IMG 20250228 WA0003

ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ: DK Shivakumar

Categories:
WhatsApp Group Telegram Group

“ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ” – ಕುಂಭಮೇಳ ಟೀಕೆಗಳಿಗೆ ಡಿಕೆ ಶಿವಕುಮಾರ್(DK Sivakumar) ಖಡಕ್ ಉತ್ತರ

ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ, ಆದರೆ ಎಲ್ಲ ಧರ್ಮಗಳ ಮೇಲೂ ನನಗೆ ಗೌರವವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕುಂಭಮೇಳದಲ್ಲಿ(Kumbh Mela) ಭಾಗವಹಿಸಿದ್ದನ್ನು ಟೀಕಿಸಿರುವವರಿಗೆ  ಖಡಕ್ ಉತ್ತರ ನೀಡಿದ ಅವರು, ಈ ಕಾರ್ಯಕ್ರಮವನ್ನು ಯೋಗಿ ಆದಿತ್ಯನಾಥ್ ಸರ್ಕಾರ(Yogi Adityanath Govt) ಅತ್ಯುತ್ತಮವಾಗಿ ಆಯೋಜಿಸಿದ್ದಾರೆ ಎಂದು ಹೇಳಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಸದಾಶಿವನಗರದಲ್ಲಿ(Sadashivnagar) ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  “ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ. ಆದರೆ, ಎಲ್ಲ ಧರ್ಮಗಳ ಮೇಲೂ ನನಗೆ ಗೌರವವಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ. ಹಾಗೂ ಉತ್ತರ ಪ್ರದೇಶ ಸರ್ಕಾರ ಈ ಬೃಹತ್ ಕಾರ್ಯಕ್ರಮವನ್ನು ಶಿಸ್ತುಬದ್ಧವಾಗಿ ಮತ್ತು ಅದ್ಭುತವಾಗಿ ಆಯೋಜಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನು, ಈ ಭೇಟಿ ರಾಜಕೀಯದ(politics) ಅರ್ಥದಲ್ಲಿ ನೋಡುವ ವಿಷಯವಲ್ಲ ಎಂದು ತಮ್ಮ ಪಕ್ಷದವರಿಗೂ, ವಿರೋಧಿಗಳಿಗೋ ಖಡಕ್ ಉತ್ತರ ನೀಡಿದ್ದಾರೆ. “ನಾನು ಕುಂಭಮೇಳದಲ್ಲಿ ಭಾಗವಹಿಸಿದ್ದಕ್ಕೆ ಬಿಜೆಪಿ(BJP) ಪಕ್ಷದತ್ತ ಹೋಗುತ್ತಿದ್ದೇನೆ ಎಂದು ಹೇಳಲಾಗುತ್ತಿದೆ. ಆದರೆ ನಾನು ಹುಟ್ಟು ಕಾಂಗ್ರೆಸ್ಸಿಗ(Congress). ನನ್ನ ನಂಬಿಕೆಗೆ ಅನುಗುಣವಾಗಿ ನಾನು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ಇದನ್ನು ರಾಜಕೀಯವಾಗಿ ನೋಡುವುದು ಬೇಡ ಎಂದು ತಿಳಿಸಿದ್ದಾರೆ.

ಇನ್ನು, ಶಿವರಾತ್ರಿಯ ಪ್ರಯುಕ್ತ ಇಶಾ ಫೌಂಡೇಶನ್‌ಗೆ(Isha Foundation) ಭೇಟಿ ನೀಡಿದ್ದಕ್ಕಾಗಿ ಹೊಸ ಟೀಕೆಗಳು ಎದುರಾಗಿದ್ದು, ಈ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, “ನಾನು ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಹೋಗಬಹುದು. ಆದರೆ ಇದನ್ನು ರಾಜಕೀಯ ಕೋನದಿಂದ ನೋಡುವುದು ಸರಿಯಲ್ಲ. ಧರ್ಮ ಮತ್ತು ರಾಜಕಾರಣವನ್ನು ಪ್ರತ್ಯೇಕವಾಗಿ ನೋಡಬೇಕು” ಎಂದು ತಿಳಿಸಿದ್ದಾರೆ.

ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ನಾನು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ನಮ್ಮ ಪಕ್ಷದ ಕಚೇರಿ ನಮಗೆ ದೇವಸ್ಥಾನವಿದ್ದಂತೆ. ನಾವು ನಮ್ಮ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದೇವೆ. ಕಾಂಗ್ರೆಸ್ ಕಚೇರಿಗೆ(Congress office) ಹೋಗದೆ, ನಾನು ಬಿಜೆಪಿ ಕಚೇರಿಗೆ ಅಥವಾ ಕೇಶವ ಕೃಪೆಗೆ ಹೋಗಬೇಕಾ? ಎಂಬ ಪ್ರಶ್ನೆಯನ್ನು ಮಾಡಿದರು. ರಾಜಕೀಯ ನಿಷ್ಠೆ ಬಗ್ಗೆ ಉದ್ಭವಿಸಿದ್ದ ಊಹಾಪೋಹಗಳಿಗೆ ಸ್ಪಷ್ಟನೆ ನೀಡುತ್ತಾ, ನಾನು ಹುಟ್ಟು ಕಾಂಗ್ರೆಸ್ಸಿಗ, ನನ್ನ ನಂಬಿಕೆ, ನಿಷ್ಠೆ ಕಾಂಗ್ರೆಸ್ ಪಕ್ಷದತ್ತ ಎಂದು ತಿಳಿಸಿದರು. ಹಾಗೆ ನನ್ನ ಧಾರ್ಮಿಕ ನಂಬಿಕೆ ವೈಯಕ್ತಿಕವಾಗಿದ್ದು, ಅದನ್ನು ರಾಜಕೀಯದಿಂದ ಪ್ರತ್ಯೇಕವಾಗಿ ನೋಡಬೇಕು ಎಂದು ತಿಳಿಸಿದ್ದಾರೆ.

ಇಂತಹ ಉತ್ತಮವಾದ  ಮಾಹಿತಿಯನ್ನು ನೀವು ತಿಳಿದಮೇಲೆ  ಈ ಮಾಹಿತಿಯನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories