ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ಮುಖ್ಯಮಂತ್ರಿ ರೈತ ವಿಧ್ಯಾನಿದಿ ಯೋಜನೆಯನ್ನು 75 ನೇ ಸ್ವಾತಂತ್ರೋತ್ಸವದಂದು ಮುಖ್ಯಮಂತ್ರಿಗಳು ಘೋಷಣಿ ಮಾಡಿದ್ದರು.
ಇದನ್ನೂ ಓದಿ
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ :
https://www.needsofpublic.in/ssp-scholarship-2022-23/
ಈ ಕಾರ್ಯಕ್ರಮದಡಿ 8, 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳು ಮತ್ತು ಎಸ್ ಎಸ್ ಎಲ್ ಸಿ /10 ನೇ ತರಗತಿಯನ್ನು ಪೂರೈಸಿರುವ ಹಾಗೂ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿ ಯಾಗಿರುವ ಶಿಕ್ಷಣ ಸಂಸ್ಥೆ/ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ವಿದ್ಯಾಭ್ಯಾಸ ಮಾಡುತ್ತಿರುವ ರೈತರ ಮಕ್ಕಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರು ಇರುತ್ತಾರೆ. ವಿದ್ಯಾರ್ಥಿ ವೇತನವನ್ನು ವಾರ್ಷಿಕವಾಗಿ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ ವರ್ಗಾಯಿಸಲಾಗುವುದು.
ರೈತರ ಮಕ್ಕಳ ವಿದ್ಯಾಭಾಸವನ್ನು ಪ್ರೋತ್ಸಾಹಿಸಲು ಮಾನ್ಯ ಮುಖ್ಯಮಂತ್ರಿಗಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮವನ್ನು ಘೋಷಣೆ ಮಾಡಿರುತ್ತಾರೆ. ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ-ರೈತರ ಮಕ್ಕಳಿಗೆ 2,000 ದಿಂದ 11,000 ವರೆಗೆ ಶಿಷ್ಯವೇತನ
ಇದನ್ನೂ ಓದಿ
ಪಿಎಂ ಕಿಸಾನ್ ಹಣ ಇನ್ನು ಬರದಿದ್ದರೆ ಕೂಡಲೆ ಈ ಸಣ್ಣ ಕೆಲಸ ಮಾಡಿ:
https://www.needsofpublic.in/pm-kisan_12th_installment/
ರೈತ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನವನ್ನು ಅರ್ಹತೆ ಆಧಾರದ ಮೇಲೆ ಮತ್ತು ಅರ್ಜಿ ಎರಡರ ಆಧಾರದ ಮೇಲೆ ನೀಡಲಾಗುತ್ತಿದೆ. ಇ -ಆಡಳಿತ ಇಲಾಖೆಯು ನಿರ್ವಹಿಸುತ್ತಿರುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ(portal) ನಿಂದ ಕೃಷಿ ಇಲಾಖೆಗೆ ಅರ್ಹ ವಿದ್ಯಾರ್ಥಿಗಳ ದಾಖಲಾತಿಗಳನ್ನು ವಿದ್ಯಾರ್ಥಿ ವೇತನ ವರ್ಗಾವಣೆಗಾಗಿ ನೀಡಲಾಗುತ್ತಿದೆ.
ರೈತರು ಹಾಗೂ ಕೃಷಿಕಾರ್ಮಿಕರ ಮಕ್ಕಳ ಜೊತೆಗೆ ಮೀನುಗಾರರು,ನೇಕಾರರು,ಕಾರ್ಮಿಕರು ಮತ್ತು ಅಟೋ ಟ್ಯಾಕ್ಸಿ ಚಾಲಕರ ಮಕ್ಕಳಿಗೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆೆಯನ್ನು ವಿಸ್ತರಿಸಲಾಗಿದ್ದು, ಈ ಯೋಜನೆಯಿಂದ 14 ಲಕ್ಷ ಮಕ್ಕಳಿಗೆ ವಿದ್ಯಾರ್ಥಿವೇತನ ಸಿಗಲಿದೆ
ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ
1.ರೈತ ಎಂದರೆ ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ ಮಾಡುವಂತಹ ಕೃಷಿ ಮಾಡುವಂತಹ ಜಮೀನನ್ನು ತನ್ನ ಹೆಸರಿನಲ್ಲಿ ಹೊಂದಿರುವಂತಹ ವ್ಯಕ್ತಿ
2.ರೈತರ ಮಕ್ಕಳು ಎಂದರೆ ಕಾನೂನಿನ ಪ್ರಕಾರ ದತ್ತು ಪಡೆದಿರುವ ಮಕ್ಕಳು ಸೇರಿದಂತೆ ಪೋಷಕ/ಪೋಷಕರ ಜೈವಿಕ ಸಂತತಿ.ಒಂದು ಪಕ್ಷ ಯಾವುದೇ ಮಕ್ಕಳಿಗೆ ಪೋಷಕ /ಪೋಷಕರು ಇಲ್ಲದೆ ಇದ್ದ ಸಂದರ್ಭದಲ್ಲಿ ಉಳಿಮೆ ಮಾಡುವಂತಹ/ ಕೃಷಿ ಮಾಡುವಂತಹ ಜಮೀನನ್ನು ಅವರು ಹೊಂದಿರತಕ್ಕದ್ದು
3.ರೈತ ಕುಟುಂಬದ ಎಲ್ಲಾ ಮಕ್ಕಳು ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುತ್ತಾರೆ. ಸದರಿ ಉದ್ದೇಶಕ್ಕೆ ರೈತ ಕುಟುಂಬ ಎಂದರೆ ರಾಜ್ಯದ ಇ-ಆಡಳಿತ ಇಲಾಖೆಯು ನಿರ್ವಹಿಸುತ್ತಿರುವ ಕುಟುಂಬ ತಂತ್ರಾಂಶದ ದತ್ತಾಂಶದಲ್ಲಿ ದಾಖಲಾಗಿರುವ ಸದಸ್ಯರು
4.ವಿದ್ಯಾರ್ಥಿಯು ಇತರೆ ಯಾವುದೇ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರು ಮುಖ್ಯಮಂತ್ರಿ ರೈತ ವಿಜ್ಞಾನಿಧಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುತ್ತಾರೆ
5.ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನವನ್ನು ವಿತರಿಸುವ ಉದ್ದೇಶಕ್ಕೆ ರಾಜ್ಯದ ವಿವಿಧ ಇಲಾಖೆಗಳು ನಿರ್ವಹಿಸುತ್ತಿರುವ ಶೈಕ್ಷಣಿಕ ಹಾಗೂ ಇತರೆ ದತ್ತಾಂಶದ ಆಧಾರದ ಮೇಲೆ ಗುರುತಿಸಿ (on entitlement basis) ವಿದ್ಯಾರ್ಥಿ ವೇತನವನ್ನು ವಿತರಿಸುವುದು ಹಾಗೂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಪ್ರಕರಣಗಳನ್ನು ಸಹ ಪರಿಗಣಿಸಿ ಅರ್ಹರಿಗೆ ವಿದ್ಯಾರ್ಥಿವೇತನವನ್ನು ನೇರ ನಗದು ವರ್ಗಾವಣೆ ಮೂಲಕ ವರ್ಗಾಯಿಸಲಾಗುವುದು.
6.ಪುನರಾವರ್ತಿತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಅರ್ಹರಿರುವುದಿಲ್ಲ
ಇದನ್ನೂ ಓದಿ
ವಿದ್ಯಾಸಿರಿ ಸ್ಕಾಲರ್ಶಿಪ್ : ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ಹೇಗೆ ಅಪ್ಲೈ ಮಾಡುವುದು ?
https://www.needsofpublic.in/vidyasiri-scholarships/
ರಾಜ್ಯದಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ಪ್ರವೇಶನವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ( Direct Benefit Transfer-DBT) ಪದ್ಧತಿಯ ಮೂಲಕ ರೂ 2,000 ದಿಂದ ರೂ 11,000 ವರೆಗೆ 2021 22ನೇ ಆರ್ಥಿಕ ವರ್ಷದ ಸಾಲಿನಿಂದ ಯಾರಿಗೆ ಬರುವಂತೆ ಶಿಷ್ಯವೇತನದ ಹಣವನ್ನು ವಾರ್ಷಿಕ ಶಿಷ್ಯವೇತನದ ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿರುತ್ತದೆ.
ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಪಡೆಯಲು ಅರ್ಹರಾಗಿರುತ್ತಾರೆ.
ಪ್ರೌಢ ಶಿಕ್ಷಣ( 8 ರಿಂದ 10ನೇ ತರಗತಿವರೆಗೆ ) ವ್ಯಾಸಂಗ ಮಾಡುತ್ತಿರುವ ರೈತ ಕುಟುಂಬದ ಹೆಣ್ಣು ಮಕ್ಕಳಿಗೆ 2021 22ನೇ ಆರ್ಥಿಕ ವರ್ಷದಿಂದ ವಾರ್ಷಿಕವಾಗಿ 2,000ಗಳ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲಾಗಿದೆ.
2021 22 ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಪದವಿ ಪೂರ್ವ ಶಿಕ್ಷಣ ಕೋರ್ಸ್ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ Sats ID & FID ಅನ್ವಯ ಅರ್ಹರನ್ನು ಗುರುತಿಸಿ ಪಾವತಿಸಲಾಗುವುದು.
ಇತರೆ ಎಲ್ಲಾ ಕೋರ್ಸ್ಗಳ ರೈತರ ಮಕ್ಕಳು ( ಜಾಲತಾಣ https://ssp.postmatric.karnataka.gov.in) ದಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ವಿದ್ಯಾರ್ಥಿಯು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮತ್ತು NPCI Mapping ಮಾಡಿಸಿರಬೇಕು ಹಾಗೂ ತಂದೆ ಅಥವಾ ತಾಯಿಯ ರೈತರ ಗುರುತಿನ ಸಂಖ್ಯೆ(FID)ಹೊಂದಿರಬೇಕು.
FID ನೋಂದಣಿ ಮಾಡಲು ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು.
ಇದನ್ನೂ ಓದಿ
ಜಿಯೋ ನಲ್ಲಿ 3 ಟಾಪ್ ಓಟಿಟಿಗಳ ಉಚಿತ ಚಂದಾದಾರಿಕೆ ಮತ್ತು ಹಲವು ಸೌಲಭ್ಯಗಳು