WhatsApp Image 2025 09 20 at 2.53.36 PM

₹30,000/- ನೇರವಾಗಿ ಖಾತೆಗೆ ಬರುವ ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.!

WhatsApp Group Telegram Group

ವಿದ್ಯಾರ್ಥಿನಿಯರಿಗಾಗಿ ‘ದೀಪಿಕಾ’ ವಿದ್ಯಾರ್ಥಿ ವೇತನ ಲೋಕಾರ್ಪಣೆ

ಕರ್ನಾಟಕ ರಾಜ್ಯದ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ನೆರವಾಗಲು ಜಾರಿಗೊಳಿಸಲಾದ ‘ದೀಪಿಕಾ’ ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಚಾಲನೆ ನೀಡಿದರು. ಈ ಯೋಜನೆಯನ್ನು ಉನ್ನತ ಶಿಕ್ಷಣ ಇಲಾಖೆಯು ಅಜೀಂ ಪ್ರೇಮ್‌ಜಿ ಫೌಂಡೇಶನ್‌ನ ಸಹಯೋಗದೊಂದಿಗೆ ಆಯೋಜಿಸಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಅನುಕೂಲವಾಗುವಂತೆ ಈ ಯೋಜನೆ ರೂಪಿಸಲಾಗಿದೆ ಎಂದರು. ಈ ಕಾರ್ಯಕ್ರಮದಡಿ ಒಟ್ಟು 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ ₹30,000 ರಂತೆ ಧನಸಹಾಯ ದೊರೆಯಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಅಜೀಂ ಪ್ರೇಮ್‌ಜಿ ಫೌಂಡೇಶನ್‌ನ ಕೊಡುಗೆ

ರಾಜ್ಯದ ಪ್ರಮುಖ ಐಟಿ ಉದ್ಯಮಿ ಅಜೀಂ ಪ್ರೇಮ್‌ಜಿ ಅವರ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಾಮಾಜಿಕ ಕಳಕಳಿಯಿಂದ ಹಲವು ಜನಪರ ಕಾರ್ಯಗಳನ್ನು ಕೈಗೊಂಡಿದೆ. ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಪೂರೈಸುತ್ತಿರುವ ಫೌಂಡೇಶನ್, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣದಲ್ಲಿ ತೊಡಗಿಸಿಕೊಳ್ಳುವುದನ್ನು ಪ್ರೋತ್ಸಾಹಿಸಲು ‘ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಯೋಜನೆಯ ವಿವರಗಳು

  • ಈ ವಿದ್ಯಾರ್ಥಿ ವೇತನದಡಿಯಲ್ಲಿ ಪದವಿ ಕೋರ್ಸ್ ಮುಗಿಸುವವರೆಗೂ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ ₹30,000 ನೀಡಲಾಗುತ್ತದೆ.
  • ಈ ವರ್ಷ 37,000 ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಒದಗಿಸಲು ಅಜೀಂ ಪ್ರೇಮ್‌ಜಿ ಫೌಂಡೇಶನ್ ನೆರವು ನೀಡುತ್ತಿದೆ.
  • ಯೋಜನೆಯ ಲಾಭ ಪಡೆಯಲು ವಿದ್ಯಾರ್ಥಿನಿಯರು ಕಡ್ಡಾಯವಾಗಿ 10ನೇ ತರಗತಿ ಮತ್ತು 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿಯೇ ಪೂರ್ಣಗೊಳಿಸಿರಬೇಕು.
  • ಪ್ರತಿ ವರ್ಷ ತೇರ್ಗಡೆಯಾಗುವುದು ಈ ಯೋಜನೆಯ ಪ್ರಯೋಜನ ಪಡೆಯಲು ಅಗತ್ಯವಾದ ಮುಖ್ಯ ಷರತ್ತು.

ಸರ್ಕಾರಿ ಶಾಲೆಗಳಲ್ಲಿ ಸಾಮಾನ್ಯವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರೇ ಹೆಚ್ಚಿರುತ್ತಾರೆ. ಇಂತಹ ವಿದ್ಯಾರ್ಥಿನಿಯರಿಗೆ ಆರ್ಥಿಕ ಬೆಂಬಲ ನೀಡಿ, ಅವರ ಉನ್ನತ ಶಿಕ್ಷಣದ ಕನಸು ನನಸಾಗಲು ನೆರವಾಗುವ ಸದುದ್ದೇಶದಿಂದ ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories