ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಕೇರಳಕ್ಕೆ ಪ್ರವೇಶಿಸಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಭಾನುವಾರ ಮತ್ತು ಸೋಮವಾರ ಮೋಡಕವಿದ ವಾತಾವರಣವಿದ್ದು, ಮಿಂಚು-ಗುಡುಗುಗಳೊಂದಿಗೆ ಸಾಧಾರಣ ಮಳೆ ಆಗಲಿದೆ. ಗಂಟೆಗೆ 40-50 ಕಿಲೋಮೀಟರ್ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 21°C ರಷ್ಟು ಇರಲಿದೆ.
ಮುಂದಿನ ಮೂರು ದಿನಗಳಲ್ಲಿ ಮಧ್ಯ ಅರಬ್ಬಿ ಸಮುದ್ರ, ಮುಂಬೈ, ಮಹಾರಾಷ್ಟ್ರ, ಬೆಂಗಳೂರು, ಆಂಧ್ರಪ್ರದೇಶ, ತಮಿಳುನಾಡು ಮತ್ತು ಇತರೆ ಕೆಲವು ಪ್ರದೇಶಗಳಲ್ಲಿ ಮಳೆ ಸಾಧ್ಯತೆ ಇದೆ. ಮೇ 26ರಿಂದ 31ರವರೆಗೆ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಗದಗ, ಬೀದರ್, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆ ಆಗಬಹುದು. ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 50-60 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ನಿರಂತರ ಮಳೆ ಸಾಧ್ಯತೆ ಇದೆ. ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ಬಳ್ಳಾರಿ, ಬೆಂಗಳೂರು ಗ್ರಾಮೀಣ ಮತ್ತು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಭಾರೀ ಮಳೆ ಆಗಲಿದೆ.
ಈ ಜಿಲ್ಲೆಗಳಿಗೆ ಎಚ್ಚರಿಕೆ
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೇ 25ರಿಂದ 28ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮೇ 29 ಮತ್ತು 30ರಂದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಮೇ 28ರವರೆಗೆ ರೆಡ್ ಅಲರ್ಟ್ ಜಾರಿಯಲ್ಲಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ.
ಕೇರಳದಲ್ಲಿ ಮುಂಗಾರು ಮಳೆ ಶುಕ್ರವಾರದಿಂದಲೇ ಪ್ರಾರಂಭವಾಗಿದ್ದು, ಕೊಟ್ಟಾಯಂನ ಕುಮಾರಕೋಣಂನಲ್ಲಿ 12 ಸೆಂ.ಮೀ., ಎರ್ನಾಕುಲಂ, ತಿರುವನಂತಪುರಂ, ಇಡುಕ್ಕಿ ಮತ್ತು ತ್ರಿಶೂರ್ನಲ್ಲಿ 10 ಸೆಂ.ಮೀ. ಮಳೆ ದಾಖಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಈ ಬಾರಿ ಅಸಾಧಾರಣ ಭಾರೀ ಮಳೆ ಸುರಿಯುತ್ತಿದೆ. ಈ ಪರಿಸ್ಥಿತಿ ಮುಂದಿನ ಕೆಲವು ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.