WhatsApp Image 2024 06 13 at 9.13.11 AM

Karnataka Rains: ರಾಜ್ಯದ ಈ 8 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ಇಲ್ಲಿದೆ ಮಾಹಿತಿ

WhatsApp Group Telegram Group

ಕಳೆದ ವಾರದಿಂದ ಬೀಳುತ್ತಿರುವ ಧಾರಾಕಾರ ಮಳೆಗೆ ರಾಜ್ಯದ ಹಲವು ಕಡೆ ಸಂಕಷ್ಟ ಎದುರಾಗಿದ್ದು. ಕೆರೆಕಟ್ಟೆಗಳು ತುಂಬಿವೆ , ಹಲವು ಡ್ಯಾಮ್ ಗಳಿಗೆ ಒಳಹರಿವು ಹೆಚ್ಚಾಗಿದೆ, ಈ ಹಿನ್ನೆಲೆಯಲ್ಲಿ ಮಳೆಯ ರುದ್ರನರ್ತನ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಕರ್ನಾಟಕ ಹವಾಮಾನ ವರದಿ

ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿ ಎರಡು ವಾರಗಳು ಕಳೆದಿವೆ. ಕಳೆದ 4 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿಯಾಗಿ ಮಳೆ ಸುರಿಯುತ್ತಿದೆ. ಎಲ್ಲೆಡೆ ಬಿಟ್ಟೂ ಬಿಡದೆ ಮಳೆ ಸುರಿಯದಿದ್ದರೂ ಆಗಾಗ ಮಳೆಯಾಗುತ್ತಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಕಲಬುರಗಿ, ಬೀದರ್, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಭಾರತೀಯ ಹವಾಮಾನ ಇಲಾಖೆಯು ಯಾದಗಿರಿ, ಕೊಪ್ಪಳ, ರಾಯಚೂರು, ಗದಗ, ಬಳ್ಳಾರಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಇಂದು ಎಲ್ಲೆಲ್ಲಿ ಮಳೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ ಹವಾಮಾನ ಇಲಾಖೆ.

ಈ ಮಾಹಿತಿಗಳನ್ನು ಓದಿ

 

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories