ಬಳ್ಳಾರಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗೃಹ ಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳೂ ನೀಡುವುದಾಗಿ ಯಾವುದೇ ಭರವಸೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಾಧನಾ ಸಮಾವೇಶದ ನಂತರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು “ಗೃಹ ಲಕ್ಷ್ಮಿ ನಿಧಿ ಯಾವಾಗ ಸಾಮಾನ್ಯರಿಗೆ ತಲುಪುತ್ತದೆ?” ಎಂದು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಶಿವಕುಮಾರ್ ಅವರು, “ತಿಂಗಳಿಗೊಮ್ಮೆ ಹಣವನ್ನು ನಿಯಮಿತವಾಗಿ ನೀಡುತ್ತೇವೆ ಎಂಬ ಹೇಳಿಕೆ ನಾವು ನೀಡಿಲ್ಲ. ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಸರ್ಕಾರದ ಕ್ರಮಗಳು ಮತ್ತು ನಿಧಿಯ ಸರಬರಾಜು ನಿಧಾನಗತಿಯಲ್ಲಿ ಸಾಗಬಹುದು” ಎಂದು ವಿವರಿಸಿದರು.
“ಗುತ್ತಿಗೆದಾರರು ಕೆಲಸ ಮುಗಿಸಿದ ನಂತರ ಹಣವನ್ನು ತಕ್ಷಣವೇ ಪಡೆಯುತ್ತಾರೆಂದು ಭಾವಿಸಬಾರದು. ಕೆಲವು ಸಂದರ್ಭಗಳಲ್ಲಿ ಎರಡು ಮೂರು ವರ್ಷಗಳವರೆಗೆ ಸಮಯ ಬೇಕಾಗುತ್ತದೆ. ಅದೇ ರೀತಿ, ಗೃಹ ಲಕ್ಷ್ಮಿ ಯೋಜನೆಯ ನಿಧಿಯೂ ಸರ್ಕಾರದ ಸಾಮರ್ಥ್ಯ ಮತ್ತು ಸಿದ್ಧತೆಗೆ ಅನುಗುಣವಾಗಿ ಬಿಡುಗಡೆಯಾಗುತ್ತದೆ.”ಅದೇ ರೀತಿ ಗೃಹಲಕ್ಷ್ಮೀ ಯೋಜನೆಯ ಹಣ ಯಜಮಾನಿಯರಿಗೆ ಬಂದಾಗ ಬರುತ್ತೆ ಅಂತ ಹಾರಿಕೆ ಉತ್ತರ ನೀಡಿದರು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.