ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಮಹಿಳೆಯಾರಿಗಾಗಿ ಲಭ್ಯವಿರುವ ಕೆಲವೊಂದು ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತದೆ. ಆ ಯೋಜನೆಗಳು ಯಾವವು ಮತ್ತು ಆಯಾ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಪಡೆಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಮಹಿಳೆಯರಿಗೆ ಎಂದೇ ಇದೆ ಇಷ್ಟೊಂದು ಯೋಚನೆಗಳು :
ಭಾರತ ಸರ್ಕಾರವು ಮಹಿಳೆಯರ ಮೇಲೆ ಕೇಂದ್ರೀಕರಿಸುವ ಹಲವಾರು ಯೋಜನೆಗಳನ್ನು ಪರಿಚಯಿಸಿದೆ ಮತ್ತು ಅವರಿಗೆ ಸರಿಯಾದ ಸಾಮಾಜಿಕ ಘನತೆಯನ್ನು ಒದಗಿಸುವ ಮತ್ತು ಸಂಪಾದನೆ ಮಾಡುವ ಮಾರ್ಗಗಳನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಮಹಿಳೆಯರು ಅಂಚೆ ಕಚೇರಿ (post office scheme) ಮತ್ತು ಬ್ಯಾಂಕ್ ಗಳಲ್ಲಿ ( Banks) ಲಭ್ಯವಿರುವ, ಕೇಂದ್ರ ಸರ್ಕಾರದ ಪ್ರಮುಖ ಉಳಿತಾಯ (Saving) ಯೋಜನೆಗಳಾದ PPF, ಮಹಿಳಾ ಸಮ್ಮಾನ್ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ ಹಾಗೂ ಇನ್ನು ಮುಂತಾದ ಯೋಜನೆಗಳಲ್ಲಿ ಹೂಡಿಕೆ( Investment) ಮಾಡಿ ಅತೀ ಹೆಚ್ಚು ಲಾಭವನ್ನು ಗಳಿಸಬಹುದು.
ಈ ಯೋಜನೆಗಳ ಉದ್ದೇಶವು ಸರಳವಾಗಿದೆ, ಅದು ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳುವುದು.
ಮಹಿಳೆಯರು ಈ ಯೋಜನೆಗಳ ತಿಳಿದುಕೊಂಡು ಮತ್ತು ಅದರ ಸದುಪಯೋಗವನ್ನು ಪಡೆದುಕೊಂಡರೆ ಅವರು ಸ್ವಲಂಭಿಯಾಗಿ ತಮ್ಮ ಜೀವನವನ್ನು ಸಾಗಿಸಬಹುದು.
ಸಾರ್ವಜನಿಕ ಭವಿಷ್ಯ ನಿಧಿ
ಸಾರ್ವಜನಿಕ ಭವಿಷ್ಯ ನಿಧಿ (PPF) ಕೇಂದ್ರ ಸರ್ಕಾರದಿಂದ ಬೆಂಬಲಿತವಾದ ತೆರಿಗೆಮುಕ್ತ
(Tax- free) ಉಳಿತಾಯ ಯೋಜನೆಗಳಲ್ಲಿ ಪ್ರಮುಖವಾದದ್ದು. ಪಬ್ಲಿಕ್ ಪ್ರಾವಿಡೆಂಟ್ ಫಂಡ್ ಮೇಲಿನ ಬಡ್ಡಿ ದರ 7.1% ಆಗಿದೆ. PPF ಖಾತೆಯಲ್ಲಿ ವಾರ್ಷಿಕ ಕನಿಷ್ಠ 500 ರೂ. ನಿಂದ ಗರಿಷ್ಠ 1.5 ಲಕ್ಷ ರೂಪಾಯಿವರೆಗೆ ಠೇವಣಿ ಮಾಡಬಹುದು.
ಮಹಿಳಾ ಉಳಿತಾಯ ಯೋಜನೆ (MSSC):
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, 2023ರಂದು ಹಣಕಾಸು ವರ್ಷ 2023-24ರ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ. ಈ ಯೋಜನೆಯನ್ನು ಮಹಿಳೆಯರಿಗೆ ಹಣ ಉಳಿತಾಯ ಮಾಡಲು ಪ್ರೋತ್ಸಾಹ ನೀಡಲು, ಮಹಿಳಾ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಆರಂಭ ಮಾಡಲಾಗಿದೆ. ನೀವು 1000 ರೂಪಾಯಿಯನ್ನು ಕನಿಷ್ಠವಾಗಿ ಹೂಡಿಕೆ ಮತ್ತು 2 ಲಕ್ಷ ಗರಿಷ್ಠವಾಗಿ ಹೂಡಿಕೆಯನ್ನು ಮಾಡಬಹುದು.
ರಾಷ್ಟ್ರೀಯ ಉಳಿತಾಯ ಯೋಜನೆ :
ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (NSC) ಒಂದು ಜನಪ್ರಿಯ ಮತ್ತು ಸುರಕ್ಷಿತ ಸಣ್ಣ ಉಳಿತಾಯ ಸಾಧನವಾಗಿದ್ದು, ಇದು ತೆರಿಗೆ ಉಳಿತಾಯವನ್ನು ಖಾತರಿಪಡಿಸಿದ ಆದಾಯದೊಂದಿಗೆ ಸಂಯೋಜಿಸುತ್ತದೆ. ಈ ಯೋಜನೆಯು ಸರ್ಕಾರದಿಂದ ಬೆಂಬಲಿತವಾಗಿದೆ ಮತ್ತು ಅಂಚೆ ಕಚೇರಿಗಳಲ್ಲಿ ಲಭ್ಯವಿದೆ.
ಐದು ವರ್ಷಗಳವರೆಗೆ ಮಹಿಳೆಯರು ಇದರಲ್ಲಿ ಹೂಡಿಕೆಯನ್ನು ಮಾಡಬಹುದು. ಈ ಯೋಜನೆಯಲ್ಲಿ ಕನಿಷ್ಠ 250 ರಿಂದ ಗರಿಷ್ಠ 1.5 ಲಕ್ಷ ರೂಪಾಯಿಗಳ ವರೆಗೂ ಹೂಡಿಕೆಯನ್ನು ಮಾಡಬಹುದು ಮತ್ತು 7.7% ರಷ್ಟು ಬಡ್ಡಿ ಯನ್ನು ನೀಡಲಾಗುತ್ತದೆ.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಟೈಮ್ ಠೇವಣಿ :
ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಅಕೌಂಟ್ (ಪಿಒಟಿಡಿ) ಅನ್ನು ರಾಷ್ಟ್ರೀಯ ಉಳಿತಾಯ ಸಮಯದ ಠೇವಣಿ ಖಾತೆ ಎಂದೂ ಕರೆಯುತ್ತಾರೆ.
ಇದು ಇಂಡಿಯಾ ಪೋಸ್ಟ್ ( India post) ನೀಡುವ ಅತ್ಯಂತ ಪ್ರಸಿದ್ಧ ಹೂಡಿಕೆ ಯೋಜನೆಗಳಲ್ಲಿ ಒಂದಾಗಿದೆ.
ಇದರಲ್ಲಿ ಮಹಿಳೆಯರು ಠೇವಣಿ ಮಾಡಿದರೆ ಅವರು 7.5% ವರೆಗೆ ಬಡ್ಡಿ ಪಡೆಯುತ್ತಾರೆ. ಮಹಿಳೆಯರು ಆರ್ಥಿಕ ಸಬಲೀಕರಣಕ್ಕಾಗಿ ಒಂದು ಉತ್ತಮ ಉಳಿತಾಯ ಯೋಜನೆ ಎಂದು ಹೇಳಬಹುದು.
ಈ ಮೇಲಿನ ಯೋಜನೆಗಳ ಪ್ರಯೋಜನೆಯನ್ನು ಪಡೆದು ಮಹಿಳೆಯರು ಸ್ವಲಂಭಿಯಾಗಿ ಬದುಕಬಹುದು ಮತ್ತು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳುವುದು. ಇಂತಹ ಉತ್ತಮ ಹಾಗೂ ಉಪಯುಕ್ತ ಮಾಹಿತಿಯನ್ನು ತಿಳಿಸಿಕೊಡುವ ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತರಲ್ಲಿ ಮತ್ತು ಬಂಧು- ಭಾಂದವರಲ್ಲಿ ಶೇರ್ ಮಾಡಲು ಮರಿಯಬೇಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Lingaraj Ramapur BCA, MCA, MA ( Journalism );
as Editor-in-Chief of NEEDS OF PUBLIC Media, leads a team of journalists, sets editorial standards, and ensures accurate, credible, and timely content. His leadership upholds the company as a trusted information source, meeting public needs while maintaining top-tier journalistic integrity.


WhatsApp Group







