್ಚ್ 16ರಂದು, 7ನೇ ವೇತನ ಆಯೋಗದ ವರದಿ ರಾಜ್ಯದ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗಿತ್ತು. 7ನೇ ವೇತನ ಆಯೋಗವು ಶೇಕಡ 27.5ರಷ್ಟು ಮೂಲ ವೇತನ ಹೆಚ್ಚಳ ಶಿಫಾರಸು ಮಾಡಿದೆ. ಕನಿಷ್ಠ ವೇತನವನ್ನು ರೂ. 17,000 ರಿಂದ ರೂ. 27,000ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ.
ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಕಾರಣ, ವರದಿ ಬಗ್ಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಚುನಾವಣಾ ನೀತಿ ಸಂಹಿತೆ ಜೂನ್ 16ರ ತನಕ ಜಾರಿಯಲ್ಲಿರುವುದರಿಂದ, ಆ ನಂತರವೇ ಸರ್ಕಾರ ಈ ವರದಿ ಜಾರಿ ಕುರಿತು ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
ವಿಧಾನ ಪರಿಷತ್ ಚುನಾವಣೆಗೆ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದ ಕಾರಣ ಜೂನ್ 13ರಂದು ನಡೆಯಬೇಕಿದ್ದ ಚುನಾವಣೆ ರದ್ದಾಗಿದೆ.
ಮಾಜಿ ಹಣಕಾಸು ಸಚಿವ ಕೆ. ಸುಧಾಕರ್ ರಾವ್ ನೇತೃತ್ವದ 7ನೇ ವೇತನ ಆಯೋಗವು ಮಾರ್ಚ್ 15ರಂದು ತನ್ನ ಅವಧಿಯನ್ನು ಮುಕ್ತಾಯಗೊಂಡಿತ್ತು. ವರದಿಯನ್ನು ಸಮರ್ಪಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಿಸಿದ್ದಾರೆ ಮತ್ತು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಸರ್ಕಾರ 7ನೇ ವೇತನ ಆಯೋಗದ ಶಿಫಾರಸುಗಳನ್ನು ಆರ್ಥಿಕ ಇಲಾಖೆಯ ವಿಮರ್ಶೆ ಆಧರಿಸಿ ನಿರ್ಧಾರ ಕೈಗೊಳ್ಳಲಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




