ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಸಿಹಿ ಸುದ್ದಿಯನ್ನು ತಂದಿದೆ. ರಾಜ್ಯ ಸರ್ಕಾರವು ತುಟ್ಟಿಭತ್ಯೆ (ಡಿಎ) ದರವನ್ನು ಶೇಕಡ 12.25ರಿಂದ ಶೇಕಡ 14.25ಕ್ಕೆ ಹೆಚ್ಚಿಸಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಆದೇಶವು 2025ರ ಜುಲೈ 1ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸರ್ಕಾರಿ ನೌಕರರು, ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು ಮತ್ತು ಸರ್ಕಾರದಿಂದ ಸಹಾಯಧನ ಪಡೆಯುವ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ಇದರ ಪ್ರಯೋಜನ ಸಿಗಲಿದೆ. ಈ ಲೇಖನವು ಈ ಆದೇಶದ ಸಂಪೂರ್ಣ ವಿವರಗಳನ್ನು, ಅದರ ಅನ್ವಯವಾಗುವ ವಿಭಾಗಗಳನ್ನು ಮತ್ತು ಇತರ ಸಂಬಂಧಿತ ಮಾಹಿತಿಯನ್ನು ಒದಗಿಸುತ್ತದೆ ಸರ್ಕಾರದ ಅಧಿಕೃತ ಸುತ್ತೋಲೆಗಳು ಲೇಖನದ ಕೊನೆಯ ಭಾಗದಲ್ಲಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ..
ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ” ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ,
(ಅ) 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,
(ಆ) 2024ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ,
(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.
3. ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.
ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 12.25 ರಿಂದ ಶೇಕಡ 14.25 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
5. ತುಟ್ಟಿ ಭತ್ಯೆಯ ಮಂಜೂರಾತಿಯ ಉದ್ದೇಶಕ್ಕಾಗಿ ಕ.ನಾ.ಸೇ(ಪ.ವೇ) ನಿಯಮಗಳು, 2024ರ ನಿಯಮ 3ರಲ್ಲಿ ಸೂಚಿಸಿರುವ ಮತ್ತು ಸದರಿ ನಿಯಮದಡಿ ಹೊರಡಿಸಿರುವ ಆದೇಶಗಳಲ್ಲಿ ಸೂಚಿಸಿರುವ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನವನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.
6. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರುಗಳಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ.
7. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
8. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಗಳ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು.
9. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿ ಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು.
10.ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.
11. ತುಟ್ಟಿ ಭತ್ಯೆ ಬಾಕಿ ಮೊತ್ತವನ್ನು, 2025ರ ಅಕ್ಟೋಬರ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.
12. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.



ಈ ಮಾಹಿತಿಗಳನ್ನು ಓದಿ
- ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ ಸರ್ಕಾರದಿಂದ ಬಿಗ್ ಅಪ್ಡೇಟ್
- ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆಗೊಳಿಸಲು ಸರ್ಕಾರಕ್ಕೆ ಮನವಿ
- ನೌಕರರು ಮತ್ತು ಪಿಂಚಣಿದಾರರಿಗೆ 3% ತುಟ್ಟಿಭತ್ಯೆ (DA Hike) ಏರಿಕೆ, ದೀಪಾವಳಿಗೆ ಸಿಹಿ ಸುದ್ದಿ.!
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.


WhatsApp Group




