WhatsApp Image 2025 08 19 at 1.13.32 PM

IMD ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಎಚ್ಚರಿಕೆ: 3 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್.!

WhatsApp Group Telegram Group

ಭಾರತೀಯ ಹವಾಮಾನ ಇಲಾಖೆ (IMD) ಇಂದು ಕರ್ನಾಟಕದ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ರೆಡ್ ಅಲರ್ಟ್ ಅಡಿಯಲ್ಲಿವೆ, ಅಂದರೆ ಇಲ್ಲಿ ಅತ್ಯಂತ ಭಾರೀ ಮಳೆ ಮತ್ತು ಗಾಳಿಯ ವೇಗದಿಂದಾಗಿ ಜೀವ ಮತ್ತು ಆಸ್ತಿಪಾಸ್ತಿಗೆ ಗಂಭೀರ ಅಪಾಯವಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಧಾರವಾಡ, ಗದಗ, ಹಾವೇರಿ ಮತ್ತು ಶಿವಮೊಗ್ಗ ಜಿಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಸೇರಿದಂತೆ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಲ್ಲಿ 64.5 ರಿಂದ 115.5 ಮಿಮೀ ವರೆಗೆ ಮಳೆ ನಿರೀಕ್ಷಿಸಲಾಗಿದೆ. ಇದು ದೈನಂದಿನ ಜೀವನಕ್ಕೆ ಸ್ವಲ್ಪ ಅಡಚಣೆ ಉಂಟುಮಾಡಬಹುದಾದರೂ, ಪ್ರಮುಖ ಅಪಾಯಗಳಿಲ್ಲ. ಆದರೂ, ನೀರು ನಿಲುವು, ರಸ್ತೆಗಳ ಸವಕಳಿ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ತೊಂದರೆ ಆಗಬಹುದು.

ಶಾಲೆಗಳಿಗೆ ರಜೆ

ಈಗಾಗಲೇ ಹಾಸನ ಮತ್ತು ಉಡುಪಿ ಜಿಲ್ಲೆಗಳ ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನಷ್ಟು ಜಿಲ್ಲೆಗಳಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಲು ಸೂಚನೆ ನೀಡಬಹುದು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories