ಬೆಂಗಳೂರು: ರಾಜ್ಯದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಇನ್ನೂ ಕೆಲವು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಯಿದೆ. ಸೆಪ್ಟೆಂಬರ್ 16ರ ವರೆಗೆ ಮಳೆಯ ಪರಿಸ್ಥಿತಿ ಇರಬಹುದು ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ತೀವ್ರವಾಗಿರಲಿದ್ದು, ಉತ್ತರ ಮತ್ತು ದಕ್ಷಿಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಇಲಾಖೆಯು ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರಕ್ಕೆ ಎಚ್ಚರಿಕೆ
ರಾಜಧಾನಿ ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಬಳ್ಳಾರಿ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಬೀದರ್, ಗದಗ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ (ಯೆಲ್ಲೋ ಅಲರ್ಟ್) ಜಾರಿ ಮಾಡಲಾಗಿದೆ.
ಅದೇ ರೀತಿ, ಉತ್ತರ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಇಂದಿನಿಂದ ಮಳೆ ತೀವ್ರವಾಗಲಿದೆ. ವಿಜಯಪುರ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ನಾರಂಗಿ ಎಚ್ಚರಿಕೆ (ಆರೆಂಜ್ ಅಲರ್ಟ್) ಘೋಷಿಸಲಾಗಿದೆ. ದಕ್ಷಿಣ ಒಳನಾಡು, ಉಡುಪಿ, ಉತ್ತರ ಕನ್ನಡ, ಹಾವೇರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಟ್ಟದ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.