ಕರ್ನಾಟಕ ಸರ್ಕಾರವು 2025-26ನೇ ಶೈಕ್ಷಣಿಕ ವರ್ಷದಲ್ಲಿ 1ರಿಂದ 8ನೇ ತರಗತಿಯ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು SSP (State Scholarship Portal) ಮೂಲಕ ಆನ್ ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ಯೋಜನೆಯಡಿಯಲ್ಲಿ, ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಉಚಿತ ಶಿಕ್ಷಣ ಪಡೆಯಲು ಸಹಾಯಧನವನ್ನು ಪಡೆಯಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30 ಸೆಪ್ಟೆಂಬರ್ 2025.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಯಾರು ಅರ್ಜಿ ಸಲ್ಲಿಸಬಹುದು?
- ವಿದ್ಯಾರ್ಥಿಯು ಕರ್ನಾಟಕದ ಖಾಯಂ ನಿವಾಸಿನಾಗಿರಬೇಕು.
- ಅರ್ಜಿದಾರರು ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬುದ್ಧ, ಪಾರ್ಸಿ, ಸಿಖ್)ಕ್ಕೆ ಸೇರಿರಬೇಕು.
- ಪ್ರಸ್ತುತ 1ರಿಂದ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯಾಗಿರಬೇಕು.
- ಕುಟುಂಬದ ವಾರ್ಷಿಕ ಆದಾಯ ರೂ. 2.5 ಲಕ್ಷದೊಳಗೆ ಇರಬೇಕು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್ (ಮೂಲ ಪ್ರತಿ ಮತ್ತು ಪ್ರತಿ)
- ಶಾಲೆಯಿಂದ ಪಡೆದ ಪ್ರವೇಶ ದಾಖಲೆ/ಸ್ಟಡಿ ಸರ್ಟಿಫಿಕೇಟ್
- ಜಾತಿ ಮತ್ತು ಆದಾಯ ಪ್ರಮಾಣಪತ್ರ (ತಹಸೀಲ್ದಾರ ಕಚೇರಿ/ಸಂಬಂಧಿತ ಅಧಿಕಾರಿಯಿಂದ)
- ಬ್ಯಾಂಕ್ ಪಾಸ್ ಬುಕ್ (IFSC ಕೋಡ್ ಸಹಿತ)
- ಪಾಸ್ ಪೋರ್ಟ್ ಗಾತ್ರದ ಫೋಟೋ
- ಮೊಬೈಲ್ ನಂಬರ್ (OTP ಪಡೆಯಲು)
ಆನ್ ಲೈನ್ ಅರ್ಜಿ ಹಂತಗಳು
SSP ಪೋರ್ಟಲ್ ಪ್ರವೇಶಿಸಿ: ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
ನೊಂದಣಿ ಮಾಡಿಕೊಳ್ಳಿ: “ಹೊಸ ಬಳಕೆದಾರರಾಗಿ ನೋಂದಾಯಿಸಿ” (Register as New User) ಆಯ್ಕೆಯನ್ನು ಆರಿಸಿ.
ಲಾಗಿನ್ ಮಾಡಿ: ನೊಂದಾಯಿಸಿದ ಮೊಬೈಲ್ ನಂಬರ್ ಮತ್ತು ಪಾಸ್ ವರ್ಡ್ ನಮೂದಿಸಿ.
ಅರ್ಜಿ ನಮೂನೆ ಪೂರ್ಣಗೊಳಿಸಿ:
ವಿದ್ಯಾರ್ಥಿಯ ವಿವರ, ಪೋಷಕರ ಆದಾಯ ಮತ್ತು ಶಾಲೆಯ ಮಾಹಿತಿ ನಮೂದಿಸಿ.
ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಸಬ್ಮಿಟ್ ಮಾಡಿ: “Submit” ಬಟನ್ ನ್ ಕ್ಲಿಕ್ ಮಾಡಿ ಮತ್ತು ಅರ್ಜಿ ಸಂಖ್ಯೆಯನ್ನು ಸಂಗ್ರಹಿಸಿ.
ಪ್ರಮುಖ ಸೂಚನೆಗಳು
- ಅರ್ಜಿಯನ್ನು ಕಂಪ್ಯೂಟರ್ ಅಥವಾ ಸ್ಮಾರ್ಟ್ ಫೋನ್ ಮೂಲಕ ಸಲ್ಲಿಸಬಹುದು.
- ದಾಖಲೆಗಳು ಸ್ಪಷ್ಟವಾಗಿ ಸ್ಕ್ಯಾನ್ ಆಗಿರಬೇಕು.
- 30 ಸೆಪ್ಟೆಂಬರ್ 2025ರೊಳಗೆ ಅರ್ಜಿ ಸಲ್ಲಿಸಬೇಕು.
- ಸಹಾಯಕ್ಕಾಗಿ ಹೆಲ್ಪ್ ಲೈನ್: 8277799990ಗೆ ಸಂಪರ್ಕಿಸಿ.
ಮುಖ್ಯ ಲಿಂಕ್ ಗಳು
ಈ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಈ ಮಾಹಿತಿಯನ್ನು ವಾಟ್ಸಾಪ್, ಟೆಲಿಗ್ರಾಮ್ ಮೂಲಕ ಹಂಚಿಕೊಳ್ಳಿ. ಹೆಚ್ಚಿನ ವಿವರಗಳಿಗಾಗಿ ನಿಮ್ಮ ಶಾಲೆಯ ವ್ಯವಸ್ಥಾಪಕರನ್ನು ಸಂಪರ್ಕಿಸಿ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.