WhatsApp Image 2025 10 06 at 11.32.58 AM

BREAKING NEWS: ಕರ್ನಾಟಕ ಗೃಹ ಮಂಡಳಿಗೆ 2,760 ಎಕರೆ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ ಚಿಂತನೆ, ರೈತರಿಂದ ತೀವ್ರ ವಿರೋಧ.!

WhatsApp Group Telegram Group

ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಮತ್ತೆ ಭೂಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಸಾವಿರಾರು ಎಕರೆ ರೈತರ ಕೃಷಿ ಭೂಮಿ ವಶಕ್ಕೆ ಪಡೆಯಲು ಯೋಜಿಸಿದೆ. ಈ ಬಾರಿ, ಕರ್ನಾಟಕ ಗೃಹ ಮಂಡಳಿ (KHB) ವಸತಿ ಯೋಜನೆಗಳಿಗಾಗಿ ರೈತರ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧತೆ ನಡೆಸಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಸುಮಾರು 2,760 ಎಕರೆ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ಹೊರಟಿದ್ದು, ಸರ್ಕಾರದ ಈ ನಡೆಗೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸರ್ಕಾರ ಯೋಜನೆ ರೂಪಿಸಿದೆ. ದೊಡ್ಡಬೆಳವಂಗಲ, ದೊಡ್ಡಹೆಜ್ಜೆ, ವೆಂಕಟೇಶಪುರ ಸೇರಿದಂತೆ ಹಲವು ಗ್ರಾಮಗಳ ರೈತರು ಈ ಪ್ರಕ್ರಿಯೆಯನ್ನು ವಿರೋಧಿಸುತ್ತಿದ್ದಾರೆ. ತಮ್ಮ ಕೃಷಿ ಭೂಮಿ ವಶಪಡಿಸಿಕೊಳ್ಳುವುದನ್ನು ಖಂಡಿಸಿ, ಐದಕ್ಕೂ ಹೆಚ್ಚು ಗ್ರಾಮಗಳ ರೈತರು ಸಮಾವೇಶ ನಡೆಸಿ ಹೋರಾಟಕ್ಕೆ ಇಳಿದಿದ್ದಾರೆ.

ಕೃಷಿ ಭೂಮಿ ಉಳಿಸಿ ಎಂದು ಆಗ್ರಹಿಸಿ, ರೈತರು ಚಿಕ್ಕಬೆಳವಂಗಲದಿಂದ ದೊಡ್ಡಬೆಳವಂಗಲದವರೆಗೆ ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಆಕ್ರೋಶವನ್ನು ಹೊರಹಾಕಲು ಕರ್ನಾಟಕ ಗೃಹ ಮಂಡಳಿಯಿಂದ ಬಂದ ನೋಟಿಸ್‌ಗಳನ್ನೂ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ರೈತರು ಈ ವೇಳೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಈಗಾಗಲೇ ಟೌನ್‌ಶಿಪ್‌ಗಳು, ಕ್ವೀನ್ ಸಿಟಿ ಮತ್ತು ಕೆಐಎಡಿಬಿ (KIADB) ಯೋಜನೆಗಳಿಗಾಗಿ ರೈತರಿಂದ ಸುಮಾರು 10,000 ಎಕರೆ ಕೃಷಿ ಭೂಮಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದೆ ಎಂದು ರೈತರು ದೂರಿದ್ದಾರೆ.

ಇದೇ ಹಿನ್ನೆಲೆಯಲ್ಲಿ, ಮತ್ತೆ ಗೃಹ ಮಂಡಳಿಗೆ ಭೂಮಿ ವಶಪಡಿಸಿಕೊಳ್ಳಲು ವಿರೋಧ ವ್ಯಕ್ತಪಡಿಸಿರುವ ರೈತರು, “ಯಾವುದೇ ಕಾರಣಕ್ಕೂ ನಮ್ಮ ಭೂಮಿಯನ್ನು ಬಿಡುವುದಿಲ್ಲ. ಪ್ರಾಣ ಬೇಕಾದರೂ ಬಿಡುತ್ತೇವೆ, ಭೂಮಿ ಬಿಡುವುದಿಲ್ಲ” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 09 05 at 11.51.16 AM 12
ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories