ರಾಜ್ಯದಲ್ಲಿ ಅಡಿಕೆ ಬೆಲೆಯು ಭರ್ಜರಿ ಏರಿಕೆ ಕಂಡಿದ್ದು, ಅಕ್ಟೋಬರ್ ತಿಂಗಳ ಮೂರನೇ ವಾರದ ಆರಂಭಕ್ಕೂ ಮುನ್ನವೇ ದಾಖಲೆಯ ಮಟ್ಟಕ್ಕೆ ತಲುಪಿದೆ. ನಿರೀಕ್ಷೆಗೂ ಮೀರಿ ದರ ಹೆಚ್ಚಳವಾಗಿರುವುದು ಅಡಿಕೆ ಬೆಳೆಗಾರರಲ್ಲಿ ಸಂತಸ ತಂದಿದೆ.ಈ ಕುರಿತು ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯಾದ್ಯಂತ ಅಡಿಕೆ ಧಾರಣೆಯಲ್ಲಿ ಗಣನೀಯ ಏರಿಕೆ ದಾಖಲಾಗಿದೆ. ದಾವಣಗೆರೆ ಜಿಲ್ಲೆಯ ಪ್ರಮುಖ ಅಡಿಕೆ ಬೆಳೆಯುವ ಪ್ರದೇಶಗಳಾದ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕುಗಳಲ್ಲಿ ಬೆಳೆಯುವ ಈ ವಾಣಿಜ್ಯ ಬೆಳೆಗೆ ಈಗ ಬಂಪರ್ ಬೆಲೆ ಸಿಕ್ಕಿದೆ.
ದಾವಣಗೆರೆ ಮಾರುಕಟ್ಟೆಯಲ್ಲಿ ಅಕ್ಟೋಬರ್ 14 ರ ದರ ವಿವರ ಇಲ್ಲಿದೆ:
ದಾವಣಗೆರೆ ಜಿಲ್ಲೆಯ ಮಾರುಕಟ್ಟೆಯಲ್ಲಿ ಇಂದು (ಅಕ್ಟೋಬರ್ 14) ಕ್ವಿಂಟಾಲ್ ರಾಶಿ ಅಡಿಕೆಯ ದರದಲ್ಲಿ ಏರಿಕೆ ಕಂಡುಬಂದಿದೆ.
ಗರಿಷ್ಠ ದರ: 66,629 ರೂಪಾಯಿ
ಕನಿಷ್ಠ ದರ: 62,612 ರೂಪಾಯಿ
ಸರಾಸರಿ ಬೆಲೆ: 65,506 ರೂಪಾಯಿ
ಕಳೆದ ಕೆಲವು ತಿಂಗಳುಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿದ್ದ ದರವು ಏರಿಳಿತಗಳನ್ನು ಕಂಡ ನಂತರ ಈಗ ಮತ್ತೆ ಗಣನೀಯ ಏರಿಕೆಯ ಹಾದಿಯಲ್ಲಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್ ಅಡಿಕೆ ದರ, ಫೆಬ್ರವರಿಯಲ್ಲಿ 53,000 ರೂಪಾಯಿ ಗಡಿ ದಾಟಿತ್ತು. ಅಲ್ಲಿಂದ ಸತತವಾಗಿ ಏರುತ್ತಾ ಬಂದು, ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿಯನ್ನು ಮೀರಿತು. ಇದೀಗ ಅಕ್ಟೋಬರ್ ಮೂರನೇ ವಾರದ ಆರಂಭಕ್ಕೆ 67,000 ರೂಪಾಯಿಯ ಸನಿಹಕ್ಕೆ ಬಂದಿದೆ. ಸದ್ಯದಲ್ಲೇ 70,000 ರೂಪಾಯಿ ಮುಟ್ಟಿದರೂ ಆಶ್ಚರ್ಯವಿಲ್ಲ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಿದ್ದಾರೆ.
ಮೇ ತಿಂಗಳ ಆರಂಭದಿಂದ ಜೂನ್‌ವರೆಗೆ ಅಲ್ಪ ಇಳಿಕೆ ಕಂಡಿದ್ದ ದರ, ಮತ್ತೆ ಏರಿಕೆಯತ್ತ ಸಾಗಿತ್ತು. 2023ರ ಜುಲೈನಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು ಮತ್ತು 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ನಂತರ ಆಗಸ್ಟ್‌ನಲ್ಲಿ ಧಾರಣೆಯಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಿತ್ತು. ಸೆಪ್ಟೆಂಬರ್ ಅಂತ್ಯದಿಂದ ಮತ್ತೆ ಏರಿಕೆಯತ್ತ ಮುಖಮಾಡಿದ ಬೆಲೆ, ಅಕ್ಟೋಬರ್ ಎರಡನೇ ವಾರದವರೆಗೂ ಸತತವಾಗಿ ಏರುತ್ತಾ ಬಂದಿದೆ. 2025ರ ಮುಂಗಾರು ಮಳೆಯಿಂದಾಗಿ ಉತ್ತಮ ಫಸಲು ಬಂದಿದ್ದು, ಸದ್ಯದ ಏರುಗತಿಯ ದರವು ಮುಂದಿನ ದಿನಗಳಲ್ಲಿ ಮತ್ತಷ್ಟು ಭಾರೀ ಏರಿಕೆಯಾಗುವ ಭರವಸೆಯನ್ನು ಅಡಿಕೆ ಬೆಳೆಗಾರರು ಹೊಂದಿದ್ದಾರೆ.

ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ತುಮಕೂರಿನ ಸರ್ಕಾರಿ ನರ್ಸಿಂಗ್ ಕಾಲೇಜಿನಿಂದ B.Sc (Nursing) ಪದವಿ ಪಡೆದಿರುವ ಇವರು, ಸಾರ್ವಜನಿಕ ಜಾಗೃತಿ ಮತ್ತು ಮಾಹಿತಿ ನೀಡುವ ಆಸಕ್ತಿಯಿಂದಾಗಿ ಡಿಜಿಟಲ್ ಪತ್ರಿಕೋದ್ಯಮ ಕ್ಷೇತ್ರವನ್ನು ಆಯ್ದುಕೊಂಡಿದ್ದಾರೆ. ಡಿಜಿಟಲ್ ಮಾಧ್ಯಮ ರಂಗದಲ್ಲಿ 3 ವರ್ಷಗಳ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ನೇಮಕಾತಿಗಳು ಮತ್ತು ಶೈಕ್ಷಣಿಕ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ನಿರುದ್ಯೋಗಿ ಯುವಕ-ಯುವತಿಯರಿಗೆ ಯಾವುದೇ ಗೊಂದಲವಿಲ್ಲದೆ, ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (Verified) ನಿಖರ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದೇ ಇವರ ಬರವಣಿಗೆಯ ಶೈಲಿಯಾಗಿದೆ.


WhatsApp Group




Leave a Reply