ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲಾಡಳಿತ ಮತ್ತು ಕೊಡಗು ವಿಶ್ವವಿದ್ಯಾಲಯವು ಮುಂಜಾಗ್ರತಾ ಕ್ರಮವಾಗಿ ಮೇ 26 ಮತ್ತು 27ರಂದು ಎಲ್ಲಾ ಸರ್ಕಾರಿ ಮತ್ತು ಸಂಯೋಜಿತ ಕಾಲೇಜುಗಳಿಗೆ ಎರಡು ದಿನಗಳ ರಜೆ ಘೋಷಿಸಿದೆ. ಕಳೆದ 3-4 ದಿನಗಳಿಂದ ಜಿಲ್ಲೆಯಲ್ಲಿ ರಣಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಕಾವೇರಿ ನದಿಯ ನೀರಿನ ಮಟ್ಟ ಅಪಾಯಕಾರಿ ಮಟ್ಟವನ್ನು ಮುಟ್ಟಿದೆ. ತಲಕಾವೇರಿ ಮತ್ತು ಭಾಗಮಂಡಲ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ತ್ರಿವೇಣಿ ಸಂಗಮದಲ್ಲಿ ನೀರು ಹರಿಯುವ ವೇಗ ಹೆಚ್ಚಾಗಿದ್ದು, ಸುತ್ತಮುತ್ತಲಿನ ಉದ್ಯಾನಗಳು ಮುಳುಗಡೆಯಾಗಿವೆ. ನಾಪೋಕ್ಲು, ಅಯ್ಯಂಗೇರಿ ಮತ್ತು ಸಣ್ಣಪುಲಿಕೋಟ್ಟು ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಕಡಿದುಹೋಗುವ ಅಪಾಯವೂ ಉಂಟಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ್ ಸಂಗಪ್ಪ ಆಲೂರರು ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿದ ನಂತರ ಈ ರಜೆಯನ್ನು ಘೋಷಿಸಿದ್ದಾರೆ. ರಾಜ್ಯದ ಇತರ ಭಾಗಗಳಲ್ಲಿ ಶಾಲೆಗಳಿಗೆ ಬೇಸಿಗೆ ರಜೆ ಮುಕ್ತಾಯವಾಗುತ್ತಿದ್ದರೂ, ಕೆಲವು ಕಾಲೇಜುಗಳು ನಡೆಸುತ್ತಿದ್ದ ಕಾರಣ ಹವಾಮಾನ ಪರಿಸ್ಥಿತಿಯನ್ನು ಅನುಸರಿಸಿ ರಜೆ ಘೋಷಿಸಲಾಗುತ್ತಿದೆ. ಕೊಡಗಿನಲ್ಲಿ ಮಳೆಯಿಂದ ಉಂಟಾಗಿರುವ ಪರಿಸ್ಥಿತಿ ಗಂಭೀರವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.