ಈ ವರದಿಯಲ್ಲಿ ESIC ನೇಮಕಾತಿ 2025 (ESIC Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ನೌಕರರ ರಾಜ್ಯ ವಿಮಾ ನಿಗಮ (Employees’ State Insurance Corporation (ESIC) 2025ನೇ ಸಾಲಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ನೇಮಕಾತಿಯಲ್ಲಿ ಪ್ರಮುಖವಾದ ವಿಮಾ ವೈದ್ಯಕೀಯ ಅಧಿಕಾರಿ (Insurance Medical officer) ಗ್ರೇಡ್-2 ಹುದ್ದೆಗಳು(Grade -2 posts) ಸೇರಿದ್ದು, ದೇಶಾದ್ಯಂತ 21 ರಾಜ್ಯಗಳಲ್ಲಿ ಅವಕಾಶಗಳನ್ನು ಒದಗಿಸುತ್ತಿವೆ. ಅಭ್ಯರ್ಥಿಗಳಿಗೆ ಉತ್ತಮ ವೇತನ ಮತ್ತು ಸೌಲಭ್ಯಗಳನ್ನು ನೀಡುವ ಈ ಹುದ್ದೆಗಳು, ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಉತ್ಸಾಹಿಯಾಗಿರುವವರಿಗೆ ಚಿತ್ತಾಕರ್ಷಕ ಅವಕಾಶವಾಗಿದೆ.
ನೇಮಕಾತಿಯ ಪ್ರಮುಖ ಅಂಶಗಳು: ಹುದ್ದೆಗಳ ವಿವರ:
ವೈದ್ಯಕೀಯ ಅಧಿಕಾರಿ ಹುದ್ದೆಗಳ ಭರ್ತಿಗೆ ಆಯಾ ವರ್ಗದ ಪ್ರಕಾರ ಹಂಚಿಕೆ ಮಾಡಲಾಗಿದೆ:
ಸಾಮಾನ್ಯ ವರ್ಗ (UR): 254
ಪರಿಶಿಷ್ಟ ಜಾತಿ (SC): 63
ಪರಿಶಿಷ್ಟ ಪಂಗಡ (ST): 53
ಒಬಿಸಿ (OBC): 178
ಇಡಬ್ಲ್ಯೂಎಸ್(EWS): 60
ವಿಕಲಚೇತನರಿಗೆ (PWD): 90
ವೇತನ ಶ್ರೇಣಿ:
ಲೇವೆಲ್-10 ಅನ್ವಯ, ₹56,100 ರಿಂದ ₹1,77,500 (ಮಾಸಿಕ ₹1 ಲಕ್ಷದ ಮೇಲೆ). ಜೊತೆಗೆ ವಿವಿಧ ಭತ್ಯೆಗಳು ಮತ್ತು ಸೌಲಭ್ಯಗಳು ಲಭ್ಯವಿವೆ.
ನೇಮಕಾತಿ ಸ್ಥಳಗಳು:
ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ದೆಹಲಿ ಸೇರಿದಂತೆ 21 ರಾಜ್ಯಗಳಲ್ಲಿ ನೇಮಕಾತಿ ನಡೆಯಲಿದೆ.
ಅರ್ಹತೆಯ ಮುಖ್ಯ ಅಂಶಗಳು:
ವಿದ್ಯಾರ್ಹತೆ:
ಭಾರತೀಯ ವಿಮಾ ನಿಗಮ ನೇಮಕಾತಿ ಪ್ರಕಾರ ಅಭ್ಯರ್ಥಿಗಳು ಮಾನ್ಯತಾ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಪಾಸಾಗಿರಬೇಕು MMBS ಪದವಿ ಪೂರ್ಣಗೊಳಿಸಬೇಕು.
Application Fees:
ಯಾವುದೇ ಅರ್ಜಿ ಶುಲ್ಕ ಇಲ್ಲ
ಗರಿಷ್ಠ ವಯೋಮಿತಿ: 35 ವರ್ಷ (ಸಡಿಲತೆಗಳು ಅಲಭ್ಯ ವರ್ಗದವರಿಗೆ ಅನ್ವಯ).
ಅಯ್ಕೆ ಪ್ರಕ್ರಿಯೆ
ಮೂಲ ಆಧಾರ: 2022 ಮತ್ತು 2023ರ ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಎಕ್ಸಾಮಿನೇಷನ್ (CMSE) ಫಲಿತಾಂಶದ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಗಳಿಗೆ ಸೂಚನೆ: ಆಯ್ಕೆ ಪ್ರಕ್ರಿಯೆಯ ವಿವರಗಳನ್ನು ನೋಂದಾಯಿತ ಇಮೇಲ್ ಮೂಲಕ ಕಳುಹಿಸಲಾಗುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ಗಳು :
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:16-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2025
ನೋಟಿಫಿಕೇಶನ್ ಲಿಂಕ್ (Notification link):
ಅಧಿಕೃತ ವೆಬ್‌ಸೈಟ್ ಲಿಂಕ್(Official website link) : esic.gov.in
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅರ್ಜಿ ಸಲ್ಲಿಸಲು ಆನ್‌ಲೈನ್ ಪ್ಲಾಟ್‌ಫಾರ್ಮ್‌ನ ಮೂಲಕ ಹೀಗೆ ಮುಂದುವರಿಯಿರಿ:
ಹಂತ 1: ಮೊದಲು, ಅಧಿಕೃತ ವೆಬ್‌ಸೈಟ್ ಗೆ (Official Website) ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ
(esic.gov.in)
ಹಂತ 2: ನಂತರ ನೋಂದಣಿಯನ್ನು ಮಾಡಿಕೊಳ್ಳಿ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಹಂತ 3: ಅಭ್ಯರ್ಥಿಗಳು ಫೋಟೋ, ಸಹಿ, ಹುಟ್ಟಿದ ದಿನಾಂಕದ ದಾಖಲೆ, ಗುರುತಿನ ಪುರಾವೆ, ಅಗತ್ಯ ಅರ್ಹತೆಯ ಮಾರ್ಕ್‌ಶೀಟ್, ವರ್ಗ ಪ್ರಮಾಣಪತ್ರ (ಅನ್ವಯಿಸಿದರೆ). ಹೀಗೆ ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು
ಹಂತ 4: ಅರ್ಜಿ ಶುಲ್ಕವನ್ನು ಪಾವತಿಸಿ.(ಅನ್ವಯಿಸಿದಲ್ಲಿ)
ಹಂತ 5: ಸಂಪೂರ್ಣ ಅರ್ಜಿ ನಮೂನೆಯನ್ನು ಪೂರ್ವವೀಕ್ಷಿಸಲು ಮತ್ತು ಪರಿಶೀಲಿಸಲು ಪೂರ್ವವೀಕ್ಷಣೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಹಂತ 6: ಅಂತಿಮ ಸಲ್ಲಿಕೆ ಮೊದಲು, ಅಗತ್ಯವಿದ್ದಲ್ಲಿ ವಿವರಗಳನ್ನು ಮಾರ್ಪಡಿಸಿ ಮತ್ತು ನೀವು ಭರ್ತಿ ಮಾಡಿದ ಫೋಟೋ, ಸಹಿ ಮತ್ತು ಇತರ ವಿವರಗಳನ್ನು ಪರಿಶೀಲಿಸಿದ ನಂತರ ಮತ್ತು ಖಚಿತಪಡಿಸಿದ ನಂತರವೇ ಅಂತಿಮ ಸಲ್ಲಿಕೆ ಮಾಡಿ.
ಅರ್ಥಪೂರ್ಣ ಅವಕಾಶ :
ESIC ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳು, ವೈದ್ಯಕೀಯ ಸೇವಾ ವೃತ್ತಿಪರರಿಗೆ ದೇಶಾದ್ಯಂತ ಜನರ ಆರೋಗ್ಯ ಸೇವೆಗೆ ತಮ್ಮದೇ ಆದ ಕೊಡುಗೆಯನ್ನು ನೀಡಲು ಸೂಕ್ತ ವೇದಿಕೆಯನ್ನು ಒದಗಿಸುತ್ತವೆ. ಉತ್ತಮ ವೇತನ, ಸ್ಥಿರ ಉದ್ಯೋಗ, ಮತ್ತು ಸೇವಾ ಭದ್ರತೆ ಇವು ಈ ಹುದ್ದೆಗಳನ್ನು ಇನ್ನಷ್ಟು ಆಕರ್ಷಕವಾಗಿಸುತ್ತವೆ.
ಕೊನೆಯದಾಗಿ ಹೇಳುವುದಾದರೆ, ಅಭ್ಯರ್ಥಿಗಳು ಈ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಅಧಿಕೃತ ವೆಬ್‌ಸೈಟ್ esic.gov.in ಗೆ ಭೇಟಿ ನೀಡಿ, ಎಲ್ಲಾ ಮಾಹಿತಿಯನ್ನು ಪರಿಶೀಲಿಸಿ, ಅರ್ಜಿಯನ್ನು ಶೀಘ್ರದಲ್ಲೇ ಸಲ್ಲಿಸಿ. ನಿಮ್ಮ ಕರಿಯರ್ ಅನ್ನು ವೈದ್ಯಕೀಯ ಕ್ಷೇತ್ರದಲ್ಲಿ ಬೆಳೆಸಲು ಇದು ಉತ್ತಮ ವೇದಿಕೆ.”ಅಭ್ಯರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಶುಭಾಶಯಗಳು!” ಮತ್ತು ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group




