ಗ್ರಾ.ಪಂ ಸಿಬ್ಬಂದಿಗಳಿಗೆ ಗುಡ್ ನ್ಯೂಸ್, ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವವರನ್ನು ಸರ್ಕಾರಿ ನೌಕರರೆಂದು ಘೋಷಿಸಿ!
ಇಂದು ಹಲವಾರು ಕ್ಷೇತ್ರಗಳಲ್ಲಿ ಜನರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮ, ತಾಲೂಕು ಪಂಚಾಯತ್ ಗಳಲ್ಲಿ ಹಲವು ಸಿಬ್ಬಂದಿಗಳು ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದಾರೆ. ಅವರಿಗೆ ಸರ್ಕಾರದಿಂದ (Government) ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ. ಈ ಕಾರಣದಿಂದಾಗಿ ಇದೀಗ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ ಸರ್ಕಾರಿ ನೌಕರರು ಎಂದು ಘೋಷಿಸಿ ಅವರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು (facilities) ಒದಗಿಸಬೇಕು ಎಂಬುದಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸು ವವರನ್ನು ಸರ್ಕಾರಿ ನೌಕರರು ಎಂದು ಘೋಷಿಸಿ :
ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಯನ್ನು ಸರ್ಕಾರ ಏಕಕಾಲದಲ್ಲಿ ರಾಜ್ಯ ಸರ್ಕಾರಿ ನೌಕರರು (state government employees) ಎಂದು ಘೋಷಿಸಿ ಸೌಲಭ್ಯ ನೀಡಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಖಜಾಂಚಿ ಆರ್.ಎಸ್.ಬಸವರಾಜ ಮನವಿ ಮಾಡಿದ್ದಾರೆ.
ಗ್ರಾಮ ಪಂಚಾಯಿತಿಗಳಲ್ಲಿ 65 ಸಾವಿರ ಸಿಬ್ಬಂದಿಗಳಿಗೆ ಸರ್ಕಾರದ ಸೌಲಭ್ಯಗಳು (government facilities) ದೊರೆಯಬೇಕು :
ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ 65 ಸಾವಿರ ಸಿಬ್ಬಂದಿ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು, ಸ್ವಚ್ಛತಾ ಕಾರ್ಯ ಸೇರಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತಿದ್ದಾರೆ. ಆದರೆ ಈ ಸಿಬ್ಬಂದಿಗೆ ಸರ್ಕಾರದಿಂದ ಇದುವರೆಗೂ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಈ ಎಲ್ಲಾ ವಿಷಯಗಳನ್ನು ಮುಂದಿಟ್ಟುಕೊಂಡು ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಸೌಲಭ್ಯ ಒದಗಿಸಬೇಕು ಎಂದು ಸರ್ಕಾರಕ್ಕೆ ಮನವಿಮಾಡಲಾಗಿದೆ.
ವೇತನ (salary) ಸೇರಿದಂತೆ ಹಲವು ಮುಖ್ಯ ಸೌಲಭ್ಯಗಳನ್ನು ಸರ್ಕಾರ ನೀಡಬೇಕು :
ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಕನಿಷ್ಟ ವೇತನ ₹31 ಸಾವಿರ ನಿಗದಿಗೊಳಿಸಬೇಕು. ನಿವೃತ್ತಿ ಹೊಂದಿದ ನೌಕರರಿಗೆ ಮಾಸಿಕವಾಗಿ ₹5 ಸಾವಿರ ಪಿಂಚಣಿ ನೀಡಬೇಕು. ನೌಕರರ ಕುಟುಂಬ ಸದಸ್ಯರಿಗೂ ಆರೋಗ್ಯ ವಿಮೆ ನೀಡಿ ₹50 ಸಾವಿರವರೆಗೆ ಉಚಿತ ಚಿಕಿತ್ಸಾ ಸೌಲಭ್ಯ (free health facilities) ನೀಡಬೇಕು. ಮರಣ ಹೊಂದಿದ ನೌಕರರ ಕುಟುಂಬ ಸದಸ್ಯರಿಗೆ ಅನುಕಂಪದ ವೇತನ ನೀಡಬೇಕು. ಪ್ರತಿ ತಿಂಗಳು 5ನೇ ತಾರೀಖಿಗೆ ವೇತನ ನೀಡಬೇಕು’ ಎಂದು ಒತ್ತಾಯಿಸಲಾಗಿದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




