ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾನುವಾರ ಉತ್ತಮ ಮಳೆಯಾಗಿದೆ. ಅದೇ ರೀತಿ, ಮುಂದಿನ 3 ದಿನಗಳವರೆಗೆ (ಅಕ್ಟೋಬರ್ 10ರವರೆಗೆ) ರಾಜ್ಯದ ಹಲವು ಭಾಗಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರು ಹವಾಮಾನ ಮುನ್ಸೂಚನೆ
ಮುಂದಿನ 48 ಗಂಟೆಗಳವರೆಗೆ ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಈ ಅವಧಿಯಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 20°C ಇರುವ ಸಾಧ್ಯತೆ ಇದೆ.
ದಿನಾಂಕವಾರು ಮಳೆಯ ಮುನ್ಸೂಚನೆ
ಅಕ್ಟೋಬರ್ 7 ರಂದು:
ಕರಾವಳಿ ಜಿಲ್ಲೆಗಳು: ಹಗುರದಿಂದ ಸಾಧಾರಣ ಮಳೆ.
ಉತ್ತರ ಒಳನಾಡು: ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆ.
ದಕ್ಷಿಣ ಒಳನಾಡು: ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆ.
ಅಕ್ಟೋಬರ್ 8 ರಂದು:
ಕರಾವಳಿ ಜಿಲ್ಲೆಗಳು: ಭಾರಿ ಮಳೆಯಾಗುವ ಸಾಧ್ಯತೆ.
ಉತ್ತರ ಒಳನಾಡು: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆ.
ದಕ್ಷಿಣ ಒಳನಾಡು: ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆ. ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.
ಅಕ್ಟೋಬರ್ 9 ರಂದು:
ಕರಾವಳಿ ಜಿಲ್ಲೆಗಳು: ಭಾರಿ ಮಳೆ/ಗುಡುಗು ಸಹಿತ ಮಳೆ.
ಉತ್ತರ ಒಳನಾಡು: ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ.
ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆ.
ಅಕ್ಟೋಬರ್ 10 ರಂದು:
ಕರಾವಳಿ ಜಿಲ್ಲೆಗಳು: ಭಾರಿ ಮಳೆ/ಗುಡುಗು ಸಹಿತ ಮಳೆ.
ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕೆಲವೆಡೆ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ.
ದಕ್ಷಿಣ ಒಳನಾಡು: ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅಕ್ಟೋಬರ್ 11 ಮತ್ತು 12 ರಂದು:
ಕರಾವಳಿ ಮತ್ತು ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆ.
ದಕ್ಷಿಣ ಒಳನಾಡು: ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

Sagari leads the ‘Government Schemes’ vertical at NeedsOfPublic.in, where she decodes the latest Central and State government policies for the common citizen. She has over 3 years of experience tracking welfare programs like PM Kisan, Ayushman Bharat, and State Ration updates. Her goal is to ensure every reader understands their eligibility and benefits without confusion. Sagari strictly verifies all updates from official government portals before publishing. Outside of work, she is an advocate for digital literacy in rural India.”
Connect with Sagari:


WhatsApp Group




