WhatsApp Image 2025 10 11 at 2.33.59 PM

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ 348 ಹುದ್ದೆಗಳು: ಪದವೀಧರರಿಗೆ ಬಂಪರ್ ಅವಕಾಶ.!

Categories:
WhatsApp Group Telegram Group

ಭಾರತೀಯ ಅಂಚೆ (India Post) ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಒಂದು ವಿಶ್ವಾಸಾರ್ಹ ಸಂಸ್ಥೆಯಾಗಿದೆ. ಇತ್ತೀಚಿನ ದಿನಗಳಲ್ಲಿ, ಇದು ಕೇವಲ ಪತ್ರ ವ್ಯವಹಾರಕ್ಕೆ ಸೀಮಿತವಾಗಿರದೇ, ಬ್ಯಾಂಕಿಂಗ್ ಸೇವೆಗಳನ್ನು ಕೂಡ ಯಶಸ್ವಿಯಾಗಿ ನೀಡುತ್ತಿದೆ. ಇದೀಗ ಭಾರತೀಯ ಅಂಚೆಯ ಅಂಗಸಂಸ್ಥೆಯಾದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಒಟ್ಟು 348 ಕಾರ್ಯನಿರ್ವಾಹಕ (Executive) ಹುದ್ದೆಗಳ (ಗ್ರಾಮೀಣ ಡಾಕ್ ಸೇವಕ್) ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು (India Post IPPB GDS Executive Recruitment 2025) ಪ್ರಕಟಿಸಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸರ್ಕಾರಿ ಕೆಲಸ ಪಡೆಯಬಹುದು.

ಹುದ್ದೆಗಳ ಪ್ರಮುಖ ವಿವರಗಳು:

ನೇಮಕಾತಿ ಸಂಸ್ಥೆ: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB)

ಒಟ್ಟು ಹುದ್ದೆಗಳು: 348

ಹುದ್ದೆಯ ಹೆಸರು: ಕಾರ್ಯನಿರ್ವಾಹಕ (ಗ್ರಾಮೀಣ ಡಾಕ್ ಸೇವಕ್)

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 29, 2025

ಈ ಹುದ್ದೆಗಳನ್ನು ದೇಶಾದ್ಯಂತ ಇರುವ ಅಂಚೆ ಕಚೇರಿಗಳಲ್ಲಿ ಭರ್ತಿ ಮಾಡಲಾಗುತ್ತಿದ್ದು, ಕರ್ನಾಟಕ ರಾಜ್ಯದಲ್ಲಿಯೂ 19 ಹುದ್ದೆಗಳು ಲಭ್ಯವಿವೆ.

ವಿದ್ಯಾರ್ಹತೆ ಮತ್ತು ವಯಸ್ಸಿನ ಮಿತಿ:

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ (ಡಿಗ್ರಿ) ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಸಂಬಳ ಮತ್ತು ಅರ್ಜಿ ಶುಲ್ಕ:

ನೇಮಕಾತಿ ಆದ ಅಭ್ಯರ್ಥಿಗಳಿಗೆ ಮಾಸಿಕವಾಗಿ ₹30,000/- ರೂಪಾಯಿಗಳ ಆಕರ್ಷಕ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಶುಲ್ಕವು ₹750/- ರೂಪಾಯಿಗಳು.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೊದಲು https://ibpsonline.ibps.in/ippblaug25/ ಎಂಬ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಲಭ್ಯವಿರುವ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು, ಆನ್‌ಲೈನ್ ಅರ್ಜಿ ನಮೂನೆಯನ್ನು ತುಂಬಬೇಕು. ಅಗತ್ಯವಿರುವ ಎಲ್ಲ ದಾಖಲೆಗಳೊಂದಿಗೆ ಶುಲ್ಕ ಪಾವತಿಸಿ ಅರ್ಜಿಗಳನ್ನು ಸಲ್ಲಿಸಬಹುದು.

WhatsApp Image 2025 09 05 at 10.22.29 AM 22
ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories