ರ್ನಾಟಕ ರಾಜ್ಯದ ಬೆಂಗಳೂರಿನಿಂದ ಒಂದು ಪ್ರಮುಖ ಸುದ್ದಿ! ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ರ ಮಾರ್ಚ್/ಏಪ್ರಿಲ್ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ (SSLC) ಪರೀಕ್ಷೆ-1ಗೆ ಸಂಬಂಧಿಸಿದಂತೆ ನೋಂದಣಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಲೇಖನವು ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಒದಗಿಸುತ್ತದೆ, ಇದರಲ್ಲಿ ನೋಂದಣಿ ಪ್ರಕ್ರಿಯೆ, ಶುಲ್ಕ ವಿವರಗಳು, ವಿನಾಯಿತಿಗಳು ಮತ್ತು ಪ್ರಮುಖ ಷರತ್ತುಗಳನ್ನು ಒಳಗೊಂಡಿದೆ. ಈ ಮಾಹಿತಿಯು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಿಗೆ ಉಪಯುಕ್ತವಾಗಿದೆ ಇಲಾಖೆಯ ಅಧಿಕೃತ ಪ್ರತಿಗಳು ಲೇಖನದ ಕೊನೆಯ ಭಾಗದಲ್ಲಿವೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಎಸ್ಎಸ್ಎಲ್ಸಿ ಪರೀಕ್ಷೆ-1ಗೆ ಹಾಜರಾಗಲು, ವಿದ್ಯಾರ್ಥಿಗಳು ಕನಿಷ್ಠ 75% ಹಾಜರಾತಿಯನ್ನು ಶಾಲೆಯಲ್ಲಿ ಕಡ್ಡಾಯವಾಗಿ ಹೊಂದಿರಬೇಕು. ಈ ಷರತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವರ್ಷದಲ್ಲಿ ನಿಯಮಿತವಾಗಿ ಶಾಲೆಗೆ ಹಾಜರಾಗುವಂತೆ ಖಚಿತಪಡಿಸಿಕೊಳ್ಳಲು ಜಾರಿಗೊಳಿಸಲಾಗಿದೆ. ಒಂದು ವೇಳೆ ವಿದ್ಯಾರ್ಥಿಯೊಬ್ಬರು ಈ ಶೇಕಡಾವಾರು ಹಾಜರಾತಿಯನ್ನು ಪೂರೈಸದಿದ್ದರೆ, ಅವರಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶವಿರುವುದಿಲ್ಲ. ಆದರೆ, ವೈದ್ಯಕೀಯ ಕಾರಣಗಳಿಂದ ಅಥವಾ ಇತರ ಅನಿವಾರ್ಯ ಕಾರಣಗಳಿಂದ ಹಾಜರಾತಿ ಕಡಿಮೆಯಾದರೆ, ಶಾಲೆಯು ಸೂಕ್ತ ದಾಖಲೆಗಳೊಂದಿಗೆ ಮಂಡಳಿಗೆ ಅರ್ಜಿ ಸಲ್ಲಿಸಬಹುದು.
2026ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2026ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF) ವಿವರಗಳನ್ನು ಮಂಡಳಿಯ https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್ ಲೋಡ್ ಮಾಡಲು ಕೆಳಕಂಡಂತೆ ಮಾರ್ಗಸೂಚಿ ಹೊರಡಿಸಲಾಗಿದೆ. ವಿದ್ಯಾರ್ಥಿಗಳ ನೋಂದಣಿಗೆ ಅಗತ್ಯವಿರುವ ಮಾಹಿತಿಗಳನ್ನು ಸಂಗ್ರಹಿಸಿಕೊಂಡು ನಿಗಧಿಪಡಿಸಿದ ದಿನಾಂಕದಲ್ಲಿ ಶಾಲಾ ಲಾಗಿನ್ನಲ್ಲಿ ವಿದ್ಯಾರ್ಥಿಗಳ ನೋಂದಣಿಯನ್ನು ಮಾಡುವುದು.
ಈ ಸಾಲಿನಿಂದ ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಯನ್ನು ನೇರವಾಗಿ ಅಭ್ಯರ್ಥಿಗಳೇ ಮಂಡಲಿ ಜಾಲತಾಣದಲ್ಲಿ ನೋಂದಾಯಿಸಬಹುದಾಗಿದ್ದು, ಈ ಕುರಿತ ಮಾರ್ಗಸೂಚಿಯನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.
1. ಆಡಳಿತ ವಿಭಾಗ
ಖಾಸಗಿ ಪ್ರೌಢಶಾಲೆಗಳ ನೋಂದಣಿ ಮತ್ತು ಮಾನ್ಯತೆ :-
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ- 1966 Chapter VI -ನಿಯಮ 36 ಮತ್ತು 37ರನ್ವಯ ಮಾನ್ಯತೆ ಪಡೆದ ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ಮಾತ್ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ನೋಂದಾಯಿಸಲು ಅವಕಾಶವಿರುತ್ತದೆ.
ಕರ್ನಾಟಕ ಶಿಕ್ಷಣ ಕಾಯ್ದೆ-1983 ನಿಯಮ-30, 31, 33, 36 ಹಾಗೂ 38 ರನ್ವಯ ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆಗಳು ನೋಂದಣಿ ಮತ್ತು ಮಾನ್ಯತೆಯನ್ನು ಕಡ್ಡಾಯವಾಗಿ ಪಡೆದಿರಬೇಕು ಹಾಗೂ ಪ್ರೌಢಶಾಲೆಯಲ್ಲಿ ಬೋಧನೆ ಮಾಡುವ ಮಾಧ್ಯಮಗಳಿಗನುಗುಣವಾಗಿ ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆಯು ನವೀಕರಣವಾಗಿರಬೇಕು. 2025-26ನೇ ಸಾಲಿನ ಮಾನ್ಯತೆ ನವೀಕರಣವನ್ನು ಸಕ್ಷಮ ಪ್ರಾಧಿಕಾರದಿಂದ ಸಕಾಲದಲ್ಲಿ ಪಡೆದುಕೊಳ್ಳುವುದು.





ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಶಿವರಾಜ್ ಅವರು NeedsOfPublic.in ನಲ್ಲಿ ಸಾರ್ವಜನಿಕ, ಶೈಕ್ಷಣಿಕ ಮತ್ತು ಸ್ಥಳೀಯ ಸುದ್ದಿಗಳ ವಿಭಾಗದ ಹಿರಿಯ ಸಂಪಾದಕರಾಗಿದ್ದಾರೆ. ಪತ್ರಿಕೋದ್ಯಮದಲ್ಲಿ 6 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಇವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಕೀರ್ಣ ಯೋಜನೆಗಳನ್ನು ಹಾಗೂ ವಿದ್ಯಾರ್ಥಿವೇತನಗಳನ್ನು (Scholarships) ವಿಶ್ಲೇಷಿಸಿ, ಜನಸಾಮಾನ್ಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಅದರ ಪ್ರಯೋಜನಗಳನ್ನು ಸುಲಭವಾಗಿ ಅರ್ಥೈಸುವಲ್ಲಿ ಎಕ್ಸ್ಪರ್ಟ್ ಆಗಿದ್ದಾರೆ. ಇದರ ಜೊತೆಗೆ ಪ್ರಮುಖ ಶೈಕ್ಷಣಿಕ ಅಪ್ಡೇಟ್ಗಳು, ಪರೀಕ್ಷಾ ಫಲಿತಾಂಶಗಳು ಮತ್ತು ವಿಶ್ವಾಸಾರ್ಹ ದೈನಂದಿನ ಹವಾಮಾನ ವರದಿಯನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳ ಭವಿಷ್ಯ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವುದು ಇವರ ಮುಖ್ಯ ಗುರಿಯಾಗಿದೆ.”


WhatsApp Group




