ST/SC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಸ್ಪರ್ಧಾತ್ಮಕ (competitive exams) ಪರೀಕ್ಷೆಗಳ ಸಿದ್ಧತೆಗಾಗಿ ತಿಂಗಳಿಗೆ 15 ಸಾವಿರ ರೂ ದೊರೆಯಲಿದೆ!
ಇಂದು ಎಲ್ಲರೂ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ತಮ್ಮ ಗುರಿಯನ್ನು ಇಟ್ಟುಕೊಂಡಿದ್ದಾರೆ. ಹಲವಾರು ವಿದ್ಯಾರ್ಥಿಗಳು(students) ಕಾಲೇಜಿನಲ್ಲಿ ಓದುತ್ತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುತ್ತಾರೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಬಹಳ ಇರುತ್ತದೆ. ಇದೀಗ ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ (ST/SC students) ಗುಡ್ ನ್ಯೂಸ್ ದೊರೆತಿದೆ. ಸರ್ಕಾರದಿಂದ ಎಸ್ ಟಿ ಎಸ್ ಸಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 15 ಸಾವಿರ ರೂ. ದೊರೆಯುತ್ತದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ರೂ. 15 ಸಾವಿರ :
IAS, IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ SC/ST ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (PM Siddaramayya) ಹೇಳಿದ್ದಾರೆ. SCSP/TSP ಪರಿಷತ್ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು. ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುತ್ತದೆ, ಎಂದು ತಿಳಿಸಿದ್ದಾರೆ.
scsp/tsp ನಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು action plan :
2024-25 ನೇ ಸಾಲಿಗೆ scsp/tsp ನಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು action plan ಅನುಮೋದನೆ ಮಾಡಲಾಗಿದ್ದು, ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 160000 ಕೋಟಿ. ಇದರಲ್ಲಿ scsp/tsp ಗೆ ಸುಮಾರು 39121.46 ಕೋಟಿ scsp/tsp ಅಡಿ 34 ಇಲಾಖೆಗಳಿಗೆ ಹಂಚಿಕೆ ಮಾಡಿರುವ ಹಣ action plan ನಲ್ಲಿದೆ. ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿ, ಈ ಹಣವೂ ಸೇರಲಿದೆ.
ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯ :
ಕಳೆದ ವರ್ಷಕ್ಕಿಂತ ಈ ವರ್ಷ 3900 ಕೋಟಿ ಹೆಚ್ಚಾಗಿದ್ದು, 3900 ಕೋಟಿ ಹೆಚ್ಚುವರಿ ಹಣ ಈ ವರ್ಷ ನೀಡಿದ್ದಾರೆ. ಈ ಹಣ ಇಲಾಖೆಗಳಿಗೆ (financial department) ಹಂಚಿಕೆಯಾಗಿದ್ದು ಇದರ ಸದುಪಯೋಗವಾಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ಸೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಶೇ100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಕಾಯ್ದೆಯಲ್ಲಿದ್ದ 7D ರದ್ದು ಮಾಡಿದ ರೀತಿಯಲ್ಲೇ 7C ಕೂಡ ರದ್ದು ಮಾಡಬೇಕು ಎನ್ನುವ ಶಾಸಕ ನರೇಂದ್ರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಬಾದಕಗಳನ್ನು ಪರಿಶೀಲಿಸಲಾಗುವುದು ಎಂದರು.
ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು (Morarji Desai School) ಆರಂಭಿಸಲೇಬೇಕು. ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ75 ರಷ್ಟು ಸೀಟು, ಉಳಿದ ಶೇ25 ರಷ್ಟು ಸೀಟುಗಳನ್ನು ಇತರೆ ಪ್ರದೇಶದ ವಿಧ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು. ಸರ್ಕಾರಿ ಶಾಲೆಗಿಂತ ಕ್ರೈಸ್ ನಲ್ಲಿ ಓದಿರುವ ಬಡ ವಿಧ್ಯಾರ್ಥಿನಿ ಕ್ರೈಸ್ ಶಾಲೆಯಲ್ಲಿ ಓದಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಇದನ್ನು ಪ್ರೋತ್ಸಾಹಿಸುತ್ತಲೇ ಇತರೆ ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು.
ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ (suspend) ಮಾಡಲಾಗುವುದು. 10 ವರ್ಷದಲ್ಲಿ ಈ ಯೋಜನೆಯಿಂದ ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು.3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ (Parishath meeting) ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈ ವರ್ಷದ action plan ಅನ್ನು ಈ ಸಭೆಯಲ್ಲಿ ಶಾಸಕರು/ಸಚಿವರು/ ಅಧಿಕಾರಿಗಳು ನೀಡಿದ ಸಲಹೆಗಳ ಸಮೇತ ಜಾರಿ ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




