bar bandh

ಬ್ರೇಕಿಂಗ್: ಅ.2 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ಮದ್ಯ ಮಾರಾಟ’ ನಿಷೇಧಿಸಿ ಆದೇಶ

Categories:
WhatsApp Group Telegram Group

ಬೆಂಗಳೂರು: ದಸರಾ ಉತ್ಸವ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ, ದಿನಾಂಕ 02-10-2025 ರಂದು ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.

ದಿನಾಂಕ 02-10-2025 ರಂದು ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉತ್ತರ, ಕೇಂದ್ರ, ಪೂರ್ವ ಮತ್ತು ಈಶಾನ್ಯ ವಿಭಾಗಳಲ್ಲಿ ದಸರಾ ಉತ್ಸವ ಮತ್ತು ಮೆರವಣಿಗೆಗಳು ನಡೆಯಲಿವೆ. ಈ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಉಂಟು ಮಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ, ಮುನ್ನೆಚ್ಚರಿಕಾ ಕ್ರಮವಾಗಿ, ಸಂಬಂಧಪಟ್ಟ ಉಪ ಪೊಲೀಸ್ ಆಯುಕ್ತರುಗಳು ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್ ಮತ್ತು ವೈನ್ಸ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಮನವಿ ಸಲ್ಲಿಸಿದ್ದಾರೆ.

ನಿಷೇಧಾಜ್ಞೆ ಜಾರಿ

ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್ ಅವರು ಈ ಮನವಿಯನ್ನು ಮತ್ತು ಗುಪ್ತವಾರ್ತಾ ವಿಭಾಗದಿಂದ ಸಂಗ್ರಹಿಸಿದ ಮಾಹಿತಿಯನ್ನು ಪರಿಶೀಲಿಸಿ ಆದೇಶ ನೀಡಿದ್ದಾರೆ. ದಸರಾ ಉತ್ಸವದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಬಾರದಂತೆ ತಡೆಯುವುದು ಅವಶ್ಯಕ.

ಹೀಗಾಗಿ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 163 ರ ಉಪ ಕಲಂ (1) ಮತ್ತು (3) ರ ಅನ್ವಯ ಅವರಿಗೆ ದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡ ಪ್ರದೇಶಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ನಿಷೇಧಾಜ್ಞೆ ವಿಧಿಸಲಾಗಿದೆ.

CL-4 (ಕ್ಲಬ್‌ಗಳು) & CL-6A (ಸೇವೆಗೆ ಮಾತ್ರ) ಪರವಾನಗಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಬಾರ್ & ರೆಸ್ಟೋರೆಂಟ್‌ಗಳು, ವೈನ್ಸ್ ಶಾಪ್‌ಗಳು, ಪಬ್‌ಗಳು, ಎಂ.ಎಸ್.ಐ.ಎಲ್. ಮಳಿಗೆಗಳು ಸೇರಿದಂತೆ ಎಲ್ಲಾ ರೀತಿಯ ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಗಮನಿಸಿ: ಈ ಆದೇಶವು ರೆಸ್ಟೋರೆಂಟ್ ಮತ್ತು ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡುತ್ತದೆ.

ಅಕ್ಟೋಬರ್ 2 ರಂದು ಮದ್ಯ ಮಾರಾಟ ಬಂದ್ ಆಗುವ ಪ್ರದೇಶಗಳು:

ದಿನಾಂಕ 03-10-2025 ರಂದು ಮಧ್ಯರಾತ್ರಿ (ಬೆಳಗ್ಗೆ) 12 ಗಂಟೆಯಿಂದ ದಿನಾಂಕ 03-10-2025 ರ ಮಧ್ಯಾಹ್ನ 12 ಗಂಟೆಯವರೆಗೆ ಈ ಕೆಳಗಿನ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮದ್ಯ ಮಾರಾಟ ನಿಷೇಧವಿರುತ್ತದೆ.

  • ಉತ್ತರ ವಿಭಾಗ: ಆರ್.ಟಿ. ನಗರ, ಜೆ.ಸಿ. ನಗರ, ಹೆಬ್ಬಾಳ ಮತ್ತು ಸಂಜಯ ನಗರ.
  • ಈಶಾನ್ಯ ವಿಭಾಗ: ಕೋಡಿಗೇಹಳ್ಳಿ ಮತ್ತು ಅಮೃತಹಳ್ಳಿ.
  • ಪೂರ್ವ ವಿಭಾಗ: ಭಾರತಿನಗರ, ಪುಲಕೇಶಿನಗರ, ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಮತ್ತು ಶಿವಾಜಿನಗರ.
  • ಕೇಂದ್ರ ವಿಭಾಗ: ಹೈಗ್ರೌಂಡ್ಸ್ ಮತ್ತು ಸದಾಶಿವನಗರ.
j01
j02
WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories