ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ ಪ್ರಧಾನಿ ಆವಾಸ್ ಯೋಜನೆ (PMAY) 2.0 ಅಡಿಯಲ್ಲಿ ಬಡವರು, ಮನೆ ಇಲ್ಲದವರು ಮತ್ತು ಹಿಂದುಳಿದ ವರ್ಗದವರಿಗೆ ವಸತಿ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸರ್ಕಾರವು Economically Weaker Sections (EWS) ಮತ್ತು Low Income Groups (LIG) ಗ್ರಾಹಕರಿಗೆ 2.67 ಲಕ್ಷದಿಂದ 5 ಲಕ್ಷ ರೂಪಾಯಿ ವರೆಗೆ ಸಹಾಯಧನ ನೀಡುತ್ತಿದೆ. ಈ ಯೋಜನೆಯ ಮೂಲಕ ಸರ್ಕಾರವು ಕಡಿಮೆ ಬಡ್ಡಿದರದಲ್ಲಿ ಸಾಲ ಮತ್ತು ನೇರ ಹಣಕಾಸು ನೆರವನ್ನು ನೀಡಿ ಮನೆ ನಿರ್ಮಾಣವನ್ನು ಸುಲಭಗೊಳಿಸುತ್ತಿದೆ.ಈ ವರದಿಯಲ್ಲಿ, ಹೊಸ ನಿಯಮಗಳು, ಅರ್ಹತೆ, ಅಗತ್ಯ ದಾಖಲೆಗಳು, ಆನ್ಲೈನ್ ಅರ್ಜಿ ಪ್ರಕ್ರಿಯೆ ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಪರಿಶೀಲಿಸಬೇಕಾದ ಪ್ರಮುಖ ವಿವರಗಳನ್ನು ಸಂಪೂರ್ಣವಾಗಿ ವಿವರಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಪ್ರತ್ಯೇಕ ಪ್ರಯೋಜನಗಳು
- ಗ್ರಾಮೀಣ ಪ್ರದೇಶಗಳಲ್ಲಿ: ₹1.7 ಲಕ್ಷದವರೆಗೆ ನೇರ ಅನುದಾನ ಮತ್ತು ₹6 ಲಕ್ಷದವರೆಗೆ ಕೇವಲ 5% ಬಡ್ಡಿದರದಲ್ಲಿ ಬ್ಯಾಂಕ್ ಸಾಲ ಲಭ್ಯವಿದೆ.
- ನಗರ ಪ್ರದೇಶಗಳಲ್ಲಿ: ₹2.65 ಲಕ್ಷದವರೆಗೆ ಆರ್ಥಿಕ ನೆರವು ಮತ್ತು ₹10 ಲಕ್ಷದವರೆಗೆ ಕಡಿಮೆ ಬಡ್ಡಿದರದ ಸಾಲ ನೀಡಲಾಗುತ್ತದೆ.
ಯಾರು ಅರ್ಜಿ ಸಲ್ಲಿಸಬಹುದು?
- ಅಂಗವಿಕಲರು, ಹಿರಿಯ ನಾಗರಿಕರು, ವಿಧವೆಯರು ಅಥವಾ ಅಸಂಘಟಿತ ಕಾರ್ಮಿಕರು.
- ಬಡವರ ವಾರ್ಷಿಕ ಆದಾಯ ₹2.5 ಲಕ್ಷದೊಳಗೆ ಇರಬೇಕು. ಮಧ್ಯಮ ವರ್ಗದವರಿಗೆ ₹6 ಲಕ್ಷದವರೆಗೆ ಅನುಮತಿ ಇದೆ.
- ಈ ಹಿಂದೆ ಇತರ ಸರ್ಕಾರಿ ಯೋಜನೆಗಳಿಂದ ಮನೆಗೆ ಸಬ್ಸಿಡಿ ಪಡೆದವರು ಅರ್ಹರಲ್ಲ.
ಅಗತ್ಯ ದಾಖಲೆಗಳು:
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಬ್ಯಾಂಕ್ ಪಾಸ್ಬುಕ್
- ಇತ್ತೀಚಿನ ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವ ವಿಧಾನ:
- ಅಧಿಕೃತ ವೆಬ್ಸೈಟ್ pmayg.nic.in ಗೆ ಭೇಟಿ ನೀಡಿ.
- ಹತ್ತಿರದ ಸೈಬರ್ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿ.
ಯೋಜನೆಯ ಗುರಿ:
2024-25ರ ಬಜೆಟ್ ಪ್ರಕಾರ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮುಂದಿನ ಐದು ವರ್ಷಗಳಲ್ಲಿ 3 ಕೋಟಿ ಮನೆಗಳ ನಿರ್ಮಾಣದ ಗುರಿಯನ್ನು ಘೋಷಿಸಿದ್ದಾರೆ. ಈ ಯೋಜನೆಯ ಮೂಲಕ ಮನೆ ಇಲ್ಲದವರ ಕನಸು ನನಸಾಗುತ್ತಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply