Picsart 25 10 20 23 34 00 121 scaled

ಪ್ರತಿ ತಿಂಗಳು 5ನೇ ತಾರೀಖಿನೊಳಗೆ ವೇತನ ಪಾವತಿ ಕಡ್ಡಾಯ: ವಿಳಂಬ ಮಾಡಿದರೆ ಅಧಿಕಾರಿಗಳಿಗೆ ಶಿಸ್ತು ಕ್ರಮ

Categories:
WhatsApp Group Telegram Group

ರಾಜ್ಯಾದ್ಯಂತ ಸಾವಿರಾರು ಗ್ರಾಮ ಪಂಚಾಯಿತಿ ಸಿಬ್ಬಂದಿ ತಮ್ಮ ಶ್ರಮದಿಂದ ಗ್ರಾಮೀಣ ಅಭಿವೃದ್ಧಿಗೆ ಬುನಾದಿ ಹಾಕುತ್ತಿದ್ದಾರೆ. ಸ್ಥಳೀಯ ಆಡಳಿತ ವ್ಯವಸ್ಥೆಯ ನಡವಳಿಕೆಯಲ್ಲಿ ಇವರ ಪಾತ್ರ ಅತ್ಯಂತ ಪ್ರಮುಖವಾದದ್ದು. ರಸ್ತೆ, ವಿದ್ಯುತ್ ದೀಪಗಳು, ನೀರಿನ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಹಳ್ಳಿಗಳ ಮೂಲಭೂತ ಸೌಕರ್ಯಗಳ ನಿರ್ವಹಣೆ, ವಿವಿಧ ಸರ್ಕಾರೀ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕ ಸೇವೆಗಳಲ್ಲಿ ಈ ನೌಕರರು ಪ್ರಮುಖ ಪಾತ್ರವಹಿಸುತ್ತಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಗ್ರಾಮ ಪಂಚಾಯಿತಿ ನೌಕರರಿಗೆ ಸಮಯಕ್ಕೆ ಸರಿಯಾಗಿ ವೇತನ ಪಾವತಿ ಆಗದಿರುವುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿತ್ತು. ಅನೇಕ ಪಂಚಾಯಿತಿಗಳಲ್ಲಿ ವೇತನ ವಿಳಂಬದಿಂದ ಸಿಬ್ಬಂದಿಯಲ್ಲಿ ಅಸಮಾಧಾನ ಮೂಡಿದ್ದು, ಸರ್ಕಾರದ ಗಮನಕ್ಕೂ ವಿಷಯ ತಲುಪಿತ್ತು. ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ನೌಕರರಿಗೆ ಪ್ರತಿ ತಿಂಗಳು ವೇತನವನ್ನು ಸಮಯಕ್ಕೆ ಸರಿಯಾಗಿ ಪಾವತಿಸುವಂತೆ ಖಡಕ್ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಕುರಿತು ಅಧಿಕೃತ ಪತ್ರದ ಮೂಲಕ ಅದೇಶಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ವೇತನ ಪಾವತಿಗೆ ಹೊಸ ನಿಯಮ:

ಆದೇಶದ ಪ್ರಕಾರ, ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ನೌಕರರ ವೇತನವನ್ನು ಪ್ರತೀ ತಿಂಗಳು 5ನೇ ತಾರೀಖಿನೊಳಗಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
2018ರ ಮಾರ್ಚ್ 1ರಿಂದಲೇ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನ ಪಾವತಿಯನ್ನು ಸರ್ಕಾರದ ನಿಧಿಯ Electronic Fund Management System (E.F.M.S) ಮೂಲಕ ನೇರವಾಗಿ ಸಂಬಂಧಿತ ಪಂಚಾಯಿತಿಗಳಿಗೆ ಬಿಡುಗಡೆ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ. ಆದಾಗ್ಯೂ, ಕೆಲವು ಪಂಚಾಯಿತಿಗಳಲ್ಲಿ ಅನುದಾನ ಲಭ್ಯವಿದ್ದರೂ ವೇತನ ಪಾವತಿಯಲ್ಲಿ ವಿಳಂಬ ಆಗುತ್ತಿರುವ ಕುರಿತು ಸರ್ಕಾರಕ್ಕೆ ಹಲವಾರು ದೂರುಗಳು ಬಂದಿವೆ.

ವಿಳಂಬ ಮಾಡಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ:

ಆದೇಶದಲ್ಲಿ ಸ್ಪಷ್ಟವಾಗಿ ಹೇಳಿರುವಂತೆ, ಗ್ರಾಮ ಪಂಚಾಯಿತಿಗಳು ಯಾವುದೇ ಕಾರಣಕ್ಕೂ ವೇತನ ಪಾವತಿಯಲ್ಲಿ ವಿಳಂಬ ಮಾಡಬಾರದು. ಈ ಪತ್ರ ತಲುಪಿದ 2 ದಿನಗಳ ಒಳಗಾಗಿ ಎಲ್ಲ ಬಾಕಿ ವೇತನವನ್ನು ಪಾವತಿಸಿ, ಬಾಕಿ ಉಳಿಯದ ವರದಿಯನ್ನು ಆಯುಕ್ತಾಲಯಕ್ಕೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ನಿಯಮಿತವಾಗಿ ವೇತನ ಪಾವತಿಯಾಗದಿದ್ದರೆ ಸಂಬಂಧಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಮತ್ತು ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಮಾಸಿಕ ಮೇಲ್ವಿಚಾರಣೆ ಕಡ್ಡಾಯ:

ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಪ್ರತಿ ತಿಂಗಳು ತಮ್ಮ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ವೇತನ ಪಾವತಿ ನಿಯಮಿತವಾಗಿದೆಯೇ ಎಂದು ಮೇಲ್ವಿಚಾರಣೆ ನಡೆಸುವುದು ಕಡ್ಡಾಯವಾಗಿದೆ. ಯಾವುದೇ ಪಂಚಾಯಿತಿಯಲ್ಲಿ ತೊಂದರೆ ಅಥವಾ ವಿಳಂಬ ಕಂಡುಬಂದರೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.

ಒಟ್ಟಾರೆಯಾಗಿ, ಈ ಹೊಸ ಆದೇಶದೊಂದಿಗೆ ರಾಜ್ಯದ ಸಾವಿರಾರು ಗ್ರಾಮ ಪಂಚಾಯಿತಿ ನೌಕರರ ಜೀವನದಲ್ಲಿ ಸ್ಥಿರತೆ ತರಲು ಸರ್ಕಾರ ಹೆಜ್ಜೆ ಇಟ್ಟಿದೆ. ವೇತನದ ವಿಳಂಬದಿಂದ ಉಂಟಾಗುತ್ತಿದ್ದ ಆರ್ಥಿಕ ಒತ್ತಡ ಹಾಗೂ ಅಸಮಾಧಾನ ನಿವಾರಣೆಗೆ ಈ ಕ್ರಮ ನೆರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

WhatsApp Image 2025 09 05 at 11.51.16 AM 12

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Popular Categories