ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆ – ರೈತರು ಹಾಗೂ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕರೆ.
ಇತ್ತೀಚಿನ ಹವಾಮಾನ ಬದಲಾವಣೆಗಳು (Weather changes) ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಕಾಣಬರುತ್ತಿದ್ದು, ರಾಜ್ಯದ ವಾಸಿಗಳಿಗೆ ಮುನ್ನೆಚ್ಚರಿಕೆ ಅಗತ್ಯವಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಕೆಲವು ದಿನಗಳು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ. ಕೃಷಿಕರು, ಪ್ರಯಾಣಿಕರು ಮತ್ತು ಸಾರ್ವಜನಿಕರು ತಮ್ಮ ದಿನಚರಿಯಲ್ಲಿ ಜಾಗರೂಕತೆ ವಹಿಸಬೇಕಾಗಿದೆ. ಮುಖ್ಯವಾಗಿ ಮಳೆಗಾಲದ ಆರಂಭದ ಸಂಕೇತವಾಗಿ ಈ ಪರಿಸ್ಥಿತಿ ಪರಿಗಣಿಸಲಾಗುತ್ತಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಭಾರಿ ಮಳೆಯ ಮುನ್ಸೂಚನೆ: ಜಿಲ್ಲಾವಾರು ವಿವರ
ಕರಾವಳಿ ಜಿಲ್ಲೆಗಳಾದ (Coastal districts) ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ವಿಜಯಪುರ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಮೇ 19:
ಇಂದಿಗೆ ಹೋಲಿಸಿದರೆ ನಾಳೆ ಭಾರಿ ಮಳೆಯ ಸಾಧ್ಯತೆ ಇದೆ. ಒಟ್ಟಾರೆಯಾಗಿ ಈ ಮೇಲಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ (Thunderstorm) ಮುಂದುವರಿಯುವ ಸೂಚನೆ ಇದೆ.
ಮೇ 20:
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ.
ಮೇ 21:
ಕರಾವಳಿಯ ಎಲ್ಲ ಜಿಲ್ಲೆಗಳ ಜತೆಗೆ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯ ಮುನ್ಸೂಚನೆ(Moderate or thunderstorms forecast) ನೀಡಲಾಗಿದೆ.
ಮೇ 22 ಮತ್ತು 23:
ಈ ದಿನಗಳಲ್ಲಿ ಮಳೆಯ ಪ್ರಮಾಣವು ಮತ್ತೆ ಹೆಚ್ಚಾಗಲಿದ್ದು, ಉಡುಪಿ, ದಕ್ಷಿಣ ಮತ್ತು ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬೆಂಗಳೂರಿನ ಹವಾಮಾನ (Bangalore weather) ಯಾವರೀತಿಯಿದೆ?:
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡಕವಿದ ವಾತಾವರಣವಿರುವುದು (Cloudy weather) ನಿರೀಕ್ಷಿತವಾಗಿದೆ. ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಆಗಿರಲಿದೆ.
ಕರ್ನಾಟಕದ (Karnataka) ಹಲವಾರು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳು ಮಳೆಯಾಗುವ ಸಾಧ್ಯತೆ ಅಧಿಕವಾಗಿರುವುದರಿಂದ ಜನತೆ ಎಚ್ಚರಿಕೆಯಿಂದಿರುವುದು ಅತ್ಯಂತ ಅಗತ್ಯವಾಗಿದೆ. ರೈತರು ತಮ್ಮ ಬೆಳೆಗಳನ್ನು ರಕ್ಷಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಸಿಗರು, ವಾಹನ ಸವಾರರು ಹಾಗೂ ವಿದ್ಯಾರ್ಥಿಗಳು(Tourists, motorists and students) ತಮ್ಮ ದಿನಚರಿಯಲ್ಲಿ ಸುರಕ್ಷತೆ ಪಾಲಿಸಬೇಕು. ಹವಾಮಾನ ಇಲಾಖೆ ನೀಡಿರುವ ಈ ಮುನ್ಸೂಚನೆ ಗಂಭೀರವಾಗಿ ಪರಿಗಣಿಸುವ ಮೂಲಕ ಅಪಾಯದ ಪರಿಸ್ಥಿತಿಯನ್ನು ತಪ್ಪಿಸಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.