MODIHI GIFT

ರೈತರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್ ಏನಿದು ಇಲ್ಲಿದೆ ಸಂಪೂರ್ಣ ಮಾಹಿತಿ

Categories:
WhatsApp Group Telegram Group

ನವದೆಹಲಿ, ಅಕ್ಟೋಬರ್ 02: ಚಳಿಗಾಲದ ಬೆಳೆಗಳಿಗೆ 2026-27ರ ಮಾರುಕಟ್ಟೆ ಹಂಗಾಮಿನ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರದ ಈ ಮಹತ್ವದ ನಿರ್ಧಾರವು ರಾಜ್ಯದ, ವಿಶೇಷವಾಗಿ ಉತ್ತರ ಕರ್ನಾಟಕ ಜಿಲ್ಲೆಗಳ ರೈತರಿಗೆ ದಸರಾ ಹಬ್ಬದ ಮುನ್ನಾ ದಿನದ ದೊಡ್ಡ ಕೊಡುಗೆಯಾಗಿದೆ.

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಅನೇಕ ಭಾಗಗಳಲ್ಲಿ ಚಳಿಗಾಲದ ಅವಧಿಯಲ್ಲಿ ಕಡಲೆ, ತೊಗರಿ, ಕುಸುಬೆ, ಮತ್ತು ಸಾಸಿವೆಯಂತಹ ರಬಿ ಬೆಳೆಗಳನ್ನು ಹೆಚ್ಚು ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈ ಬೆಳೆಗಳಿಗೆ ಆಗಾಗ ಮಾರುಕಟ್ಟೆಯಲ್ಲಿ ಬೆಲೆ ಕುಸಿತ ಉಂಟಾಗಿ ರೈತರು ನಷ್ಟ ಅನುಭವಿಸುತ್ತಿದ್ದರು. ಇದನ್ನು ಮನಗಂಡು ಕೇಂದ್ರ ಸರ್ಕಾರವು ಈಗ ಎಂಎಸ್‌ಪಿಯನ್ನು ಗಣನೀಯವಾಗಿ ಏರಿಕೆ ಮಾಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಚಳಿಗಾಲದ ಬೆಳೆಗಳಿಗೆ ಹೆಚ್ಚಿದ ಲಾಭಾಂಶ

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರು ಟ್ವೀಟ್ ಮಾಡಿ ಈ ನಿರ್ಧಾರವನ್ನು ಶ್ಲಾಘಿಸಿದ್ದಾರೆ. ರೈತರ ಉತ್ಪಾದನಾ ವೆಚ್ಚಕ್ಕಿಂತ ಗಣನೀಯವಾಗಿ ಹೆಚ್ಚಿನ ಲಾಭ ಸಿಗುವುದನ್ನು ಈ ನಿರ್ಧಾರ ಖಾತ್ರಿಪಡಿಸುತ್ತದೆ.

ಯಾವ ಬೆಳೆಗಳಿಗೆ ಎಷ್ಟು ಲಾಭಾಂಶ?

  • ಗೋಧಿ: 109%
  • ಸಾಸಿವೆ: 93%
  • ಮಸೂರ: 89%
  • ಕಡಲೆ: 59%
  • ಬಾರ್ಲಿ: 58%
  • ಕುಸುಬೆ: 50%

ಈ ದಿಟ್ಟ ಹೆಜ್ಜೆಯು ರೈತರ ಆದಾಯವನ್ನು ದ್ವಿಗುಣಗೊಳಿಸುವ, ಬೆಳೆ ವೈವಿಧ್ಯೀಕರಣವನ್ನು ಖಚಿತಪಡಿಸುವ ಮತ್ತು ಭಾರತದ ಕೃಷಿ-ಆರ್ಥಿಕತೆಯನ್ನು ಬಲಪಡಿಸುವ ಕೇಂದ್ರ ಸರ್ಕಾರದ ಬದ್ಧತೆಯನ್ನು ಎತ್ತಿ ಹಿಡಿಯುತ್ತದೆ ಎಂದು ಆರ್. ಅಶೋಕ್ ಅವರು ಹೇಳಿದ್ದಾರೆ. ನಾಡಿನ ಅನ್ನದಾತರಿಗೆ ಇನ್ನಷ್ಟು ಶಕ್ತಿ ತುಂಬಲು ಇದೊಂದು ಐತಿಹಾಸಿಕ ನಿರ್ಧಾರವಾಗಿದೆ.

WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories