ರಾಜ್ಯದ ಎಲ್ಲಾ ಅಂಗನವಾಡಿ (Anganvadi) ಕೇಂದ್ರಗಳಲ್ಲಿ ಎಲ್ ಕೆಜಿ(LKG), ಯುಕೆಜಿ (UKG) ಆರಂಭ!
ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಸಮ್ಮತಿ ಸೂಚಿಸಿದ್ದಾರೆ. ಮುಖ್ಯ ಕಾರಣ ಅಂಗನವಾಡಿ ಕೇಂದ್ರಗಳನ್ನು ಉನ್ನತಿಕರಿಸುವುದಾಗಿದೆ. ಅಂಗನವಾಡಿ ಕೇಂದ್ರಗಳು ಹೆಚ್ಚು ಅಭಿವೃದ್ಧಿ ಹೊಂದಬೇಕು, ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಇತರ ಉತ್ತಮ ಸೌಲಭ್ಯ ದೊರೆಯಬೇಕು ಎಂಬುದಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ, ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಧ್ಯಮಗಳೊಂದಿಗೆ (Media) ಮಾತುಕತೆ :
ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚನೆಗೆ ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.
ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನ :
ಇದರ ಮುಖ್ಯ ಉದ್ದೇಶ ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ (Pre-primary education)
ನೀಡಲು ತೀರ್ಮಾನಿಸಲಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದಾಗಿದೆ. ಇದರ ಮೂಲಕ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸಹಾಯವಾಗುತ್ತದೆ. ಮಕ್ಕಳಿಗೆ ಇಲಾಖೆಯ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದ್ದು, ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗಿದೆ.
ಸರ್ಕಾರಿ ಮಾಂಟೆಸರಿ (government Montessori) ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ :
ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ(Anganvadi) ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ (Anganvadi workers) ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ 9 ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗಬಾರದು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




