ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಮಿಷನ್ (PM-ABHIM) ಯೋಜನೆಯ ಅಡಿಯಲ್ಲಿ ನಿರ್ಮಾಣಗೊಂಡಿರುವ 5 ನಿರ್ಣಾಯಕ ಆರೈಕೆ ಘಟಕಗಳ (Critical Care Blocks) ಕಾರ್ಯನಿರ್ವಹಣೆಗೆ ಅಗತ್ಯವಿರುವ ಒಟ್ಟು 168 ಹುದ್ದೆಗಳ ನೇಮಕಾತಿಗೆ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅನುಮೋದನೆ ನೀಡಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..
ಈ ನಿರ್ಣಾಯಕ ಆರೈಕೆ ಘಟಕಗಳು ವಿಜಯಪುರ (100 ಹಾಸಿಗೆ ಸಾಮರ್ಥ್ಯ), ತುಮಕೂರು (100 ಹಾಸಿಗೆ), ಕೋಲಾರ (50 ಹಾಸಿಗೆ), ಉಡುಪಿ (50 ಹಾಸಿಗೆ) ಮತ್ತು ಬೆಂಗಳೂರಿನ ಸಿ.ವಿ.ರಾಮನ್ ಆಸ್ಪತ್ರೆ (100 ಹಾಸಿಗೆ)ಗಳಲ್ಲಿ ಸ್ಥಾಪಿತಗೊಂಡಿವೆ. ಈ ಘಟಕಗಳನ್ನು ಸಮರ್ಥವಾಗಿ ನಿರ್ವಹಿಸಲು ಮತ್ತು ರೋಗಿಗಳಿಗೆ ಉತ್ತಮ ಆರೈಕೆಯನ್ನು ಒದಗಿಸಲು ಈ ಸಿಬ್ಬಂದಿಗಳ ನಿಯೋಜನೆ ಅತ್ಯಗತ್ಯವಾಗಿದೆ.
ಆರೋಗ್ಯ ಇಲಾಖೆಯು ಒಟ್ಟು 8 ವಿಭಾಗಗಳಿಗೆ ಸಂಬಂಧಿಸಿದಂತೆ ಸಿಬ್ಬಂದಿ ನೇಮಕಕ್ಕೆ ಸಮ್ಮತಿ ಸೂಚಿಸಿದೆ. ನೇಮಕಾತಿಗೆ ಒಳಪಡುವ ಹುದ್ದೆಗಳಲ್ಲಿ ಶಸ್ತ್ರಚಿಕಿತ್ಸಕರು (Surgeons), ಫಿಜಿಷಿಯನ್ಗಳು (Physicians), ವಿಕಿರಣಶಾಸ್ತ್ರಜ್ಞರು (Radiologists), ಶುಶೂಷಕರು (Nurses), ಮತ್ತು ಗ್ರೂಪ್-ಡಿ ದರ್ಜೆಯ ನೌಕರರು ಸೇರಿ ಒಟ್ಟಾರೆಯಾಗಿ 168 ಸಿಬ್ಬಂದಿಗಳ ನೇಮಕ ನಡೆಯಲಿದೆ.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Kavitha holds a Master’s degree in Computer Applications (MCA) and has a deep interest in technology. Leveraging her academic background, she writes articles on science and technology, simplifying complex technical topics for general readers. Her work focuses on making cutting-edge advancements in tech accessible and engaging.


WhatsApp Group




