ರಾಜ್ಯದಲ್ಲಿ ಮುಂಗಾರು ಮಳೆ ಈಗ ಹೆಚ್ಚು ಚುರುಕಾಗುತ್ತಿದೆ, ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ. ಹವಾಮಾನ ಇಲಾಖೆಯು ಇಂದಿನಿಂದ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದ್ದು, ಇದಕ್ಕಾಗಿ ಆರಂಜ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ನದಿಗಳು ಉಕ್ಕಿ ಹರಿಯುವ ಸಾಧ್ಯತೆ ಇದ್ದು, ಧಾರಾಕಾರ ಮಳೆ, ಗಾಳಿ, ಮಿಂಚು ಸಹಿತವಾದ ವಾತಾವರಣ ನಿರೀಕ್ಷಿಸಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೊರಗಡೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಮತ್ತು ಕೊಡಗು ಜಿಲ್ಲೆಗಳಲ್ಲಿ ಸಹ ಸಾಮಾನ್ಯ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಇಲ್ಲಿ ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್) ಜಾರಿಗೊಳಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮಧ್ಯಮ ಮಟ್ಟದ ಮಳೆ ಸುರಿಯಬಹುದು, ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚಿನೊಂದಿಗೆ ಧಾರಾಕಾರ ಮಳೆ ಸಾಧ್ಯವಾಗುಬಹುದು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ, ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆ ನಿರೀಕ್ಷಿಸಲಾಗಿದೆ. ಇಲ್ಲಿ ಸಾಧಾರಣದಿಂದ ಮಧ್ಯಮ ಮಟ್ಟದ ಮಳೆ ಸಿಗಬಹುದು. ಬೆಂಗಳೂರಿನಲ್ಲಿ ಸ್ಥಳೀಯ ಮಳೆ, ಗಾಳಿ, ಮಿಂಚಿನ ಸಾಧ್ಯತೆ ಇದ್ದು, ನಗರದ ಟ್ರಾಫಿಕ್ ಮತ್ತು ದೈನಂದಿನ ಚಟುವಟಿಕೆಗಳು ಬಳಲಬಹುದು.
ಹವಾಮಾನ ಇಲಾಖೆಯು ರೈತರು, ಮೀನುಗಾರರು, ಮತ್ತು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ನದಿ ತೀರದ ಪ್ರದೇಶಗಳಲ್ಲಿ ವಾಸಿಸುವವರು ಎಚ್ಚರಿಕೆಯಿಂದಿರಬೇಕು. ಸಣ್ಣ ಹಳೆಯ ಮನೆಗಳು, ಮರಗಳು ಕುಸಿಯುವ ಅಪಾಯವಿದೆ. ಮಿಂಚಿನ ಸಾಧ್ಯತೆ ಇರುವುದರಿಂದ, ಬಯಲು ಪ್ರದೇಶಗಳಲ್ಲಿ ಓಡಾಡುವುದು ,ವಾಹನ ಚಲನೆ ಮಾಡುವುದು,ಮರದ ಕೆಳಗೆ ನಿಲ್ಲುವುದನ್ನು ತಪ್ಪಿಸಬೇಕು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Shivaraj is the Lead Editor at NeedsOfPublic.in with over 4 years of experience tracking Indian government schemes and educational updates. He specializes in simplifying complex notifications from the Central and State governments to help the public understand their benefits. Before joining NeedsOfPublic, Shivaraj worked as a Content Writer focusing on Civic issues. When he isn’t decoding the latest circulars, he enjoys reading about digital literacy.”
Follow Shivaraj on:


WhatsApp Group




