ಕರ್ನಾಟಕ ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದವರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ (Karnataka Minorities Development Corporation – KMDC) ಹಲವಾರು ಜನಪರ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಸ್ವಾವಲಂಬಿ ಸಾರಥಿ ಯೋಜನೆ, ವಿದೇಶ ವ್ಯಾಸಂಗಕ್ಕೆ ಸಾಲ, ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಸೇರಿದಂತೆ ಒಟ್ಟು 9 ಪ್ರಮುಖ ಯೋಜನೆಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸಾಲ ಮತ್ತು ಸಹಾಯಧನ (ಸಬ್ಸಿಡಿ) ಒದಗಿಸಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ.
ನಿಗಮದ ಈ ವಿವಿಧ ಯೋಜನೆಗಳ (Alpasankyatara Nigama Yojane) ಸೌಲಭ್ಯಗಳನ್ನು ಪಡೆಯಲು ಸಾರ್ವಜನಿಕರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇನ್ನು ಕೇವಲ 10 ದಿನಗಳು ಮಾತ್ರ ಉಳಿದಿದೆ. ಅರ್ಹ ಅರ್ಜಿದಾರರು ಕೂಡಲೇ ಈ ಕೆಳಗಿನ ಸಂಪೂರ್ಣ ವಿವರಗಳನ್ನು ತಿಳಿದು, ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಸೌಲಭ್ಯದ ಲಾಭ ಪಡೆಯಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 16, 2025.
ಪ್ರಮುಖ 9 ಯೋಜನೆಗಳ ಪಟ್ಟಿ:
ರಾಜ್ಯ ಸರ್ಕಾರದ ಅಲ್ಪಸಂಖ್ಯಾತ ನಿಗಮದಿಂದ ಕೆಳಗೆ ಪಟ್ಟಿ ಮಾಡಿರುವ ಒಟ್ಟು 9 ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಅರ್ಹ ಅರ್ಜಿದಾರರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ:
ವಿದೇಶ ವ್ಯಾಸಂಗಕ್ಕಾಗಿ ಸಾಲ ಯೋಜನೆ (Education Loan)
ಶ್ರಮಶಕ್ತಿ ಸಾಲ ಯೋಜನೆ (Shramshakti Sala)
ವೃತ್ತಿ ಪ್ರೋತ್ಸಾಹ ಸಾಲ ಯೋಜನೆ (Business Loan)
ಸ್ವಾವಲಂಬಿ ಸಾರಥಿ ಯೋಜನೆ (Swavalambi Sarati Yojane)
ಸಮುದಾಯ ಆಧಾರಿತ ತರಬೇತಿ ಯೋಜನೆ
ವ್ಯಾಪಾರ/ಉದ್ಯಮಗಳಿಗೆ ನೇರ ಸಾಲ ಯೋಜನೆ (Business Loan Subsidy Scheme)
ಸಾಂತ್ವನ ಯೋಜನೆ
ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ
ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ (Swasaha Sanagha Sala Yojane)
ಪ್ರಮುಖ ಯೋಜನೆಗಳ ಸಬ್ಸಿಡಿ ಮತ್ತು ವಿವರಗಳು:
ಶ್ರಮಶಕ್ತಿ ಸಾಲ ಯೋಜನೆ:
ಕುಲಕಸುಬುದಾರರು ಮತ್ತು ಸಣ್ಣ ವ್ಯಾಪಾರ ಆರಂಭಿಸುವವರಿಗೆ ರೂ. 50,000/- ವರೆಗೆ ಸಾಲ ಸೌಲಭ್ಯ. ಇದರಲ್ಲಿ ಶೇ. 50ರಷ್ಟು ಸಹಾಯಧನ ಮತ್ತು ಶೇ. 50ರಷ್ಟು ಸಾಲವಿರುತ್ತದೆ.
ವೃತ್ತಿ ಪ್ರೋತ್ಸಾಹ ಸಾಲ ಯೋಜನೆ:
ವಿವಿಧ ಆರ್ಥಿಕ ಚಟುವಟಿಕೆಗಳಿಗೆ ರೂ. 1,00,000/- ವರೆಗೆ ಸಾಲ. ಇದರಲ್ಲಿ ಶೇ. 50ರಷ್ಟು ಸಾಲ ಮತ್ತು ಶೇ. 50ರಷ್ಟು ಸಹಾಯಧನ ಲಭ್ಯ.
ಸ್ವಾವಲಂಬಿ ಸಾರಥಿ ಯೋಜನೆ:
ಟ್ಯಾಕ್ಸಿ/ಸರಕು ವಾಹನ ಖರೀದಿಗೆ ವಾಹನದ ಮೌಲ್ಯದ ಶೇ. 50 ಅಥವಾ ಗರಿಷ್ಠ ರೂ. 3,00,000/- ವರೆಗೆ ಸಬ್ಸಿಡಿ. ಪ್ರಯಾಣಿಕ ಆಟೋರಿಕ್ಷಾ ಖರೀದಿಗೆ ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದಿರಬೇಕು.
ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ:
ಈ ಉದ್ಯಮದಲ್ಲಿ ತೊಡಗಿರುವವರಿಗೆ ದುಡಿಮೆ ಬಂಡವಾಳ ಮತ್ತು ಮೂಲಭೂತ ಸೌಕರ್ಯಕ್ಕೆ ರೂ. 2.00 ಲಕ್ಷದವರೆಗೆ ಸಾಲ/ಸಹಾಯಧನ. ಇದರಲ್ಲಿ ಶೇ. 50ರಷ್ಟು ಸಹಾಯಧನ ಇರುತ್ತದೆ.
ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ:
ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿರುವ ಸ್ವ-ಸಹಾಯ ಗುಂಪುಗಳು ಬ್ಯಾಂಕ್‌ಗಳಿಂದ ಪಡೆದ ಸಾಲಕ್ಕೆ, ಘಟಕ ವೆಚ್ಚದ ಶೇ. 50 ಅಥವಾ ಗರಿಷ್ಠ ರೂ. 2.00 ಲಕ್ಷದವರೆಗೆ ಸಹಾಯಧನ (ಬ್ಯಾಕ್‌ಎಂಡ್ ಸಬ್ಸಿಡಿ) ನಿಗಮದಿಂದ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ನಿಗಮದ ಎಲ್ಲಾ ಯೋಜನೆಗಳ ಪ್ರಯೋಜನವನ್ನು ಪಡೆಯಲು ಕೊನೆಯ ದಿನಾಂಕ ಮುಕ್ತಾಯವಾಗುವುದರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ ಅಥವಾ ಕಂಪ್ಯೂಟರ್ ಸೆಂಟರ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅಥವಾ, ಮನೆಯಲ್ಲೇ ಕುಳಿತು, ಕೆಳಗೆ ನೀಡಲಾದ ವೆಬ್‌ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಗತ್ಯ ವಿವರ ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡುವ ಮೂಲಕ ನೀವೇ ಸ್ವತಃ ಅರ್ಜಿಯನ್ನು ಸಲ್ಲಿಸಬಹುದು.
ಆನ್‌ಲೈನ್ ಅರ್ಜಿ ಸಲ್ಲಿಸಲು ವೆಬ್‌ಸೈಟ್ ಲಿಂಕ್: “Alpasankyatara Nigama Yojane Online Application“
ಅರ್ಜಿ ಸಲ್ಲಿಸಲು ಬೇಕಾದ ಪ್ರಮುಖ ದಾಖಲೆಗಳು:
ಸಾಲ ಮತ್ತು ಸಹಾಯಧನ ಪಡೆಯಲು ಈ ಕೆಳಗಿನ ದಾಖಲೆಗಳು ಅವಶ್ಯಕ:
- ಅಭ್ಯರ್ಥಿಯ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಪೋಟೋ (ಪಾಸ್‌ಪೋರ್ಟ್ ಗಾತ್ರ)
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಆಯಾ ಯೋಜನೆಗೆ ಸಂಬಂಧಿಸಿದ ಇತರ ಅವಶ್ಯಕ ಪ್ರಮಾಣ ಪತ್ರಗಳು

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Kavitha holds a Master’s degree in Computer Applications (MCA) and has a deep interest in technology. Leveraging her academic background, she writes articles on science and technology, simplifying complex technical topics for general readers. Her work focuses on making cutting-edge advancements in tech accessible and engaging.


WhatsApp Group




