govt emp

Govt Employee: ರಾಜ್ಯ ಸರ್ಕಾರಿ ನೌಕರರಿಗೆ ಈ ಕೆಲಸ ಮಾಡುವಂತೆ ಸರ್ಕಾರದ ಮಹತ್ವದ ಆದೇಶ.!

Categories:
WhatsApp Group Telegram Group

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು (Cashless Medical Treatment) ಒದಗಿಸಲು ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ ಯನ್ನು ಅಕ್ಟೋಬರ್ 01 ರಿಂದ ಜಾರಿಗೊಳಿಸಿ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಯೋಜನೆಯ ಪ್ರಮುಖ ಅಂಶಗಳು:

ವಂತಿಗೆ (Contribution): ಪತಿ-ಪತ್ನಿ ಇಬ್ಬರೂ ಸರ್ಕಾರಿ ನೌಕರರಾಗಿದ್ದಲ್ಲಿ, ಅವರಲ್ಲಿ ಒಬ್ಬರು ಮಾತ್ರ ವೇತನದಿಂದ ಮಾಸಿಕ ವಂತಿಕೆಯನ್ನು ಪಾವತಿಸಬೇಕು.

ಆದಾಯ ಮಿತಿ ಹೆಚ್ಚಳ: ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ, ಅವರು ಈ ಯೋಜನೆಯಡಿ ಸೌಲಭ್ಯ ಪಡೆಯಲು ನಿಗದಿಪಡಿಸಿದ್ದ ಮಾಸಿಕ ಆದಾಯ ಮಿತಿಯನ್ನು ರೂ. 17,000 ಗಳಿಂದ ರೂ. 27,000 ಗಳಿಗೆ ಹೆಚ್ಚಳ ಮಾಡಲಾಗಿದೆ.

ವಿವಾಹಿತ ಮಹಿಳಾ ನೌಕರರ ತಂದೆ-ತಾಯಿ: ವಿವಾಹಿತ ಮಹಿಳಾ ನೌಕರರ ತಂದೆ-ತಾಯಿ ಕೂಡ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.

ವಂತಿಗೆ ಪಾವತಿ ಮತ್ತು ನೋಂದಣಿ:

ವಂತಿಗೆ ನಿರಾಕರಣೆಗೆ ಅವಕಾಶ: ಮಾಸಿಕ ವಂತಿಕೆಯನ್ನು ನೀಡಲು ಇಚ್ಛಿಸದೇ ಇರುವ ನೌಕರರು ಅಕ್ಟೋಬರ್ 18 ರೊಳಗೆ ಲಿಖಿತವಾಗಿ ಸಂಬಂಧಿಸಿದ ಡಿ.ಡಿ.ಓ.ಗಳಿಗೆ (DDO) ಮಾಹಿತಿ ನೀಡಬೇಕು.

ಮಾಸಿಕ ವಂತಿಕೆ ಕಡಿತ: ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ಸರ್ಕಾರ ನಿರ್ದಿಷ್ಟಪಡಿಸಿರುವ ವಂತಿಕೆಯನ್ನು ಅಕ್ಟೋಬರ್ 2025ನೇ ತಿಂಗಳಿಂದ ತಮ್ಮ ವೇತನದಲ್ಲಿ ಕಡಿತಗೊಳಿಸಲು ಅನುಮತಿ ನೀಡಬೇಕು.

ಕಡ್ಡಾಯ ನೋಂದಣಿ: ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ನೌಕರರು ಈ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಕ್ರಮವಹಿಸಬೇಕು.

ಯೋಜನೆಯ ಲಾಭ:

ಈ ಯೋಜನೆಯ ಮೂಲಕ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 5.25 ಲಕ್ಷ ಸರ್ಕಾರಿ ನೌಕರರು ಹಾಗೂ ಅವರ 25 ಲಕ್ಷ ಕುಟುಂಬ ಸದಸ್ಯರು ವೈದ್ಯಕೀಯ ಸೌಲಭ್ಯಗಳ ಪ್ರಯೋಜನ ಪಡೆಯಲಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ ಮತ್ತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

WhatsApp Image 2025 09 05 at 11.51.16 AM 1

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Popular Categories