ಪ್ಯಾನಾಸೋನಿಕ್ ಕಂಪನಿಯು 2025-26ನೇ ಸಾಲಿನ “ಪ್ಯಾನಾಸೋನಿಕ್ ರಟ್ಟಿ ಛತ್ರ ವಿದ್ಯಾರ್ಥಿವೇತನ”ಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸ್ಕಾಲರ್ಶಿಪ್ ಭಾರತದ ಯಾವುದೇ IITಯಲ್ಲಿ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ) BE ಅಥವಾ B.Tech ಕೋರ್ಸ್ಗಳಲ್ಲಿ ಸೇರಿದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವ ಅವಕಾಶ ನೀಡುತ್ತದೆ.
ಈ ಯೋಜನೆಯು ಆರ್ಥಿಕವಾಗಿ ದುರ್ಬಲವಾದ ಕುಟುಂಬಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಾಯ ಮಾಡುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷಗಳ ಕಾಲ ಪ್ರತಿವರ್ಷ 42,500 ರೂಪಾಯಿ ಬೋಧನಾ ಫೀಸ್ ನೆರವು ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 04-09-2025. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಅರ್ಹತೆ:
- ಯಾವುದೇ IITಯಲ್ಲಿ 2025-26ನೇ ಸಾಲಿನ BE/B.Tech ಕೋರ್ಸ್ಗೆ ಪ್ರವೇಶ ಪಡೆದಿರಬೇಕು.
- 12ನೇ ತರಗತಿಯಲ್ಲಿ ಕನಿಷ್ಠ 75% ಅಂಕಗಳು ಪಡೆದಿರಬೇಕು.
- ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 8 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರಬೇಕು.
ಅಗತ್ಯ ದಾಖಲೆಗಳು:
- 12ನೇ ತರಗತಿಯ ಮಾರ್ಕ್ಶೀಟ್ (2024-25).
- ಆಧಾರ್ ಕಾರ್ಡ್/ವೋಟರ್ ಐಡಿ/ಪ್ಯಾನ್ ಕಾರ್ಡ್.
- IIT ಪ್ರವೇಶ ಪತ್ರ ಮತ್ತು ಫೀಸ್ ರಶೀದಿ.
- ಬ್ಯಾಂಕ್ ಖಾತೆ ವಿವರ ಮತ್ತು ಆದಾಯ ಪ್ರಮಾಣಪತ್ರ.
- ವಿದ್ಯಾರ್ಥಿಯ ಪಾಸ್ಪೋರ್ಟ್ ಗಾತ್ರದ ಫೋಟೋ.
ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಭೇಟಿ ಮಾಡಿ.
ಆರ್ಥಿಕ ಸಹಾಯ: ನಾಲ್ಕು ವರ್ಷಗಳವರೆಗೆ ವರ್ಷಕ್ಕೆ ₹ 70,250.
ಅರ್ಜಿ ಸಲ್ಲಿಕೆಗೆ ಕೊನೇ ದಿನ: 04-09-2025
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಹೆಚ್ಚಿನ ಮಾಹಿತಿಗೆ: www.b4s.in/praja/RCSP6
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.