WhatsApp Image 2025 10 10 at 12.04.08 PM

`ಆರೋಗ್ಯ ಕವಚ’ ಬಲಪಡಿಸಲು ಸರ್ಕಾರದಿಂದ ಮಹತ್ವದ ಹೆಜ್ಜೆ : `3691′ ಹುದ್ದೆಗಳನ್ನು ಸೃಜಿಸಿ ಆದೇಶ.!

Categories:
WhatsApp Group Telegram Group

ರಾಜ್ಯ ಸರ್ಕಾರವು 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 144ರ ಅನುಸಾರ, ಕರ್ನಾಟಕದಲ್ಲಿ ಆರೋಗ್ಯ ಕವಚ ಸೇವೆಯನ್ನು ಇನ್ನಷ್ಟು ಬಲಪಡಿಸಲು ಮಹತ್ವದ ಕ್ರಮವನ್ನು ಕೈಗೊಂಡಿದೆ. ಈ ಯೋಜನೆಯಡಿ, ಆರೋಗ್ಯ ಕ್ಷೇತ್ರದಲ್ಲಿ ಸೇವೆಯ ಗುಣಮಟ್ಟವನ್ನು ಉನ್ನತೀಕರಿಸುವ ಉದ್ದೇಶದಿಂದ 3691 ಹೊಸ ಹುದ್ದೆಗಳನ್ನು ಸೃಷ್ಟಿಸಲು ಆದೇಶವನ್ನು ಹೊರಡಿಸಲಾಗಿದೆ. ಈ ಕಾರ್ಯಕ್ರಮವು ರಾಜ್ಯದ ಜನತೆಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..

ಮೇಲೆ ಕ್ರಮ ಸಂಖ್ಯೆ (1) ರಲ್ಲಿ ಓದಲಾದ ಆಯವ್ಯಯ ಭಾಷಣ ಕಂಡಿಕೆ-144 ರಲ್ಲಿ ರಾಜ್ಯದಲ್ಲಿ 108 ಅಂಬುಲೆನ್ಸ್‌ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ‘ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವ ಮೂಲಕ ‘ಆರೋಗ್ಯ ಕವಚ’ ಸೇವೆಯನ್ನು ಬಲಪಡಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ.


ಮೇಲೆ ಕ್ರಮ ಸಂಖ್ಯೆ (2) ರಲ್ಲಿ ಓದಲಾದ ಆದೇಶದಲ್ಲಿ ಈ ಆಯವ್ಯಯ ಘೋಷಣೆಯನ್ನು ಅನುಷ್ಠಾನಗೊಳಿಸಲು ರಾಜ್ಯದಲ್ಲಿ 108-ಆರೋಗ್ಯ ಕವಚ ಸೇವೆಯನ್ನು ಒಡಂಬಡಿಕೆಯ ಪಾಲುದಾರರಾದ GVK-EMRI ಸಂಸ್ಥೆ (ಪ್ರಸ್ತುತ EMRI GHS) ಸಂಸ್ಥೆಯಿಂದ ಹಿಂಪಡೆದು, ಈ ಸೇವೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲು ಸರ್ಕಾರದ ವತಿಯಿಂದ ರಾಜ್ಯ ಮಟ್ಟದಲ್ಲಿ 112 NG ERSS ತಂತ್ರಾಂಶವನ್ನು ಬಳಸಿಕೊಂಡು ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಅನ್ನು ಸ್ಥಾಪಿಸಲು ಹಾಗೂ ಜಿಲ್ಲಾಡಳಿತದ ಮುಖಾಂತರ ಅಂಬ್ಯುಲೆನ್ಸ್ ಗಳ ವಿಕೇಂದ್ರಿಕೃತವಾಗಿ ನಿರ್ವಹಣೆ ಮಾಡಲು ಹಾಗೂ ಈ ಯೋಜನೆಯನ್ನು 2025-26 ನೇ ಸಾಲಿನ ಅನುಮೋದಿತ ಅನುದಾನದ ಮಿತಿಯೊಳಗೆ ಅನುಷ್ಠಾನ ಮಾಡಲು ಹಾಗೂ ಯೋಜನೆಯ ಅನುಷ್ಠಾನಕ್ಕೆ ಅಗತ್ಯವಿರುವ ಮಾನವ ಸಂಪನ್ಮೂಲ ಪಡೆಯಲು ಪ್ರತ್ಯೇಕ ಪುಸ್ತಾವನೆ ಹಾಗೂ ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯ (Meity)ದಡಿಯಲ್ಲಿನ C-DAC ತಿರುವಂತಪುರಂ ಸಂಸ್ಥೆಯ ಜೊತೆ ಒಡಂಬಡಿಕೆಯನ್ನು ಮಾಡಿಕೊಂಡು 112 NG-ERSS ತಂತ್ರಾಂಶ ಬಳಸಿಕೊಂಡು ರಾಜ್ಯದಲ್ಲಿ 108-ಆರೋಗ್ಯ ಕವಚ ಹಾಗೂ 104-ಆರೋಗ್ಯ ಸಹಾಯವಾಣಿ ಕಾರ್ಯಕ್ರಮಗಳ ಕೇಂದ್ರೀಕೃತ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟನ್ನು ಐದು ವರ್ಷಗಳ ಅವಧಿಗೆ ಸ್ಥಾಪಿಸಲು ಕೆಟಿಪಿಪಿ ಕಾಯ್ದೆ ಕಲಂ 4(g) ವಿನಾಯಿತಿಗೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲು ಆದೇಶಿಸಲಾಗಿದೆ. ಮುಂದುವರೆದು ಯೋಜನೆಯ ಅನುಷ್ಠಾನಕ್ಕೆ ವಿವರವಾದ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆಯಲು ಆದೇಶಿಸಲಾಗಿದೆ.

WhatsApp Image 2025 10 10 at 11.46.20 AM
WhatsApp Image 2025 10 10 at 11.46.20 AM 1
WhatsApp Image 2025 10 10 at 11.46.21 AM
WhatsApp Image 2025 10 10 at 11.46.21 AM 1
WhatsApp Image 2025 10 10 at 11.46.21 AM 2
WhatsApp Image 2025 10 10 at 11.46.22 AM
WhatsApp Image 2025 10 10 at 11.46.22 AM 1
WhatsApp Image 2025 10 10 at 11.46.22 AM 2
WhatsApp Image 2025 10 10 at 11.46.22 AM 3
WhatsApp Image 2025 09 05 at 11.51.16 AM 12

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories