WhatsApp Image 2025 08 27 at 23.48.12 7e124233

Rain Alert: ರಾಜ್ಯದಲ್ಲಿ ಇಂದು ಭಾರಿ ಮಳೆ ಎಚ್ಚರಿಕೆ, ರೆಡ್ ಅಲರ್ಟ್ ಘೋಷಣೆ.! ಈ ಜಿಲ್ಲೆಯ ಶಾಲಾ ಕಾಲೇಜು ರಜೆ

WhatsApp Group Telegram Group

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ, 10 ತಾಲೂಕುಗಳ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಇಂದು (ಆಗಸ್ಟ್ 28) ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಇಡೀ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ರಜೆ ಘೋಷಿತ ತಾಲೂಕುಗಳು

ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ ಶಾಲೆಗಳು, ಪದವಿಪೂರ್ವ ಕಾಲೇಜುಗಳು, ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ನಿರಂತರ ಮಳೆ ಮತ್ತು ರೆಡ್ ಅಲರ್ಟ್‌ನಿಂದಾಗಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರದಲ್ಲಿ ಮಾತ್ರ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಾದ್ಯಂತ ಅತಿಹೆಚ್ಚಿನ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಆ. 28ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

ಕರ್ನಾಟಕದಲ್ಲಿ ಮಳೆಯ ಮುನ್ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಆಗಸ್ಟ್ 31ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರೀ ಮಳೆಯಾಗಲಿದೆ, ಆದರೆ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 28ರವರೆಗೆ ಗುಡುಗು, ಗಾಳಿಯೊಂದಿಗೆ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ.

ಆಗಸ್ಟ್ 28: ಯೆಲ್ಲೋ ಅಲರ್ಟ್

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ. ಇತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ.

ಆಗಸ್ಟ್ 29

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯೊಂದಿಗೆ ಗುಡುಗು ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ.

ಆಗಸ್ಟ್ 30

ಕರಾವಳಿ ಜಿಲ್ಲೆಗಳ ಜೊತೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ.

ಆಗಸ್ಟ್ 31 ಮತ್ತು ಸೆಪ್ಟೆಂಬರ್ 1

ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ ಮತ್ತು ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಮಾನ್ಯ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ಮಳೆ

ಕಳೆದ ಕೆಲವು ದಿನಗಳಿಂದ ಸದ್ದಿಲ್ಲದೆ ಇದ್ದ ಮಳೆರಾಯ ಇಂದು (ಆಗಸ್ಟ್ 27) ಗಣೇಶ ಹಬ್ಬದಂದು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಬ್ಬರಿಸಿದ್ದಾನೆ. ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣದ ಜೊತೆಗೆ ಆಗಾಗ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗಣೇಶ ಹಬ್ಬಕ್ಕೆ ಮಳೆಯ ಅಡ್ಡಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಮಳೆರಾಯ ಕೆಲವೆಡೆ ಅಡ್ಡಿಯಾಗಿದ್ದಾನೆ. ಕಲಬುರಗಿ, ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಇಂದು ಮಳೆಯಾಗಿದ್ದು, ಹಬ್ಬದ ಸಂಭ್ರಮಕ್ಕೆ ಕಿರಿಕಿರಿಯನ್ನುಂಟುಮಾಡಿದೆ. ಮುಂದಿನ ಮೂರ್ನಾಲ್ಕು ದಿನಗಳವರೆಗೆ ಮಳೆ ಮುಂದುವರಿಯುವುದರಿಂದ ಗಣೇಶ ವಿಸರ್ಜನೆಗೆ ಅಡ್ಡಿಯಾಗುವ ಸಾಧ್ಯತೆಯಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories