ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬಹುನಿರೀಕ್ಷಿತ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ (ಜಾತಿಗಣತಿ) ನಿಗದಿಯಂತೆ ನಡೆಯುವುದು ಈಗ ಖಚಿತವಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹೇಳಿಕೆಯಂತೆ ಸಮೀಕ್ಷೆಯನ್ನು ಮುಂದೂಡಿಕೆ ಮಾಡದೇ, ದಿನಾಂಕ: 22-09-2025 ರಿಂದ 07-10-2025 ರವರೆಗೆ ರಾಜ್ಯದಾದ್ಯಂತ ಕೈಗೊಳ್ಳಲು ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸರ್ಕಾರದಿಂದ ಅನುಮೋದನೆ ಮತ್ತು ನಿರ್ಧಾರ
ರಾಜ್ಯ ಸರ್ಕಾರವು ಈ ಕುರಿತು ನಡವಳಿಯನ್ನು (ಆದೇಶ ಪತ್ರ) ಬಿಡುಗಡೆ ಮಾಡಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ನಡೆಸಲು ಅನುಮೋದನೆ ನೀಡಿದೆ.
ಆಯೋಗದ ಅಧ್ಯಕ್ಷರು, ಈ ಸಮೀಕ್ಷಾ ಕಾರ್ಯವನ್ನು ನಿರ್ದಿಷ್ಟ ದಿನಾಂಕಗಳಂದು ಕೈಗೊಳ್ಳಲು ಉದ್ದೇಶಿಸಿದ್ದು, ಈ ಬಗ್ಗೆ ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಸಮೀಕ್ಷೆ ಸುಗಮವಾಗಿ ನಡೆಯಲು:
- ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಿರ್ದೇಶನ ನೀಡಲಾಗಿದೆ.
- ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಸಮೀಕ್ಷಾದಾರರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಲಾಗಿದೆ.
- ಸಮೀಕ್ಷಾ ಕಾರ್ಯದಲ್ಲಿ ಸಾರ್ವಜನಿಕರು ಸಂಪೂರ್ಣವಾಗಿ ಪಾಲ್ಗೊಳ್ಳಲು ಅರಿವು ಮೂಡಿಸಲು ತಿಳಿಸಲಾಗಿದೆ.

ಆಯೋಗದ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ, ಸರ್ಕಾರವು ದಿನಾಂಕ: 22-09-2025 ರಿಂದ 07-10-2025 ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ಅನುಮೋದಿಸಿ, ಈ ಆದೇಶವನ್ನು ಹೊರಡಿಸಿದೆ. ಈ ಮೂಲಕ ಈ ಪ್ರಮುಖ ಸಮೀಕ್ಷೆಯ ಬಗ್ಗೆ ಇದ್ದ ಎಲ್ಲಾ ಗೊಂದಲಗಳಿಗೆ ತೆರೆ ಬಿದ್ದಂತಾಗಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply