ಸರ್ಕಾರಿ ಶಾಲೆಗಳಲ್ಲಿ (Government School) ಸೇವೆ ಸಲ್ಲಿಸಲು ಕಾಯುತ್ತಿರುವ ಶಿಕ್ಷಕ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಂತೋಷದ ಸುದ್ದಿ ಬಂದಿದೆ. ಕರ್ನಾಟಕ ರಾಜ್ಯಾದ್ಯಂತ 26,000 ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಗೆ, ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (TET) ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ
ಶೀಘ್ರದಲ್ಲೇ ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿ ಕುರಿತ ಆದೇಶವನ್ನೂ ಸರ್ಕಾರ ಹೊರಡಿಸಲಿದೆ. ರಾಜ್ಯದಲ್ಲಿ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (KPS) ಆರಂಭಿಸಲಾಗುವುದು. 6ನೇ ತರಗತಿಯಿಂದ ಕನ್ನಡದ ಜೊತೆಗೆ ಇಂಗ್ಲಿಷ್ ಕಲಿಕೆಗೂ ಅವಕಾಶ ಇರಲಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು.
ನವೆಂಬರ್ ಎರಡನೇ ವಾರದಲ್ಲಿ ಮುಖ್ಯಮಂತ್ರಿಗಳು ಇದಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಕೃತಕ ಬುದ್ಧಿಮತ್ತೆ (AI) ಆಧಾರಿತ ಶಿಕ್ಷಣ ನೀಡಬೇಕು ಎಂದು ರಾಹುಲ್ ಗಾಂಧಿಯವರು ಸಲಹೆ ನೀಡಿದ್ದಾರೆ. ಅದರಂತೆ, ಈಗ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಕಲಿಸಲಾಗುತ್ತದೆ. ಅಲ್ಲದೆ, 6ನೇ ತರಗತಿಯಿಂದಲೇ ‘ಸ್ಕಿಲ್ ಸ್ಕೂಲ್’ (ಕೌಶಲ್ಯ ಶಾಲೆ) ಪ್ರಾರಂಭಿಸಲಾಗುವುದು ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದರು.
ಜಾತಿ ಸಮೀಕ್ಷೆಯ ಮಾಹಿತಿ
ರಾಜ್ಯದಲ್ಲಿ ಜಾತಿ ಸಮೀಕ್ಷೆಯು ಶೇಕಡಾ 90.12 ರಷ್ಟು ಪೂರ್ಣಗೊಂಡಿದೆ. ಈ ಸಮೀಕ್ಷೆಯು ಅತ್ಯಗತ್ಯವಾಗಿದ್ದು, ಇದು ಬಜೆಟ್ ಸಿದ್ಧತೆಗೆ ಸಹಕಾರಿಯಾಗಲಿದೆ. ದೊಡ್ಡ ಉದ್ಯಮಿಗಳು ಕೂಡ ಇದಕ್ಕೆ ಸಹಕಾರ ನೀಡಬೇಕು ಎಂದು ಇನ್ಫೋಸಿಸ್ ಹೆಸರನ್ನು ನೇರವಾಗಿ ಬಳಸದೆ ಮನವಿ ಮಾಡಿದರು. ಸಮೀಕ್ಷೆಯಲ್ಲಿ ಎಲ್ಲರೂ ಪಾಲ್ಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 97ರಷ್ಟು ಸಮೀಕ್ಷೆ ಮುಕ್ತಾಯವಾಗಿದೆ ಎಂದು ಅವರು ತಿಳಿಸಿದರು.
ನಿನ್ನೆಯವರೆಗೆ ಶಿಕ್ಷಕರನ್ನು ಸಮೀಕ್ಷಾ ಕಾರ್ಯಕ್ಕೆ ಬಳಸುವುದನ್ನು ನಿಲ್ಲಿಸಲಾಗಿದೆ. ಕೆಲವರು ಮತದಾನದಲ್ಲಿ ಭಾಗವಹಿಸುವುದಿಲ್ಲ, ಆದರೆ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಮಾತ್ರ ಕೇಳುತ್ತಾರೆ. ಇಂತಹವರು ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟರು.

















ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

“ಕೃಷ್ಣಸಾಗರಿ ಅವರು NeedsOfPublic.in ನ ‘ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ’ (Job Updates & Career) ವಿಭಾಗದ ಮುಖ್ಯಸ್ಥರಾಗಿದ್ದಾರೆ. ಉದ್ಯೋಗ ಮಾಹಿತಿ ಕ್ಷೇತ್ರದಲ್ಲಿ 4 ವರ್ಷಗಳ ವೃತ್ತಿಪರ ಅನುಭವ ಹೊಂದಿರುವ ಇವರು, ಸರ್ಕಾರಿ ಉದ್ಯೋಗದ ಅಧಿಸೂಚನೆಗಳು (Govt Job Notifications), ಖಾಸಗಿ ವಲಯದ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಪ್ಡೇಟ್ಗಳನ್ನು ಒದಗಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಉದ್ಯೋಗಾಕಾಂಕ್ಷಿಗಳಿಗೆ ಕೇವಲ ಅಧಿಕೃತ ಮೂಲಗಳಿಂದ ಪರಿಶೀಲಿಸಿದ (verified) ಮತ್ತು ನಿಖರವಾದ ಉದ್ಯೋಗದ ಮಾಹಿತಿಯನ್ನು ಸಕಾಲದಲ್ಲಿ ತಲುಪಿಸುವುದು ಸಾಗರಿ ಅವರ ಪ್ರಮುಖ ಗುರಿಯಾಗಿದೆ.”


WhatsApp Group




