ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಒಂದು ಸಂತೋಷದ ಸುದ್ದಿ ನೀಡಿದೆ. ದೀರ್ಘಕಾಲದ ಬೇಡಿಕೆಯನ್ನು ಪರಿಗಣಿಸಿ, ಸರ್ಕಾರವು ಈ ಎಲ್ಲಾ ಬೋಧಕರ ಮಾಸಿಕ ಗೌರವಧನೆಯನ್ನು ₹2,000 ಹೆಚ್ಚಿಸುವ ನಿರ್ಧಾರ ತೆಗೆದುಕೊಂಡಿದೆ. ಈ ಹೆಚ್ಚಳವು ತಕ್ಷಣ ಜಾರಿಗೆ ಬರುವುದು ಮತ್ತು ಮುಂದಿನ ನೋಟಿಫಿಕೇಷನ್ ಬರುವವರೆಗೆ ಈ ಪರಿಷ್ಕೃತ ವೇತನ ಚಾಲ್ತಿಯಲ್ಲಿರುತ್ತದೆ.
ಇದಕ್ಕೂ ಮುಂಚೆ, ಸರ್ಕಾರವು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹10,000 ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಗೌರವ ಸಂಭಾವನೆ ನೀಡುತ್ತಿತ್ತು. ಈಗ, ಈ ಮೊತ್ತಕ್ಕೆ ಹೆಚ್ಚುವರಿ ₹2,000 ಸೇರಿಸಲಾಗಿದೆ. ಇದರಿಂದ, ಪ್ರಾಥಮಿಕ ಶಾಲಾ ಶಿಕ್ಷಕರ ಹೊಸ ಗೌರವಧನ ₹12,000 ಮತ್ತು ಪ್ರೌಢಶಾಲಾ ಶಿಕ್ಷಕರದು ₹12,500 ಆಗಿದೆ.
ಅದೇ ರೀತಿ, ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಾರ್ಯರತ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಗೂ ₹2,000 ಹೆಚ್ಚಳವಾಗಿದೆ. ಇದಕ್ಕೆ ಮೊದಲು, ಅತಿಥಿ ಉಪನ್ಯಾಸಕರಿಗೆ ₹12,000 ನೀಡಲಾಗುತ್ತಿತ್ತು. ಆದರೆ, ಈಗ ಅದು ₹14,000ಕ್ಕೆ ಏರಿಕೆಯಾಗಿದೆ. ಈ ನಿರ್ಧಾರವು ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.