WhatsApp Image 2025 09 28 at 11.31.01 PM

Ration Card: ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದು: ಈ ಜಿಲ್ಲೆಗಳಲ್ಲಿ ಕ್ರಮ ಚುರುಕು

Categories:
WhatsApp Group Telegram Group

ಹಾವೇರಿ: ವಾರ್ಷಿಕ ₹1.20 ಲಕ್ಷಕ್ಕಿಂತ ಹೆಚ್ಚು ಆದಾಯ ಹೊಂದಿರುವ, ತೆರಿಗೆ ಪಾವತಿಸುವ ಹಾಗೂ 7 ಎಕರೆಗಿಂತ ಹೆಚ್ಚು ಜಮೀನು ಇರುವ ಕುಟುಂಬಗಳ ಬಿಪಿಎಲ್ (BPL) ಕಾರ್ಡ್‌ಗಳನ್ನು ರದ್ದುಗೊಳಿಸಲು ಸರ್ಕಾರ ಆದೇಶಿಸಿದೆ. ಹಾವೇರಿ ಜಿಲ್ಲೆಯೊಂದರಲ್ಲಿಯೇ 14 ಸಾವಿರಕ್ಕೂ ಹೆಚ್ಚು ಕಾರ್ಡ್‌ಗಳನ್ನು ರದ್ದು ಮಾಡಲು ಸೂಚನೆ ನೀಡಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.

ಪಡಿತರ ಅಂಗಡಿಗಳ ಮುಂದೆ ನೋಟಿಸ್ ಹಾಕುವ ಮೂಲಕ ಅನರ್ಹ ಕುಟುಂಬಗಳು ತಮ್ಮ ದಾಖಲೆಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಈ ಕ್ರಮದಿಂದಾಗಿ ಹಲವು ಬಡ ಕುಟುಂಬಗಳು ಗೊಂದಲಕ್ಕೊಳಗಾಗಿದ್ದು, ಸರ್ಕಾರವು ಮರುಪರಿಶೀಲನೆ ನಡೆಸಬೇಕು ಎಂಬ ಬೇಡಿಕೆ ಕೇಳಿಬಂದಿದೆ. ಜಿಲ್ಲೆಯಲ್ಲಿ ಒಟ್ಟು 2 ಲಕ್ಷಕ್ಕೂ ಹೆಚ್ಚು ಪಡಿತರ ಚೀಟಿಗಳಿದ್ದು, ಈ ಪೈಕಿ 14,771 ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ.

ಕುಟುಂಬದ ಆದಾಯ ಮಾನದಂಡ: ಗದಗದಲ್ಲಿ 5 ಸಾವಿರ ಕಾರ್ಡ್‌ ಪರಿವರ್ತನೆ

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರನ್ನು ಪತ್ತೆ ಹಚ್ಚುವ ಸರ್ಕಾರದ ನಿರ್ದೇಶನದಂತೆ, ಗದಗ ಜಿಲ್ಲೆಯಲ್ಲಿಯೂ ಕಾರ್ಯಚರಣೆ ಚುರುಕಾಗಿದೆ. ಈವರೆಗೆ 5021 ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ (APL) ಕಾರ್ಡ್‌ಗಳಾಗಿ ಪರಿವರ್ತಿಸಲಾಗಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಜಿಲ್ಲೆಯಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಒಟ್ಟಾರೆ 9573 ಅನುಮಾನಾಸ್ಪದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್‌ಗಳನ್ನು ಪರಿಶೀಲನೆಗೆ ಒಳಪಡಿಸಿತ್ತು. ಈ ಪೈಕಿ, 5021 ಕಾರ್ಡ್‌ಗಳು ಅನರ್ಹವೆಂದು ದೃಢಪಟ್ಟಿರುವುದರಿಂದ ಅವುಗಳನ್ನು ಎಪಿಎಲ್ ಪಡಿತರ ಚೀಟಿಗಳಾಗಿ ಬದಲಾಯಿಸಲಾಗಿದೆ. ಅರ್ಹ ಫಲಾನುಭವಿಗಳಿಗೆ ನ್ಯಾಯಯುತವಾಗಿ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡಲು ಇಲಾಖೆ ಈ ದಿಟ್ಟ ಹೆಜ್ಜೆ ಇಟ್ಟಿದ್ದರೂ, ಈ ಕ್ರಮಕ್ಕೆ ಜಿಲ್ಲೆಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಸಮೀಕ್ಷೆಯ ಮಾನದಂಡಗಳು ಮತ್ತು ಮರುಪರಿಶೀಲನೆಗೆ ಅವಕಾಶ

ಅಧಿಕಾರಿಗಳ ಪ್ರಕಾರ, ಸಮೀಕ್ಷೆಯಲ್ಲಿ ಈ ಕೆಳಗಿನ ಮಾನದಂಡಗಳನ್ನು ಬಳಸಲಾಗಿದೆ:

  • ವಾರ್ಷಿಕ ₹1.20 ಲಕ್ಷಕ್ಕಿಂತ ಹೆಚ್ಚಿನ ಆದಾಯ ಇರುವವರು.
  • ಜಿಎಸ್‌ಟಿ ಪಾವತಿದಾರರು.
  • ಹೊರ ರಾಜ್ಯಗಳಲ್ಲೂ ಪಡಿತರ ಚೀಟಿ ಹೊಂದಿರುವವರು.
  • ಕರ್ನಾಟಕದಲ್ಲಿಯೇ ಎರಡೆರಡು ಪಡಿತರ ಚೀಟಿ ಇದ್ದವರು.
  • 6 ರಿಂದ 12 ತಿಂಗಳ ಅವಧಿಯಲ್ಲಿ ಒಮ್ಮೆಯೂ ಪಡಿತರ ಪಡೆಯದವರು.
  • 7.5 ಎಕರೆಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿರುವವರು.

ಆದಾಯದ ಗೊಂದಲ ಮತ್ತು ಅಧಿಕಾರಿಗಳ ಭರವಸೆ

ಆದಾಗ್ಯೂ, ಕೆಲವರು ಆರ್ಥಿಕ ವರ್ಷವೊಂದರಲ್ಲಿ ₹1.20 ಲಕ್ಷ ಹಣ ವರ್ಗಾವಣೆ ಆದ ಕಾರಣಕ್ಕಾಗಿ ತಮ್ಮ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

ಅರ್ಹತೆ ಇದ್ದರೂ, ವಾರ್ಷಿಕ ಆದಾಯದ ಗೊಂದಲದಿಂದಾಗಿ ಕಾರ್ಡ್‌ಗಳು ರದ್ದಾಗಿದ್ದರೆ, ಸೂಕ್ತ ದಾಖಲೆಗಳೊಂದಿಗೆ ಆಹಾರ ಇಲಾಖೆ ಕಚೇರಿಗೆ ಮಾಹಿತಿ ಸಲ್ಲಿಸಬಹುದು. ಪರಿಶೀಲನೆ ನಡೆಸಿ ಮತ್ತೆ ಬಿಪಿಎಲ್ ಕಾರ್ಡ್ ವಿತರಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಅವರು, ಅರ್ಹತೆ ಇದ್ದೂ ಕಾರ್ಡ್‌ಗಳು ರದ್ದಾಗಿದ್ದರೆ, ಅವರಿಗೆ ಮತ್ತೆ ಬಿಪಿಎಲ್ ಕಾರ್ಡ್‌ಗಳನ್ನು ಕೊಡಿಸಲಾಗುವುದು ಎಂದು ತಿಳಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಎಂ.ಎಸ್‌.ರಮೇಶ ಅವರು, ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಸಮೀಕ್ಷೆ ಕೈಗೊಳ್ಳಲಾಗಿದೆ ಮತ್ತು ಗುರುತಿಸಿದ ಅನರ್ಹ ಕಾರ್ಡ್‌ಗಳನ್ನು ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾಯಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

This image has an empty alt attribute; its file name is WhatsApp-Image-2025-09-05-at-11.51.16-AM-12-1024x330.jpeg

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories