6000 ಗೃಹ ಲಕ್ಷ್ಮಿ ಹಣ ಬಿಡುಗಡೆಗೆ ಕೊನೆಗೂ ಸ್ಪಷ್ಟತೆ: ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್
ಕರ್ನಾಟಕ ಸರ್ಕಾರ (Karnataka Government) 2023ರ ವಿಧಾನಸಭೆ ಚುನಾವಣೆ ವೇಳೆ ಘೋಷಿಸಿದ್ದ ಪಂಚ ಗ್ಯಾರಂಟಿಗಳಲ್ಲಿ ಪ್ರಮುಖವಾದ ‘ಗೃಹ ಲಕ್ಷ್ಮಿ’ ಯೋಜನೆ(Gruhalakshmi Scheme) ಪ್ರತಿ ಗೃಹಿಣಿಗೆ ಪ್ರತಿ ತಿಂಗಳು ರೂ.2000 ನೀಡುವ ಮಹತ್ವಾಕಾಂಕ್ಷಿ ಸಾಮಾಜಿಕ ಭದ್ರತಾ ಯೋಜನೆ. ಈ ಯೋಜನೆಯು ದೇಶಾದ್ಯಾಂತ ಗಮನ ಸೆಳೆದಿದ್ದು, ಲಕ್ಷಾಂತರ ಮಹಿಳಾ ಫಲಾನುಭವಿಗಳಿಗೆ ಆರ್ಥಿಕ ನಿರಾಳತೆ ಒದಗಿಸುವ ಗುರಿಯನ್ನು ಹೊಂದಿದೆ. ಆದರೆ ಇತ್ತೀಚಿನ ತಿಂಗಳಲ್ಲಿ ಯೋಜನೆಯ ಅಡಿಯಲ್ಲಿ ಹಣ ಜಮೆಯಾಗದಿರುವುದು ಮಹಿಳಾ ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಕುರಿತು ಸ್ಪಷ್ಟನೆ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್(Women and Children Welfare Department Minister Lakshmi Hebbalkar), “ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹ ಲಕ್ಷ್ಮಿ ಯೋಜನೆಯ ಹಣ ಬಾಕಿಯಾಗಿದ್ದು, ಅದನ್ನು ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು” ಎಂದು ಘೋಷಿಸಿದರು. “ಅದಷ್ಟು ಶೀಘ್ರದಲ್ಲಿ ಈ ಹಣ ಬಿಡುಗಡೆ ಮಾಡುವ ಪ್ರಯತ್ನ ನಡೆಯುತ್ತಿದೆ” ಎಂದು ಸಚಿವರು ಭರವಸೆ ನೀಡಿದರು.
ಉಡುಪಿ ಜಿಲ್ಲೆಯ (Udupi District) ಕುಂದಾಪುರ ತಾಲೂಕು ಕೋಟೇಶ್ವರದಲ್ಲಿ ನಿರ್ಮಿಸಲಾದ ನೂತನ ರೈತ ಸಂಪರ್ಕ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರೈತರ ವಿಚಾರಗಳತ್ತ ಗಮನ ಹರಿಸಿ, “ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು (New Technologies) ಅಳವಡಿಸಿಕೊಂಡು ಹೆಚ್ಚಿನ ಆದಾಯ ಗಳಿಸಬೇಕು. ರೈತರ ಸುಖಿ ಬದುಕೇ ದೇಶದ ಪ್ರಗತಿಯ ದಾರಿ” ಎಂದು ಅಭಿಪ್ರಾಯಪಟ್ಟರು.
ರೈತ ಸಂಪರ್ಕ ಕೇಂದ್ರಗಳು (Farmer Contact Centers) ರೈತರಿಗೂ ಸರ್ಕಾರಕ್ಕೂ ನಡುವಣ ಸೇತುವೆಯಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ ಅವರು, ಅಧಿಕಾರಿಗಳು ರೈತರಿಗೆ ನೇರವಾಗಿ ಮಾಹಿತಿ, ಮಾರ್ಗದರ್ಶನ, ಹಾಗೂ ಸರ್ಕಾರಿ ಸೌಲಭ್ಯಗಳನ್ನು (Government facilities) ತಲುಪಿಸಬೇಕು ಎಂದರು. “ಪ್ರತಿ ಗ್ರಾಮ ಪಂಚಾಯತಿಯಲ್ಲಿ ಮಾಹಿತಿ ಫಲಕ ಅಳವಡಿಸಿ, ರೈತರಿಗೆ ವಿವಿಧ ಯೋಜನೆಗಳ ಮಾಹಿತಿಯ ಪ್ರವೇಶ ಸಾಧ್ಯವಾಗಬೇಕು,” ಎಂದು ಅವರು ಅಧಿಕಾರಿಗಳಿಗೆ ಆದೇಶ ನೀಡಿದರು.
ಈ ಸಂದರ್ಭದಲ್ಲಿ ಅವರು ಭಾರತದ ಕೃಷಿ ಹಿನ್ನೆಲೆಯತ್ತ ತಿರುಗಿ ನೋಡುತ್ತಾ, “ಭಾರತ ಒಂದು ಕೃಷಿ ಪ್ರಧಾನ ದೇಶ(India is an agricultural dominant country). ಹಳ್ಳಿಗಳ ಸಮೃದ್ಧಿ ಮೂಲಕ ರಾಷ್ಟ್ರ ಪ್ರಗತಿಯನ್ನು ಸಾಧಿಸಬೇಕು. ಲಾಲ್ ಬಹದ್ದೂರ್ ಶಾಸ್ತ್ರಿ ಹೇಳಿದಂತೆ ‘ಜೈ ಜವಾನ್, ಜೈ ಕಿಸಾನ್’ ಎಂಬ ಘೋಷಣೆ ಇಂದು ಹೆಚ್ಚು ಪ್ರಸ್ತುತವಾಗಿದೆ,” ಎಂದರು.
ಅಪಘಾತದಿಂದ (Accident) ಬದುಕುಳಿದ ನಂತರ ಮತ್ತೆ ರಾಜಕೀಯ ಜೀವನಕ್ಕೆ ವಾಪಸಾಗಿರುವ ಹೆಬ್ಬಾಳ್ಕರ್, ಭಾವುಕರಾಗಿ, “ದೇವರ ಮತ್ತು ಜನರ ಆಶೀರ್ವಾದದಿಂದ ಬದುಕುಳಿದು, ನಿಮ್ಮ ಸೇವೆಗೆ ಮತ್ತೆ ಹಿಂದಿರುಗಿದ್ದೇನೆ,” ಎಂದು ಸಂತಸ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್(District Superintendent of Police Dr. K. Arun), ಹಾಗೂ ವಿವಿಧ ಸ್ಥಳೀಯ ಪ್ರತಿನಿಧಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.