ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (KMDC) ವತಿಯಿಂದ 2025-26ನೇ ಸಾಲಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ ಮತೀಯ ಅಲ್ಪಸಂಖ್ಯಾತ ಸಮುದಾಯದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕೆಳಗಿನ ಅಲ್ಪಸಂಖ್ಯಾತ ಸಮುದಾಯದವರು (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರು) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಲಭ್ಯವಿರುವ ಪ್ರಮುಖ ಸಾಲ ಯೋಜನೆಗಳು:
ವೃತ್ತಿ ಪ್ರೋತ್ಸಾಹ ಯೋಜನೆ: ವೃತ್ತಿಪರ ಕೋರ್ಸ್‌ಗಳನ್ನು ಮುಗಿಸಿದವರಿಗೆ ಆರ್ಥಿಕ ನೆರವು.
ಸ್ವಾವಲಂಬಿ ಸಾರಥಿ ಯೋಜನೆ: ಸಾರಿಗೆ ಕ್ಷೇತ್ರದಲ್ಲಿ ಉದ್ಯೋಗಕ್ಕಾಗಿ ವಾಹನ ಖರೀದಿಗೆ ಸಾಲ.
ಶ್ರಮಶಕ್ತಿ ಸಾಲ ಯೋಜನೆ: ಸಣ್ಣ ವ್ಯಾಪಾರ ಅಥವಾ ಕರಕುಶಲ ಕೆಲಸ ಮಾಡುವವರಿಗೆ ಆರ್ಥಿಕ ಬೆಂಬಲ.
ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ: ಹೊಸ ವ್ಯಾಪಾರ ಅಥವಾ ಉದ್ಯಮ ಪ್ರಾರಂಭಿಸಲು ಸಹಾಯ.
ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣಕ್ಕಾಗಿ ಸಾಲ ಯೋಜನೆ: ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ.
ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಯಾಧನ ಯೋಜನೆ: ಅಲ್ಪಸಂಖ್ಯಾತ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಆರ್ಥಿಕ ನೆರವು.
ಸ್ವಾಂತನ ಯೋಜನೆ.
ಅರ್ಹತಾ ಮಾನದಂಡಗಳು:
ಅರ್ಜಿದಾರರು ಕಡ್ಡಾಯವಾಗಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು.
ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷಗಳಿಂದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸುವ ವಿವರ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 16, 2025
ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್: ಆಸಕ್ತರು www.kmdconline.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಕೋರಲಾಗಿದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಲಿಂಗರಾಜ್ ರಾಮಾಪುರ ಅವರು BCA, MCA ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ (MA) ಪಡೆದಿದ್ದಾರೆ. ಈ ಹಿಂದೆ ಬೆಂಗಳೂರಿನ Infosys ಮತ್ತು Concentrix ಸಂಸ್ಥೆಗಳಲ್ಲಿ 6 ವರ್ಷಗಳ ಕಾಲ ವೃತ್ತಿಪರ ಅನುಭವ ಹೊಂದಿರುವ ಇವರು, ತಾಂತ್ರಿಕ ಜ್ಞಾನವನ್ನು ಪತ್ರಿಕೋದ್ಯಮಕ್ಕೆ ಅನ್ವಯಿಸಿದ ಪರಿಣತರು.
ವೃತ್ತಿಪರ ಹಾದಿ: 2017 ರಲ್ಲಿ ಐಟಿ ವೃತ್ತಿಜೀವನದ ಜೊತೆಗೇ ಡಿಜಿಟಲ್ ಮಾಧ್ಯಮ ಕ್ಷೇತ್ರಕ್ಕೆ ಕಾಲಿಟ್ಟ ಇವರು, ಪ್ರಸ್ತುತ NeedsOfPublic.in ನ ಎಡಿಟೋರಿಯಲ್ ಸ್ಟ್ರಾಟಜಿಯನ್ನು ಮುನ್ನಡೆಸುತ್ತಿದ್ದಾರೆ. ಡೇಟಾ-ಆಧಾರಿತ ವರದಿಗಾರಿಕೆ, ಮಾರುಕಟ್ಟೆ ವಿಶ್ಲೇಷಣೆ ಮತ್ತು ಸಾರ್ವಜನಿಕರಿಗೆ ಉಪಯುಕ್ತವಾಗುವ ನಿಖರ ಮಾಹಿತಿಯನ್ನು ತಲುಪಿಸುವುದು ಇವರ ಮುಖ್ಯ ಗುರಿ. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಇವರಿಗೆ 9 ವರ್ಷಗಳ ಸುದೀರ್ಘ ಅನುಭವವಿದೆ.


WhatsApp Group




